ಬೆಂಗಳೂರು, ಡಿಸೆಂಬರ್ 31: ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಅಕ್ರಮ ಕಟ್ಟಡಗಳ ಜಾಗಕ್ಕೆ ಬಿಜೆಪಿ ನಿಯೋಗ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಪ್ರತಿಪಕ್ಷ ನಾಯಕ ಆರ್ ಅಶೋಕ್, ಛಲವಾದಿ ನಾರಾಯಣ ಸ್ವಾಮಿ, ಅಶ್ವಥ್ ನಾರಾಯಣ ಸೇರಿದಂತೆ ಬಿಜೆಪಿ ನಿಯೋಗ ಕೋಗಿಲು ಪ್ರದೇಶದಲ್ಲಿ ವಾಸವಿದ್ದ ನಿರಾಶ್ರಿತರ ಬಳಿ ಮಾತುಕತೆ ನಡೆಸಿದಾಗ ಅಧಿಕಾರಿಗಳು ಮಾಹಿತಿ ನೀಡಿದರು.
ಸ್ಥಳದಲ್ಲಿದ್ದ ಮುಸ್ಲಿಂ ಮಹಿಳೆಯರ ಜೊತೆ ಬಿಜೆಪಿ ನಿಯೋಗ ಮಾತುಕತೆ ನಡೆಸಿದಾಗ, ಅವರು ಅಸಲಿಗೆ ಸ್ಥಳೀಯ ನಿವಾಸಿಗಳೇ ಎಂಬ ಪ್ರಶ್ನೆ ಮೂಡುವಂತಾಯಿತು. ತಾವು ಸುಮಾರು 25 ವರ್ಷಗಳಿಂದ ಇಲ್ಲಿ ವಾಸವಿದ್ದೇವೆ ಎಂದು ಮುಸ್ಲಿಂ ಮಹಿಳೆ ಹೇಳಿದ್ದಾರೆ. ಆದರೆ ಅವರಿಗೆ ಕನ್ನಡ ಮಾತನಾಡಲು ಬಂದಿಲ್ಲ. ಇಷ್ಟು ವರ್ಷಗಳಿಂದ ಇಲ್ಲಿ ವಾಸವಾಗಿದ್ದರೂ ಕನ್ನಡ ಬರುವುದಿಲ್ಲವೇ ಎಂದು ಅಶೋಕ್ ಪ್ರಶ್ನಿಸಿದರು. ಎಲ್ಲಿಂದ ಬಂದವರು ಎಂಬ ಪ್ರಶ್ನೆಗೆ, ಆಂಧ್ರದಿಂದ ಬಂದವರು ಎಂದು ಮಹಿಳೆ ಉತ್ತರಿಸಿದ್ದಾರೆ. ಆದರೆ ಆಕೆಗೆ ತೆಲುಗು ಭಾಷೆ ಕೂಡ ಬಾರದೆ ಇರುವುದು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.
ಇನ್ನು ಸ್ಥಳದಲ್ಲಿದ್ದ ಮುಸ್ಲಿಂ ದಂಪತಿಯ ಆಧಾರ್ ಕಾರ್ಡ್ ನೋಡಿದ ಬಿಜೆಪಿ ನಾಯಕರು ಶಾಕ್ ಆಗಿದ್ದಾರೆ. ಆಧಾರ್ ಕಾರ್ಡ್ ಮಾಡಿಕೊಡುವಲ್ಲಿ ಅಕ್ರಮ ನಡೆದಿದೆಯಾ ಎಂಬ ಅನುಮಾನವೇ ವ್ಯಕ್ತಪಡಿಸಿದ್ದಾರೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ