ತುಂಗಭದ್ರಾ ಜಲಾಶಯದ ಮೊದಲ ಕ್ರಸ್ಟ್ ಗೇಟ್ ಅಳವಡಿಕೆ ಯಶಸ್ವಿ: ಅದರ ಭಾರ, ಅಗಲ-ಉದ್ದ ಎಷ್ಟು ಗೊತ್ತಾ?

ತುಂಗಭದ್ರಾ ಜಲಾಶಯದ ಮೊದಲ ಕ್ರಸ್ಟ್ ಗೇಟ್ ಅಳವಡಿಕೆ ಯಶಸ್ವಿ: ಅದರ ಭಾರ, ಅಗಲ-ಉದ್ದ ಎಷ್ಟು ಗೊತ್ತಾ?


ಕೊಪ್ಪಳ, ಜನವರಿ 11: ತುಂಗಭದ್ರಾ ಜಲಾಶಯ (ತುಂಗಭದ್ರಾ ಅಣೆಕಟ್ಟು) ನಾಲ್ಕು ಜಿಲ್ಲೆ ಜೀವನಾಡಿ. ಈ ಜಲಾಶಯ ನಂಬಿ ನಾಲ್ಕು ಜಿಲ್ಲೆಯ ರೈತರು ಬಡಕು ಕಟ್ಟಿದ್ದಾರೆ. ಆದರೆ ಕಳೆದ ವರ್ಷ ಜಲಾಶಯದ ಕ್ರಸ್ಟ್ ಗೇಟ್ (ಕ್ರೆಸ್ಟ್ ಗೇಟ್) ಕೊಚ್ಚಿ ಹೋಗುವ ಮೂಲಕ ರೈತರಲ್ಲಿ ದೊಡ್ಡ ಆತಂಕ ಎದುರಾಗಿತ್ತು. ಸರ್ಕಾರ ಜಲಾಶಯದ 33 ಗೇಟ್ ಬದಲಾವಣೆಗೆ ಮುಂದಾಗಿತ್ತು. ಸುಮಾರು 54 ಕೋಟಿ ರೂ ವೆಚ್ಚದಲ್ಲಿ ಸರ್ಕಾರ ಗೇಟ್‌ಗಳ ಬದಲಾವಣೆಗೆ ಮುಂದಾಗಿದೆ. ಗುತ್ತಿಗೆ ಪಡೆದ ಟೆಂಡರ್ ಕಂಪನಿ ಇದೀಗ ರೈತರಿಗೆ ಸಿಹಿ ಸುದ್ದಿ ನೀಡಿದೆ. ಅದೇನೆಂದರೆ 33 ಗೇಟ್‌ಗಳ ಮೇಲ್ಭಾಗ ಜಲಾಶಯದ ಒಂದು ಗೇಟ್ ಅಳವಡಿಕೆ ಕಾರ್ಯ ಯಶಸ್ವಿಯಾಗಿದೆ. ಆ ಮೂಲಕ ರೈತರು ಸಂತಸ ಪಟ್ಟಿದ್ದಾರೆ.

ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ಇರುವ ತುಂಗಭದ್ರಾ ಜಲಾಶಯ ನಾಲ್ಕು ಜಿಲ್ಲೆಯ ಜೀವನಾಡಿ. ಕೊಪ್ಪಳ, ಬಳ್ಳಾರಿ, ರಾಯಚೂರು ಹಾಗೂ ವಿಜಯನಗರ ಜಿಲ್ಲೆಯ ರೈತರು ಈ ಜಲಾಶಯ ನಂಬಿ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆಯುತ್ತಾರೆ. ಆದರೆ ಕಳೆದ ವರ್ಷ ಆಗಸ್ಟ್‌ನಲ್ಲಿ ಜಲಾಶಯದ ಕ್ರಸ್ಟ್ ಗೇಟ್ 19 ಕೊಚ್ಚಿಕೊಂಡು ಹೋಗಿ ದೊಡ್ಡ ಆತಂಕ ಸೃಷ್ಟಿಯಾಗಿತ್ತು. ಜೊತೆಗೆ ಜಲಾಶಯದ ಏಳು ಗೇಟ್ ಡ್ಯಾಮೇಜ್ ಆಗಿದ್ದವು. ಇದನ್ನು ಅರಿತ ಸರ್ಕಾರ ಜಲಾಶಯದ 33 ಗೇಟ್‌ಗಳ ಬದಲಾವಣೆಗೆ ಮುಂದಾಗಿತ್ತು.

ಇದನ್ನೂ ಓದಿ: ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ: ಹೇಗೆ ನಡೆದಿದೆ ನೋಡಿ

ಸದ್ಯ 54 ಕೋಟಿ ರೂ ವೆಚ್ಚದಲ್ಲಿ ಗೇಟ್ ನಿರ್ಮಾಣಕ್ಕೆ ಗುಜರಾತ್ ಮೂಲದ ಕಂಪನಿಗೆ ಸರ್ಕಾರ ಟೆಂಡರ್ ನೀಡಿತ್ತು. ಇದೀಗ ಜಲಾಶಯದ ಕ್ರಸ್ಟ್ ಗೇಟ್ಗಳ ಬದಲಾವಣೆ ಕಾರ್ಯ ಆರಂಭವಾಗಿದೆ. ಕಳೆದ ಜಲಾಶಯಕ್ಕೆ ಹೊಸ ಗೇಟ್ ಕಾರ್ಯ ಆರಂಭವಾಯಿತು. ಮೊದಲ ಹಂತದಲ್ಲಿ ಜಲಾಶಯದ ಕ್ರಸ್ಟ್ ಗೇಟ್ 18 ಅನ್ನು ಹೊಸದಾಗಿ ಅಳವಡಿಕೆ ಮಾಡಲಾಗಿದೆ. 33 ಗೇಟ್‌ಗಳ ಮೇಲಿನ ಒಂದು ಹಳೆ ಗೇಟ್ ಅನ್ನು ಸಂಪೂರ್ಣ ತೆಗೆದು ಹೊಸ ಗೇಟ್ ಅಳವಡಿಕೆ ಮಾಡಲಾಗಿದೆ. ಸುಮಾರು 10 ದಿನದಲ್ಲಿ ಈ ಗೇಟ್ ಅಳವಡಿಕೆ ಮಾಡಿದ್ದರೂ, ಪರಿಶೀಲನೆ ಬಾಕಿಯಿದೆ. ಹೊಸ ಗೇಟ್ ಸುಮಾರು 49 ಟನ್ ಇದೆ. ಹಳೆ ಗೇಟ್ 48.5 ಟನ್ ಇತ್ತು. ಸುಮಾರು 500 ಕೆಜಿ ತೂಕ ಹೆಚ್ಚಾಗುತ್ತಿದೆ. 20 ಪುಟ್ ಎತ್ತರ, 60 ಮೀಟರ್ ಅಗಲ ಇರುವ ಗೇಟ್ ಸಂಪೂರ್ಣವಾಗಿ ಹೊಸದಾಗಿ ಅಳವಡಿಕೆ ಮಾಡಲಾಗಿದೆ.

ಮೇ ಅಂತ್ಯದೊಳಗೆ ಕೆಲಸ ಪೂರ್ಣ ಎಂದ ಸಚಿವ ಶಿವರಾಜ್ ತಂಗಡಗಿ

ಇನ್ನು ಡಿಸೆಂಬರ್ ಕೊನೆಯ ವಾರದಿಂದ ಗೇಟ್ ಬದಲಾವಣೆ ಕಾರ್ಯಕ್ಕೆ ಗುತ್ತಿಗೆ ಪಡೆದ ಕಂಪನಿ ಮುಂದಾಗಿದೆ. ಜಲಾಶಯದ ನಾಲ್ಕು ಗೇಟ್‌ಗಳನ್ನು ಸಂಪೂರ್ಣವಾಗಿ ತೆಗೆಯಲಾಗಿದೆ. ಇನ್ನು ಗೇಟ್ ಬದಲಾವಣೆ ವಿಚಾರ ತಿಳಿದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಇಂದು ಜಲಾಶಯಕ್ಕೆ ಭೇಟಿ ನೀಡಿದ್ದಾರೆ. ಜಲಾಶಯದಲ್ಲಿ ಗುತ್ತಿಗೆ ಪಡೆದ ಅಧಿಕಾರಿಗಳಿಂದ ಗೇಟ್ ಬದಲಾವಣೆ ಕುರಿತು ಮಾಹಿತಿ ನೀಡಲಾಗಿದೆ. ಈ ವೇಳೆ ಮಾತನಾಡಿದ ಅವರು, ಮೇ ಅಂತ್ಯದೊಳಗೆ ಕೆಲಸ ಮುಗಿಯತ್ತೆ ಎಂದರು.

ಇದನ್ನೂ ಓದಿ: ನವೆಂಬರ್ ನಿಂದ ತುಂಗಭದ್ರಾ ಡ್ಯಾಂ ಗೇಟ್ ಬದಲಾವಣೆ ಕಾರ್ಯ: ಈ ವರ್ಷ ಒಂದೇ ಬೆಳೆಗೆ ನೀರು, ಆತಂಕದಲ್ಲಿ ರೈತರು

ಒಟ್ಟಾರೆ ಜಲಾಶಯದ ಕ್ರಸ್ಟ್ ಗೇಟ್ 18 ಅಳವಡಿಕೆ ಯಶಸ್ವಿಯಾಗಿದೆ. 10 ದಿನದಲ್ಲಿ ಗೇಟ್ ಅಳವಡಿಕೆ ಮಾಡಿರುವುದು, ಇನ್ನು 32 ಗೇಟ್ ಅಳವಡಿಕೆ ಕೆಲಸ ಆಗಬೇಕಿದೆ. ವಿಜಯನಗರ, ಗದಗ ಜಿಲ್ಲೆಯಲ್ಲಿ ಗೇಟ್ ಅಳವಡಿಕೆ ಕೆಲಸ ನಡೆಯುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ರಂದು ಪ್ರಕಟಿಸಲಾಗಿದೆ – 8:12 pm, ಭಾನುವಾರ, 11 ಜನವರಿ 26



Source link

Leave a Reply

Your email address will not be published. Required fields are marked *