Headlines

Kolar Ophthalmic Assistant Jobs: ಕೋಲಾರ ಆರೋಗ್ಯ ಇಲಾಖೆಯಲ್ಲಿ ನೇಮಕಾತಿ; ಬಿ.ಎಸ್ಸಿ ಪದವೀಧರರು ಅರ್ಹರು

Kolar Ophthalmic Assistant Jobs: ಕೋಲಾರ ಆರೋಗ್ಯ ಇಲಾಖೆಯಲ್ಲಿ ನೇಮಕಾತಿ; ಬಿ.ಎಸ್ಸಿ ಪದವೀಧರರು ಅರ್ಹರು


ಕೋಲಾರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಅಧಿಕೃತ ಅಧಿಸೂಚನೆಯ ಮೂಲಕ ಆಫ್ಟಾಲ್ಮಿಕ್(ನೇತ್ರ ಚಿಕಿತ್ಸಾ ಸಹಾಯಕ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕರ್ನಾಟಕ ಸರ್ಕಾರದಲ್ಲಿದಡಿಯಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ನವೆಂಬರ್ 25 ರಂದು ನೇರ ಸಂದರ್ಶನಕ್ಕೆ ಹಾಜರಾಗಬೇಕು.

ಹುದ್ದೆಯ ಅಧಿಸೂಚನೆ:

  • ಹುದ್ದೆಗಳ ಸಂಖ್ಯೆ: 3
  • ಉದ್ಯೋಗ ಸ್ಥಳ: ಕೋಲಾರ
  • ಹುದ್ದೆಯ ಹೆಸರು: ಆಫ್ಟಾಲ್ಮಿಕ್(ನೇತ್ರ ಚಿಕಿತ್ಸಾ ಸಹಾಯಕ)
  • ವೇತನ: ತಿಂಗಳಿಗೆ 15,114 ರೂ.

ಇದನ್ನೂ ಓದಿ: ಲಿಖಿತ ಪರೀಕ್ಷೆಯಿಲ್ಲದೆ ಉದ್ಯೋಗ ಪಡೆಯಲು ಇಲ್ಲಿದೆ ಸುವರ್ಣಾವಕಾಶ; 10ನೇ ಪಾಸಾಗಿದ್ರೆ ಸಾಕು

ಅರ್ಹತಾ ವಿವರಗಳು:

  • ಶೈಕ್ಷಣಿಕ ಅರ್ಹತೆ: ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಬಿ.ಎಸ್ಸಿ, ಪದವಿ, ಡಿಪ್ಲೊಮಾವನ್ನು ಪೂರ್ಣಗೊಳಿಸಬೇಕು.
  • ವಯೋಮಿತಿ: ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 45 ವರ್ಷ
  • ಆಯ್ಕೆ ಪ್ರಕ್ರಿಯೆ: ನೇರ ಸಂದರ್ಶನ

ಅರ್ಜಿ ಸಲ್ಲಿಸುವುದು ಹೇಗೆ?

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಅಧಿಕೃತವಾಗಿ ಉಲ್ಲೇಖಿಸಿದಂತೆ) ಈ ಕೆಳಗಿನ ಸ್ಥಳದಲ್ಲಿ ನಡೆಯುವ ಸಂದರ್ಶನದಲ್ಲಿ ಹಾಜರಾಗಬೇಕು.

ವಿಳಾಸ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ಕೆಎನ್‌ಟಿಬಿ ಸ್ಯಾನಿಟೋರಿಯಂ ಆಸ್ಪತ್ರೆ ಆವರಣ, ಬಂಗಾರಪೇಟೆ ರಸ್ತೆ, ಕೋಲಾರ.

ಹೆಚ್ಚಿನ ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಂದು ಪ್ರಕಟಿಸಲಾಗಿದೆ – 5:55 pm, ಶುಕ್ರ, 21 ನವೆಂಬರ್ 25



Source link

Leave a Reply

Your email address will not be published. Required fields are marked *