
ಚಾಮರಾಜನಗರ, ಏಪ್ರಿಲ್ 04: ಜಿಲ್ಲೆಯ ಕೊಳ್ಳೇಗಾಲ ಹೊರವಲಯದಲ್ಲಿ ನಡೆದ ಡ್ರಗ್ಸ್ ಪಾರ್ಟಿ (ಡ್ರಗ್ಸ್ ಪಾರ್ಟಿ) ಪ್ರಕರಣ ಸಂಚಲನ ಮೂಡಿಸಿದೆ. ಬೆಂಗಳೂರು ಮೂಲದ ರೌಡಿಶೀಟರ್ ಜಹೀರ್ ನೇತೃತ್ವದಲ್ಲಿ ಸುಮಾರು 50ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದ ಪಾರ್ಟಿ ಪೊಲೀಸರ ದಾಳಿ ವೇಳೆ ಬಯಲಾಗಿದೆ. ಜಹೀರ್ ಜನ್ಮದಿನದ ಅಂಗವಾಗಿ ವಿಶೇಷವಾಗಿ ಈ ಪಾರ್ಟಿಯನ್ನು ಆಯೋಜಿಸಲಾಗಿದೆ.
15 ಮಂದಿ ಡ್ರಗ್ಸ್ ಸೇವಿಸಿರುವುದು ದೃಢವಾಗಿದೆ
ಪಾರ್ಟಿಯಲ್ಲಿ ಭಾಗಿಯಾದವರು ಗಾಂಜಾ ಹಾಗೂ ಚರಸ್ ಸೇವಿಸಿ ಮೋಜುಮಸ್ತಿಯಲ್ಲಿ ತೊಡಗಿದ್ದರು. ಬಳಿಕ ತಪಾಸಣೆ ನಡೆಸಿದ ವೈದ್ಯಕೀಯ ತಪಾಸಣೆಯಲ್ಲಿ 15 ಮಂದಿ ಡ್ರಗ್ಸ್ ಸೇವಿಸಿರುವುದು ದೃಢಪಟ್ಟಿದೆ. ಈ ಪಾರ್ಟಿ ಕೊಳ್ಳೇಗಾಲದ E1 ಕಾಂಟ್ರಾಕ್ಟರ್ ಫಯಾಜ್ ಖಾನ್ ಅವರ ರೆಸಾರ್ಟ್‌ನಲ್ಲಿ ನಡೆದಿದ್ದು, ಈ ವಿಚಾರದಲ್ಲಿ ಹೆಚ್ಚಿನ ಚರ್ಚೆಗೆ ಗ್ರಾಸವಾಗಿದೆ. ಫಯಾಜ್ ಖಾನ್ ಪ್ರಭಾವಿ ರಾಜಕೀಯ ಸಂಪರ್ಕ ಹೊಂದಿರುವ ವ್ಯಕ್ತಿ, ಕಾಂಗ್ರೆಸ್ ನಾಯಕರ ಆಪ್ತನೆಂದು ಹೇಳಲಾಗುತ್ತಿದೆ.
ಇದನ್ನೂ ಓದಿ ಸಲೂನ್ ಮಾಲೀಕನಿಂದ ಬ್ಯೂಟಿಷಿಯನ್‌ಗೆ ಪ್ರಪೋಸ್? ಮಾಲೀಕನ ಮೇಲೆ ಆಕೆಯ ಪತಿ ಗ್ಯಾಂಗ್ ನಿಂದ ಅಟ್ಯಾಕ್!
ಜಹೀರ್ ಕುಟುಂಬದ ಸದಸ್ಯರೂ ಇದ್ದಾರೆಂದು ಮೂಲಗಳು ತಿಳಿಸಿವೆ. ಮಹಿಳೆಯರನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸಲಾಗುತ್ತಿದೆ, ಲೇಡಿ ಕಾನ್ಟೇಬಲ್‌ಗಳ ವಿಚಾರಣೆ ಮುಂದುವರಿಸಲಾಗಿದೆ. ಎಲ್ಲಾ ಆರೋಪಿಗಳನ್ನು ಕೊಳ್ಳೇಗಾಲ ಪೊಲೀಸ್ ಠಾಣೆಗೆ ಕರೆತಂದು ವಿಚಾರಣೆ ನಡೆಸಲಾಗುತ್ತಿದೆ. ಪ್ರಕರಣ ಸಂಬಂಧ ಇನ್ನಷ್ಟು ಮಾಹಿತಿಗಾಗಿ ತನಿಖೆಯನ್ನು ಮುಂದುವರೆಸಲಾಗಿದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.