Headlines

ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಶೆಡ್‌, ಶೀಟ್‌ ಮನೆಗಳು ನೆಲಸಮ: ಸಿಡಿದೆದ್ದ ಸ್ಥಳೀಯರು

ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಶೆಡ್‌, ಶೀಟ್‌ ಮನೆಗಳು ನೆಲಸಮ: ಸಿಡಿದೆದ್ದ ಸ್ಥಳೀಯರು


ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಶೆಡ್‌, ಶೀಟ್‌ ಮನೆಗಳು ನೆಲಸಮ: ಸಿಡಿದೆದ್ದ ಸ್ಥಳೀಯರು

ಬೆಂಗಳೂರು, (ಡಿಸೆಂಬರ್ 21) : ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ ಕೋಗಿಲು ಬಂಡೆ ಬಳಿ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಸಂಸ್ಥೆಗೆ ಮೀಸಲಿಟ್ಟ ಜಾಗದಲ್ಲಿ ಅನಧಿಕೃತವಾಗಿ ನಿರ್ಮಿಸಿರುವ 150ಕ್ಕೂ ಅಧಿಕ ಶೆಡ್ ಹಾಗೂ ಶೀಟ್ ಮನೆಗಳನ್ನು ಶನಿವಾರ ಪ್ರಕಟಿಸಲಾಗಿದೆ. ಇನ್ಸಿನರೇಷನ್, ಎಳನೀರು ಬುರುಡೆ ಸಂಸ್ಕರಣ ಮತ್ತು ಸ್ಯಾನಿಟರಿ ತ್ಯಾಜ್ಯ ಸಂಸ್ಕರಣಾ ಸೌಲಭ್ಯಗಳನ್ನು ಕಾರ್ಯಗತಗೊಳಿಸಲು ಯೋಜಿಸಲಾಗಿದೆ. ಈ ಪ್ರದೇಶದಲ್ಲಿ ಸುಮಾರು 5 ಜಾಗವನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದಾರೆ ತಾತ್ಕಾಲಿಕ 150 ಕ್ಕೂ ಹೆಚ್ಚು ಶೆಡ್, ಮನೆಗಳನ್ನು 9 ಟ್ರ್ಯಾಕ್ಟರ್, 9 ಜೆಸಿಬಿ ಯಂತ್ರ ಬಳಸಿ ನೆಲಸಮಗೊಳಿಸಲಾಗಿದೆ.

ಇದರಿಂದ ರೊಚ್ಚಿಗೆದ್ದ ಸ್ಥಳೀಯರು ಯಾವುದೇ ನೋಟಿಸ್ ನೀಡಿದ ಏಕಾಏಕಿ ಬಂದು ಮನೆ ಕೆಡವಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ, ಇಂದು (ಡಿಸೆಂಬರ್ 21) ಸಹಕಾರ ನಗರ ಬಳಿ ಇರುವ ಶಾಸಕ ಕೃಷ್ಣಭೈರೇಗೌಡ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಮನೆ ಕಳೆದುಕೊಂಡ ನಿವಾಸಿಗಳಿಂದ ಸ್ಥಳೀಯ ಕೃಷ್ಣಬೈರೇಗೌಡ ಮನೆ ಬಳಿ ಜಮಾಯಿಸಿದ್ದು, ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟಿದ್ದಾರೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *