ಕೋಲಾರ: ಹೋಟೆಲ್​, ಬೇಕರಿಗಳಲ್ಲಿ ಅಕ್ರಮವಾಗಿ ಬಳಕೆ ಮಾಡುತ್ತಿದ್ದ 21 ಗೃಹಬಳಕೆ ಸಿಲಿಂಡರ್​ ವಶಕ್ಕೆ

ಕೋಲಾರ: ಹೋಟೆಲ್​, ಬೇಕರಿಗಳಲ್ಲಿ ಅಕ್ರಮವಾಗಿ ಬಳಕೆ ಮಾಡುತ್ತಿದ್ದ 21 ಗೃಹಬಳಕೆ ಸಿಲಿಂಡರ್​ ವಶಕ್ಕೆ


ಕೋಲಾರ: ಹೋಟೆಲ್, ಬೇಕರಿಗಳಲ್ಲಿ ಅಕ್ರಮವಾಗಿ ಬಳಕೆ ಮಾಡುತ್ತಿರುವ 21 ಗೃಹಬಳಕೆ ಸಿಲಿಂಡರ್ ವಶಕ್ಕೆ

ಕೋಲಾರ, ಮಾರ್ಚ್ 15: ಗ್ಯಾಸ್ ಸಿಲಿಂಡರ್ (LPG ಸಿಲಿಂಡರ್) ಹೊಡೆತಕ್ಕೆ ಕೇವಲ ಉದ್ಯಮಗಳು, ಜನಸಾಮಾನ್ಯರು ಕೂಡ ತತ್ತರಿಸಿ ಹೋಗಿದ್ದಾರೆ. ಖಾಲಿ ಗ್ಯಾಸ್ ಹಿಡಿದು ಜನರು ಏಜೆನ್ಸಿಗಳ ಮುಂದೆ ಜಮಾಯಿಸುತ್ತಿದ್ದಾರೆ. ಕಾಳಸಂತೆಯಲ್ಲಿ ಸಿಲಿಂಡರ್‌ಗಳನ್ನು ಪೂರೈಸಲಾಗುತ್ತಿದೆ ಎಂಬ ದೂರುಗಳು ಕೇಳಿಬಂದಿವೆ. ಈ ಮಧ್ಯೆ ನಗದರಲ್ಲಿ ಹೋಟೆಲ್, ಬೇಕರಿಗಳಲ್ಲಿ ಅಕ್ರಮವಾಗಿ ಬಳಕೆ ಮಾಡುತ್ತಿರುವ 21 ಗೃಹಬಳಕೆಯ ಸಿಲಿಂಡರ್‌ಗಳನ್ನು ತಹಶೀಲ್ದಾರ್ ವಶಕ್ಕೆ ಪಡೆದಿದ್ದಾರೆ.

ತಹಶೀಲ್ದಾರ್ ಸುಜಾತಾ ನೇತೃತ್ವದಲ್ಲಿ ಕಾರ್ಯಾಚರಣೆ

ಕೋಲಾರ ಜಿಲ್ಲೆಯ ಬಂಗಾರಪೇಟೆ ತಹಶೀಲ್ದಾರ್ ಸುಜಾತಾ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು. 2 ಬೇಕರಿ ಮತ್ತು 5ಕ್ಕೂ ಹೆಚ್ಚು ಹೋಟೆಲ್‌ಗಳ ಮೇಲೆ ದಾಳಿ ನಡೆಸಲಾಯಿತು, ಈ ವೇಳೆ ವಾಣಿಜ್ಯ ಸಿಲಿಂಡರ್ ಬದಲಿಗೆ ಗೃಹ ಬಳಕೆ ಸಿಲಿಂಡರ್ ಅನ್ನು ಬಳಸಲಾಗುತ್ತಿದೆ ಪತ್ತೆಯಾಗಿದೆ.

ಇದನ್ನೂ ಓದಿ: ಕರ್ನಾಟಕದಾದ್ಯಂತ ಸಿಲಿಂಡರ್ ಕೊರತೆ: ಕಾಳಸಂತೆಯಲ್ಲಿ ಗ್ಯಾಸ್ ದಂಧೆ, 1 ಸಿಲಿಂಡರ್ ದರ 7 ಸಾವಿರ ರೂ!

ಸದ್ಯ 21 ಸಿಲಿಂಡರ್ ವಶಕ್ಕೆ ಪಡೆದ ತಹಶೀಲ್ದಾರ್ ಸುಜಾತಾ ಎಚ್ಚರಿಕೆ ನೀಡಿದ್ದಾರೆ. ಇನ್ನು ದಾಳಿಯ ವೇಳೆ ಕೆಲವು ಹೋಟೆಲ್‌ಗಳಲ್ಲಿ ಸಂಭಾವನೆ ಇಲ್ಲದಿರುವುದು ಕೂಡ ಪತ್ತೆ ಆಗಿದೆ. ಹೀಗಾಗಿ ಸುರಭಿ ಹೋಟೆಲ್‌ನಲ್ಲಿ ಅಧಿಕಾರಿಗಳು ನೀರಿನ ಸ್ಯಾಂಪಲ್ ಸಂಗ್ರಹಿಸಿದ್ದಾರೆ.

ಹೋಟೆಲ್ ಬಂದ್: ಆಲೂಗಡ್ಡೆ ಸೇಲ್ ಆಗದೇ ರೈತ ಕಂಗಾಲು

ಜಿಲ್ಲೆಯಲ್ಲಿ ರೈತರಿಗೆ ಯುದ್ಧ ಬಿಸಿ ಮುಟ್ಟಿಸಿದೆ. ಸಿಲಿಂಡರ್ ಅಭಾವದಿಂದ ಹೋಟೆಲ್‌ಗಳು ಬಂದ್ ಆಗಿರೋದ್ರಿಂದ, ತರಕಾರಿಗಳನ್ನ ತೆಗೆದುಕೊಳ್ಳೋರೇ ಇಲ್ಲ. 1,200 ರಿಂದ 1,300 ರೂ. ಇದ್ದ ಮೂಟೆ ಆಲೂಗಡ್ಡೆ, 500 ರಿಂದ 600 ರೂಪಾಯಿಗೆ ಕುಸಿತವಾಗಿದೆ. ಇದರಿಂದ ರೈತರು ಕಂಗಾಲಾಗಿದ್ದಾರೆ.

ಕೆಲಸ ಕಳೆದುಕೊಂಡ ಇಂದಿರಾ ಕ್ಯಾಂಟಿನ್ ಮಹಿಳೆಯರು

ವಾಣಿಜ್ಯ ಸಿಲಿಂಡರ್ ಹೊಡೆತಕ್ಕೆ ಕೇವಲ ಉದ್ಯಮಗಳು. ಜನಸಾಮಾನ್ಯರು ಕೂಡ ತತ್ತರಿಸಿ ಹೋಗಿದ್ದಾರೆ. ಕಲಬುರಗಿಯಲ್ಲಿ ಇಂದಿರಾ ಕ್ಯಾಂಟೀನ್‌ನಲ್ಲಿ ಕೆಲಸ ಮಾಡುತ್ತಿರುವ 10 ಮಂದಿ ಮಹಿಳೆಯರ ಕೆಲಸಕ್ಕೆ ಬರಬೇಡಿ ಅಂತ ಗುತ್ತಿಗೆದಾರರು ಹೇಳಿದ್ದಾರೆ.

ಇದನ್ನೂ ಓದಿ: ಮೈಸೂರು ಚಾಮುಂಡೇಶ್ವರಿ ದೇವಿ ಲಡ್ಡು ಪ್ರಸಾದಕ್ಕೂ ಗ್ಯಾಸ್ ಕೊರತೆ ಬಿಸಿ: ಲಡ್ಡು ನಂತರ ನಿರ್ಮಾಣವಾಗ್ತಿದೆ ವಿಶೇಷ ಸೌದೆ!

ಇನ್ನು ದಾವಣಗೆರೆಯಲ್ಲಿ ಆಟೋ ಎಲ್ಪಿಜಿ ಗ್ಯಾಸ್ ದರ ಏರಿಕೆಯಾಗಿದೆ. ಲೀಟರ್ ಪ್ರತಿ ಗೆ 23 ರೂ. ಒಟ್ಟಾರೆ ಮಾಡಿದ್ದು, 52 ರೂ. ಇದ್ದ ಲೀಟರ್ ಎಲ್ಪಿಜಿ, 75 ರೂಪಾಯಿ ಆಗಿದೆ. ಎಲ್ಪಿಜಿ ಒಟ್ಟು ಮಾಡಿದೆಎ ಪ್ರಯಾಣಿಕರು ಹೆಚ್ಚುವರಿ ಹಣ ಕೊಡ್ತಾರಾ ಅಂತ ಚಾಲಕರು ಕಿಡಿಕಾರಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *