Headlines

110 ಅಡಿಗೆ ಇಳಿದ ಕೃಷ್ಣರಾಜ ಸಾಗರ ಜಲಾಶಯದ ನೀರಿನ ಮಟ್ಟ; ಕುಡಿಯುವ ನೀರಿಗೆ ಸಮಸ್ಯೆ ಆಗುತ್ತಾ?

110 ಅಡಿಗೆ ಇಳಿದ ಕೃಷ್ಣರಾಜ ಸಾಗರ ಜಲಾಶಯದ ನೀರಿನ ಮಟ್ಟ; ಕುಡಿಯುವ ನೀರಿಗೆ ಸಮಸ್ಯೆ ಆಗುತ್ತಾ?


110 ಅಡಿಗೆ ಇಳಿದ ಕೃಷ್ಣರಾಜ ಸಾಗರ ಜಲಾಶಯದ ನೀರಿನ ಮಟ್ಟ; ಕುಡಿಯುವ ನೀರಿಗೆ ಸಮಸ್ಯೆ ಆಗುತ್ತಾ?

ಮಂಡ್ಯ, ಮಾರ್ಚ್ 16: ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೃಷ್ಣರಾಜ ಸಾಗರ (ಕೆ.ಆರ್.ಎಸ್.) ಜಲಾಶಯದ ನೀರಿನ ಮಟ್ಟ ಇದೀಗ 110 ಅಡಿಗೆ ಇಳಿದಿದೆ. 124.80 ಅಡಿ ಗರಿಷ್ಠ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿ ಸದ್ಯ 110.44 ಅಡಿ ನೀರು ಇದೆ, ಸುಮಾರು 32.167 ಟಿಎಂಸಿ ನೀರು ಸಂಗ್ರಹವಾಗಿದೆ. ಹೀಗಾಗಿ ಈ ಬಾರಿ ಕುಡಿಯುವ ನೀರಿಗೆ ಸಮಸ್ಯೆಯಾಗುತ್ತಾ ಎಂಬ ಆತಂಕ ಶುರುವಾಗಿದೆ.

ಬೆಂಗಳೂರಿಗೆ ಕುಡಿಯುವ ನೀರಿಗೆ ಸಮಸ್ಯೆ ಇಲ್ಲ

ಸಾಮಾನ್ಯವಾಗಿ ಜೂನ್–ಜುಲೈ ತಿಂಗಳಿನಲ್ಲಿ ತುಂಬುವ ಕೆಆರ್‌ಎಸ್ ಜಲಾಶಯ ಈ ಬಾರಿ ಉತ್ತಮ ಮಳೆಯ ಪರಿಣಾಮವಾಗಿ ಮೇ ತಿಂಗಳಲ್ಲೇ ಭರ್ತಿಯಾಗಿತ್ತು. ಆದರೆ ಈಗ ನೀರಿನ ಮಟ್ಟ 110 ಅಡಿಗೆ ಇಳಿದಿದೆ ಮುಂದಿನ ದಿನಗಳಲ್ಲಿ ಕುಡಿಯಲು ನೀರು ಸಿಗದಂತೆ ಆಗುತ್ತಾ ಎಂಬ ಪ್ರಶ್ನೆ ಉದಭವಿಸಿದ್ದು, ನೀರಿನ ಮಟ್ಟ ಕುಸಿದಿದ್ದರೂ ಜೂನ್ ಮತ್ತು ಜುಲೈವರೆಗೆ ಕುಡಿಯುವ ನೀರಿಗೆ ಯಾವುದೇ ಆತಂಕವಿಲ್ಲ ಎಂದು ಕಾವೇರಿ ನಿರಾವರಿ ನಿಗಮದ ಅಧಿಕಾರಿಗಳು.

ಇದನ್ನೂ ಓದಿ ಕೆಆರ್‌ಎಸ್ ಡ್ಯಾಂ ಇತಿಹಾಸದಲ್ಲೇ ಮೊದಲ ಬಾರಿಗೆ ಜೂನ್‌ನಲ್ಲಿ ಭರ್ತಿ!

ರೈತರ ಬೆಳೆಗಳಿಗೆ ಕಟ್ಟು ಪದ್ಧತಿಯಲ್ಲಿ ಕಾಲುವೆಗಳಿಗೆ ನೀರು ಬಿಡಲಾಗುತ್ತಿದ್ದು, ನೀರಿನ ಸಮರ್ಪಕ ನಿರ್ವಹಣೆ ಮಾಡಲಾಗುತ್ತಿದೆ. ಹೀಗಾಗಿ ಮೈಸೂರು ಹಾಗೂ ಬೆಂಗಳೂರಿಗೆ ಪೂರೈಕೆ ಮಾಡುವ ಕುಡಿಯುವವರಿಗೆ ಯಾವುದೇ ತೊಂದರೆ ಉಂಟಾಗುವುದಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ಈ ವರ್ಷ ಕುಡಿಯುವ ನೀರಿನ ಕೊರತೆ ಎದುರಾಗುವ ಸಾಧ್ಯತೆ ಇಲ್ಲ ಎಂದು ಖಚಿತವಾಗಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *