ಕೋಲಾರ, ಫೆಬ್ರವರಿ 01: ವ್ಯಕ್ತಿಯೋರ್ವನನ್ನು ಕೊಲೆ (ಕೊಲೆ) ಮಾಡಿ ಬಳಿಕ ಫೇಸ್ ಬುಕ್ ನಲ್ಲಿ ಆರೋಪಿ ತಪ್ಪೊಪ್ಪಿಕೊಂಡ ವಿಚಿತ್ರ ಘಟನೆಯೊಂದು ಕೋಲಾರದಲ್ಲಿ (ಕೋಲಾರ) ನಡೆದಿದೆ. ಜನವರಿ 27 ರಂದು ರಾತ್ರಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಯಲ್ಲೇಶ್ ಕೊಲೆಯಾದ ವ್ಯಕ್ತಿ. ಬಿಂದುಕುಮಾರ್ (20) ಕಿರಣ್ (19) ಮತ್ತು ಅಕ್ಷಯ್ (20) ಬಂಧಿತರು. ಹಳೆ ಸೇಡು ತೀರಿಸಿಕೊಳ್ಳಲು ಕೊಲೆ ಮಾಡಿದ. ಹತ್ಯೆ ಬಳಿಕ ಆರೋಪಿಗಳು ಫೇಸ್ ಬುಕ್ ನಲ್ಲಿ ವಿಡಿಯೋ ಮಾಡಿದ್ದರು. ಸದ್ಯ ಕೋಲಾರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಡೆದದ್ದೇನು?
ಕೋಲಾರ ತಾಲ್ಲೂಕಿನ ಕೆಂದಟ್ಟಿ ಗ್ರಾಮದ ಬಳಿ ಜನವರಿ 27 ರಂದು ರಾತ್ರಿ ನರಸಾಪುರ ಗ್ರಾಮದ ಯಲ್ಲೇಶ್ ಎಂಬಾತನನ್ನು ಬರ್ಬರವಾಗಿ ಹತ್ಯೆ ಮಾಡಲಾಯಿತು. ರಾಜಕೀಯ ಮುಖಂಡರ ಜೊತೆಗೆ ಗುರುತಿಸಿಕೊಂಡಿದ್ದ ಯಲ್ಲೇಶ್, ಕೊಲೆಗೆ ಕಾರಣ ಏನು ಅನ್ನೋದನ್ನು ಹುಡುಕಲು ಹೊರಟ ಪೊಲೀಸರಿಗೆ ಅಲ್ಲೊಂದು ಅಕ್ರಮ ಸಂಬಂಧ ಸೇರಿದಂತೆ ಒಂದು ಕುಟುಂಬದ ಹೆಸರು ಕೇಳಿ ಬಂದಿತ್ತು.
ಇದನ್ನೂ ಓದಿ: ವಿಜಯನಗರ: ತ್ರಿವಳಿ ಕೊಲೆಯ ಕಾರಣ ಬಯಲು, ಲವ್ವಿಡವ್ವಿಯಿಂದ ತಂಗಿ ಗರ್ಭಿಣಿಯದ್ದು ತಿಳಿದು ಕುಟುಂಬವನ್ನೇ ಮುಗಿಸಿದ ಅಣ್ಣ!
ಆರಂಭದಲ್ಲಿ ಯಲ್ಲೇಶ್‌ನನ್ನು ನರಸಾಪುರ ಗ್ರಾಮದ ಸಂತೋಷ್ ಎಂಬಾತ ಕೊಲೆ ಮಾಡಿದ್ದಾನೆ ಎನ್ನಲಾಗುತ್ತಿದೆ. ಕಾರಣ ಯಲ್ಲೇಶ್, ಸಂತೋಷ್ ನ ಹೆಂಡತಿಯನ್ನು ಕರೆದುಕೊಂಡು ಹೋಗಿ ಆಕೆಯೊಂದಿಗೆ ಕಳೆದ ಆರೇಳು ವರ್ಷಗಳಿಂದ ಸಂಸಾರ ನಡೆಸುತ್ತಿದ್ದಾರೆ. ಇದರಿಂದ ಕೋಪಗೊಂಡಿದ್ದ ಸಂತೋಷ್, ಯಲ್ಲೇಶ್ ನನ್ನನ್ನು ಮುಗಿಸುವುದಾಗಿ ಬಹಿರಂಗವಾಗಿಯೇ ಹೇಳಿದ್ದಲ್ಲದೆ, ಅವನೇ ಕೊಲೆ ಮಾಡಿದ್ದಾನೆ ಎಂದುಕೊಂಡಿದ್ದರು. ಆದರೆ ಸಂತೋಷ್ ಕೊಲೆಯಾದ ಮರುದಿನವೇ ಒಡಿಸ್ಸಾದಲ್ಲಿದ್ದುಕೊಂಡು ಫೇಸ್ ಬುಕ್ ನಲ್ಲಿ ವಿಡಿಯೋ ಮಾಡಿ ನನಗೂ ಕೊಲೆಗೂ ಸಂಬಂಧವಿಲ್ಲ. ಬದಲಾಗಿ ನನ್ನ ಮಗ ಬಿಂದುಕುಮಾರ್ ಕೊಲೆ ಮಾಡಿರುವ ಅನುಮಾನವಿದೆ ಎಂದಿದ್ದ.
ಯಲ್ಲೇಶ್ ನನ್ನ ಸಂಸಾರವನ್ನು ಹಾಳು ಮಾಡಿದೆ. ಜೊತೆಗೆ ನನ್ನ ಮಗಳ ಬಗ್ಗೆ ತುಂಬಾ ಕೆಟ್ಟದಾಗಿ ಮಾತನಾಡಿ ಆ ವಿಡಿಯೋವನ್ನ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದ. ಹೀಗಾಗಿ ನನ್ನ ಮಗನೇ ಕೊಲೆ ಮಾಡಿರುವ ಅನುಮಾನವಿದೆ ಎಂದು ಹೇಳಿದ್ದ. ಆದರೆ ಸಂತೋಷನನ್ನು ಬಿಟ್ಟು ಹೋಗಿದ್ದ ಆತನ ಹೆಂಡತಿ ಮಾತ್ರ ಸಂತೋಷನೇ ಕೊಲೆ ಮಾಡಿದ್ದಾನೆ ಎಂದಿದ್ದಾನೆ.
ಫೇಸ್ಬುಕ್ ಲೈವ್ ಕೊಲೆ ಮಾಡಿರುವುದನ್ನು ಒಪ್ಪಿಗೆ
ಇದಾದ ಕೆಲವೇ ನಿಮಿಷಗಳಲ್ಲಿ ಸಂತೋಷ್ ಮಗ ಬಿಂದುಕುಮಾರ್ ಫೇಸ್ ಬುಕ್ ಲೈವ್ ಬಂದು ಯಲ್ಲೇಶ್ ಅವರನ್ನು ತಾನೇ ಕೊಲೆ ಮಾಡಿದ್ದಾನೆಂದು ಹೇಳಲಾಗಿದೆ. ಜೊತೆಗೆ ಅವನು ತನ್ನ ತಂಗಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ನನ್ನ ತಾಯಿಯನ್ನು ಪುಸಲಾಯಿಸಿ ತನ್ನ ತಂದೆಯಿಂದ ದೂರ ಮಾಡಿದ್ದ. ಜೊತೆಗೆ ನನ್ನನ್ನು ಕೊಲೆ ಮಾಡಿದ್ದಾನೆ ಅನ್ನೋ ಕಾರಣಕ್ಕೆ ನಾನು ಗ್ಯಾಂಗ್ ಕಟ್ಟಿಕೊಂಡು ಆತನನ್ನು ಕೊಲೆ ಮಾಡಿದ್ದೇನೆ ಎಂದು ಹೇಳಿದ್ದ. ಅಷ್ಟೇ ಅಲ್ಲದೆ ನಾವು ನ್ಯಾಯಾಲಯಕ್ಕೆ ಶರಣಾಗುತ್ತೇವೆಂದು ಹೇಳಿ ನಂತರ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದರು.
ಈ ಕೊಲೆ ಆರೋಪಿಗಳಿಗಾಗಿ ಹುಡುಕಾಡುತ್ತಿದ್ದ ಪೊಲೀಸರಿಗೂ ಕೊಲೆ ಆರೋಪಿಗಳ ಸುಳಿವು ಸಿಕ್ಕಿರಲಿಲ್ಲ. ಕೊಲೆ ಮಾಡಿ ಪೊಲೀಸರ ದಿಕ್ಕು ತಪ್ಪಿಸುತ್ತಿದ್ದವರ ಬಂಧನಕ್ಕೆ ಬಲೆಬೀಸಿದ್ದರು. ಆರೋಪಿಗಳು ಬೆಂಗಳೂರು ಬಳಿ ತಲೆಮರೆಸಿಕೊಂಡಿರುವುದು ತಿಳಿದು ಇದೀಗ ಆರೋಪಿಗಳನ್ನು ಬಂಧಿಸಿದ್ದಾರೆ. ಸಂತೋಷನ ಮಗ ಬಿಂದುಕುಮಾರ್ ಹಾಗೂ ಆತನ ಸ್ನೇಹಿತರಾದ ಕಿರಣ್, ಅಕ್ಷಯ್ ಎಂಬುವರನ್ನು ಬಂಧಿಸಿರುವ ಕೋಲಾರ ಗ್ರಾಮಾಂತರ ಠಾಣಾ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದಾರೆ. ಈ ಕೊಲೆಗೆ ಸಹಕಾರ ನೀಡಿದ ತಂದೆ ಸಂತೋಷ್ ಕೂಡ ಈ ಕೊಲೆಯಲ್ಲಿದ್ದು, ಆತನಿಗಾಗಿ ಪತ್ತೆ ಪ್ರಕರಣ.
ಇದನ್ನೂ ಓದಿ: ಬಂಧನಕ್ಕೆ ಬಂದ ಪೊಲೀಸರ ಮೇಲೆಯೇ ‘ಕೈ’ ಮುಖಂಡನ ಪುತ್ರನಿಂದ ನಡೀತಾ ಹಲ್ಲೆ?
ಅತ್ತ ಗಂಡನನ್ನು ಬಿಟ್ಟು ಮತ್ತೊಬ್ಬನ ಜೊತೆಗಿದ್ದ ತಾಯಿ, ಹೆಂಡಿಯಿಂದ ದೂರಾದ ಗಂಡ, ತಂದೆ ತಾಯಿಯಿಂದ ಸಂಸ್ಕಾರ ಕಲಿತ ಮಗ, ಎಲ್ಲರ ಬದುಕು ದಿಕ್ಕಾಪಾಲಾಗಿ ಹೋಗಿರೋದಂತು ಸುಳ್ಳಲ್ಲ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.