
ಕೋಲ್ಕತ್ತಾ: ಶಾಲಾ ಸಾಂಸ್ಕೃತಿಕ ಕಾರ್ಯಕ್ರಮಗಳು ಸಾಮಾನ್ಯವಾಗಿ ವಿದ್ಯಾರ್ಥಿಗಳ ಪ್ರತಿಭೆ ಮತ್ತು ಸಂಪ್ರದಾಯಗಳನ್ನು ಬಿಂಬಿಸುವ ವೇದಿಕೆಗಳಾಗಿರುತ್ತವೆ. ಆದರೆ, ಪಶ್ಚಿಮ ಬಂಗಾಳದ ಶಾಲೆಯೊಂದರಲ್ಲಿ ನಡೆದ ವಿಲಕ್ಷಣವಾಗಿ ಈಗ ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಚರ್ಚೆಗೆ ಮತ್ತು ಟೀಕೆಗೆ ಗುರಿಯಾಗಿದೆ. ಸೋಶಿಯಲ್ ಮಿಡಿಯಾಗಳಲ್ಲಿ ವಿಡಿಯೋ ಹಂಚಿಕೊಂಡಿದೆ, ಸದ್ಯ ವಿಡಿಯೋ ವ್ಯಾಪಕವಾಗಿ ಹರಿದಾಡುತ್ತಿದೆ.
ಏನಿದು ಘಟನೆ?
ಕೋಲ್ಕತ್ತಾದ ಜೀಬನ್ ಜ್ಯೋತಿ ಮಾದರಿ ಶಾಲೆಯಲ್ಲಿ (ಜೀಬನ್ ಜ್ಯೋತಿ ಮಾದರಿ ಶಾಲೆ) ನಡೆದ ಕಾರ್ಯಕ್ರಮವೊಂದರ ವಿಡಿಯೋ ವೈರಲ್ ಆಗಿದ್ದು, ಶಾಲಾ ವಿದ್ಯಾರ್ಥಿನಿಯರು ಟವೆಲ್ ಸುತ್ತಿ ವೇದಿಕೆಯ ಮೇಲೆ ನೃತ್ಯ ಮಾಡುತ್ತಿರುವುದು ಕಂಡುಬಂದಿದೆ. ವಿದ್ಯಾರ್ಥಿನಿಯರು ಅಸಭ್ಯವಾಗಿ ನೃತ್ಯ ಪ್ರದರ್ಶನ ನೀಡುತ್ತಿರುವುದು ನೋಡುಗರ ಹುಬ್ಬೇರಿಸುವಂತೆ ಮಾಡಿದೆ.
@HateDetectors ಎಂಬ ಟ್ವಿಟರ್ ಖಾತೆಯಲ್ಲಿ ವೀಡಿಯೊ ಹಂಚಿಕೊಂಡಿದೆ,ಸದ್ಯ ವಿಡಿಯೋ ವ್ಯಾಪಕವಾಗಿ ಹರಿದಾಡುತ್ತಿದೆ. ವಿಡಿಯೋ ಇಲ್ಲಿದೆ ನೋಡಿ:
ಪಶ್ಚಿಮ ಬಂಗಾಳದ ಶಾಲೆಯ ಸಾಂಸ್ಕೃತಿಕ ಕಾರ್ಯಕ್ರಮವೊಂದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಬಿಸಿ ಬಿಸಿ ಚರ್ಚೆಗೆ ಕಾರಣವಾಗಿದೆ.
ಕೋಲ್ಕತ್ತಾದ ಜೀಬನ್ ಜ್ಯೋತಿ ಮಾಡೆಲ್ ಸ್ಕೂಲ್ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಹುಡುಗಿಯರ ಗುಂಪು ಟವೆಲ್ಗಳನ್ನು ಸುತ್ತಿಕೊಂಡು ನೃತ್ಯ ಮಾಡುವುದನ್ನು ಕ್ಲಿಪ್ ತೋರಿಸುತ್ತದೆ.
ರಲ್ಲಿ… pic.twitter.com/4rcCkI2TPT
– ಹೇಟ್ ಡಿಟೆಕ್ಟರ್
(@HateDetectors) ಮಾರ್ಚ್ 14, 2026
ಸಾಮಾಜಿಕ ಮಾಧ್ಯಮದಲ್ಲಿ ಭಾರಿ ಟೀಕೆ:
ವೀಡಿಯೊದಲ್ಲಿ ಶಾಲೆಯ ಹೆಸರಿರುವ ಬ್ಯಾನರ್ ಸ್ಪಷ್ಟವಾಗಿ ಕಾಣಿಸುತ್ತದೆ, ನೂರಾರು ವಿದ್ಯಾರ್ಥಿಗಳು ಪ್ರದರ್ಶನದಲ್ಲಿ ಕುಳಿತು ಈ ಪ್ರದರ್ಶನವನ್ನು ವೀಕ್ಷಿಸುತ್ತಿದ್ದಾರೆ. ಈ ದೃಶ್ಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಡಿದ ನೆಟ್ಟಿಗರು ಶಾಲಾ ಆಡಳಿತ ಮಂಡಳಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಶಾಲಾ ಸಾಂಸ್ಕೃತಿಕ ಕಾರ್ಯಕ್ರಮಗಳು ಶಿಕ್ಷಣ, ಶಿಸ್ತು ಮತ್ತು ನೈತಿಕ ಮೌಲ್ಯಗಳನ್ನು ಕಲಿಸಬೇಕು. ಇಂತಹ ಪ್ರದರ್ಶನಗಳಿಗೆ ಅನುಮತಿ ನೀಡುವುದು ಹೇಗೆ?” ಎಂದು ಅನೇಕರು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: ತರಗತಿಯಲ್ಲೇ ಮಲಗಿ ವಿದ್ಯಾರ್ಥಿನಿಯಿಂದ ಮಸಾಜ್ ಮಾಡಿಸಿಕೊಂಡ ಶಿಕ್ಷಕಿ; ವಿಡಿಯೋ ವೈರಲ್
ಈ ವಿವಾದಾತ್ಮಕ ವಿಡಿಯೋ ಶಾಲಾ ಆಡಳಿತ ಮಂಡಳಿಯಿಂದ ಇದುವರೆಗೆ ಯಾವುದೇ ಅಧಿಕೃತ ಸ್ಪಷ್ಟನೆ ಬಂದಿಲ್ಲ. ಈ ಕಾರ್ಯಕ್ರಮ ನಡೆದ ದಿನಾಂಕ ಯಾವುದು? ವೇದಿಕೆಯ ಮೇಲೆ ಪ್ರದರ್ಶನ ನೀಡಿದ ಶಾಲೆಯ ವಿದ್ಯಾರ್ಥಿಗಳು ಅಥವಾ ಹೊರಗಿನಿಂದ ಬಂದ ಕಲಾವಿದರೇ? ಎಂಬ ಬಗ್ಗೆ ಇನ್ನೂ ಗೊಂದಲಗಳಿವೆ.
ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
(@HateDetectors)