
ಕೊಪ್ಪಳ, ಮಾರ್ಚ್ 15: ಎಲ್‌ಪಿಜಿ ಬಿಕ್ಕಟ್ಟು ಇಡೀ ರಾಜ್ಯವನ್ನು ಕಾಡುತ್ತಿರುವ ಮಧ್ಯೆ ಕೊಪ್ಪಳದ ಗವಿಮಠ ಒಂದು ವಿಶಿಷ್ಟವಾದ ಮಾದರಿಯಾಗಿ ನಿಂತಿದೆ. ಗವಿಮಠದಲ್ಲಿ ಎಂದಿನಂತೆ ಅನ್ನಪ್ರಸಾದ ಸೇವೆಗೆ ಯಾವುದೇ ಸಮಸ್ಯೆ ಎದುರಾಗಿಲ್ಲ. ಇಲ್ಲಿ ಶೇಕಡ 90ರಷ್ಟು ಅಡುಗೆಯನ್ನು ಸೌದೆ ಒಲೆಯಲ್ಲೇ ಇದೆ. ಪ್ರತಿದಿನ ಉಪಹಾರದ ಊಟ ಮತ್ತು ರಾತ್ರಿಯ ಊಟವನ್ನು ಸೌದೆ ಒಲೆಯಲ್ಲಿಯೇ ಸಿದ್ಧಪಡಿಸಲಾಗಿದೆ. ಮಠದಲ್ಲಿ ಪ್ರತಿ ತಿಂಗಳು ಸುಮಾರು 10 ರಿಂದ 12 ಟ್ರಾಕ್ಟರ್ ಸೌದೆಯನ್ನು ಅಡುಗೆಗಾಗಿ ಬಳಸಲಾಗುತ್ತದೆ. ಲಭ್ಯವಿರುವ ವಾಣಿಜ್ಯ ಸಿಲಿಂಡರ್ಗಳ ಕೊರತೆ ಅಥವಾ ಬೆಲೆ ಏರಿಕೆ ಮಠದ ದಾಸೋಹದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಭಕ್ತರಿಗೆ ನಿತ್ಯ ಅನ್ನಪ್ರಸಾದ ಸೇವೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.