ಕೆಆರ್‌ಎಸ್ ಡ್ಯಾಂ ನೀರಿನ ಮಟ್ಟ 99 ಅಡಿಗೆ ಕುಸಿತ: ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಿಗೆ ಎದುರಾಯ್ತು ಜಲಕಂಟಕ

ಕೆಆರ್‌ಎಸ್ ಡ್ಯಾಂ ನೀರಿನ ಮಟ್ಟ 99 ಅಡಿಗೆ ಕುಸಿತ: ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಿಗೆ ಎದುರಾಯ್ತು ಜಲಕಂಟಕ


ಮಂಡ್ಯ, ಏಪ್ರಿಲ್ 18: ಮಂಡ್ಯ (ಮಂಡ್ಯ) ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕನ್ನಂಬಾಡಿ ಕಟ್ಟೆ (ಕೆಆರ್ ಎಸ್ ಅಣೆಕಟ್ಟು) ಜಲಾಶಯದಲ್ಲಿ ನೀರಿನ ಮಟ್ಟ ಆತಂಕಕಾರಿ ಮಟ್ಟಕ್ಕೆ ಕುಸಿದಿದೆ. ಜಲಾಶಯದ ಇಂದಿನ ನೀರಿನ ಮಟ್ಟ 100 ಅಡಿಗಿಂತ ಕೆಳಕ್ಕೆ ಅಂದರೆ 99 ಅಡಿಗೆ ಕುಸಿದಿದ್ದು, ಮಳೆಗಾಲ ವಿಳಂಬವಾದರೆ ಕುಡಿಯುವ ನೀರಿಗಾಗಿ ದೊಡ್ಡ ಮಟ್ಟದ ಹಾಕಾರ ಎದುರಾಗುವ ಭೀತಿ ಆವರಿಸಿದೆ. ಬೆಂಗಳೂರಿನ ಹಲವೆಡೆ ನೀರಿನ ಸಮಸ್ಯೆ ಶುರುವಾಗಿದೆ, ಕೆಆರ್ಎಸ್ ಜಲಾಶಯದಲ್ಲಿ ನೀರಿನ ಮಟ್ಟ ಇಳಿಕೆಯಾಗಿರುವುದು ಇನ್ನಷ್ಟು ಸಮಸ್ಯೆಗೆ ಕಾರಣವಾಗಿದೆ.

ಖಾಲಿಯಾಗುತ್ತಿದೆ ಕಾವೇರಿ ಒಡಲು

124.80 ಅಡಿ ಗರಿಷ್ಠ ಮಟ್ಟ ಹೊಂದಿರುವ ಕೆಆರ್‌ಎಸ್ ಡ್ಯಾಂನಲ್ಲಿ ಕೇವಲ 22 ಟಿಎಂಸಿ ಮಾತ್ರ ನೀರು ಸಂಗ್ರಹಣೆ ಇದೆ. ಇದರಲ್ಲಿ 7 ಟಿಎಂಸಿ ನೀರು ಡೆಡ್ ಸ್ಟೋರೇಜ್ (ಡೆಡ್ ಸ್ಟೋರೇಜ್) ಆಗಿದ್ದು, ಬಳಕೆಗೆ ಸಂಗ್ರಹಿಸುವುದು ಕೇವಲ 15 ಟಿಎಂಸಿ ಮಾತ್ರ. ಪ್ರಸ್ತುತ ಜಲಾಶಯಕ್ಕೆ 66 ಕ್ಯೂಸೆಕ್ ಒಳಹರಿವು ಇದ್ದರೆ, ಹೊರಹರಿವು 4,388 ಕ್ಯೂಸೆಕ್ ಇದೆ.

ಬೆಂಗಳೂರಿಗರಿಗೆ ಆತಂಕ

ಕಾವೇರಿ ನೀರನ್ನೇ ನಂಬಿಕೊಂಡಿರುವ ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಮೈಸೂರು, ಮಂಡ್ಯ ಮತ್ತು ಇತರ ನಗರಗಳಿಗೆ ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಯಿದೆ. ಸದ್ಯ ನೀರನ್ನು ಕಟ್ಟು ಪದ್ಧತಿಯಲ್ಲಿ ಬೆಳೆಗೆ ನೀಡಬೇಕಿದೆ ಮತ್ತು ಕುಡಿಯಲು ಮೀಸಲಿಡಬೇಕಾದ ಅನಿವಾರ್ಯತೆ ಸರ್ಕಾರಕ್ಕೆ ಎದುರಾಗಿದೆ.

ಜೂನ್ ಮೊದಲ ವಾರದಲ್ಲಿ ಮುಂಗಾರು ಮಳೆ ತಡವಾದರೆ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ಕಾವೇರಿ ನೀರು ಅವಲಂಬಿತ ಜನರಿಗೆ ನೀರಿನ ಸಮಸ್ಯೆ ಕಟ್ಟಿಟ್ಟ ಬುತ್ತಿ.

ಇದನ್ನೂ ಓದಿ: ಬೆಂಗಳೂರು ಹೃದಯಭಾಗದಲ್ಲೇ ಜಲಕ್ಷಾಮ: ನೀರಿಗಾಗಿ ನಿದ್ದೆಬಿಟ್ಟ ರಾಜಾಜಿನಗರದ ಜನ, ಜಲಮಂಡಳಿ ವಿರುದ್ಧ ಆಕ್ರೋಶ

ಮತ್ತೊಂದೆಡೆ, ಬೆಂಗಳೂರಿನ ವಿವಿಧೆಡೆ ಕುಡಿಯುವ ನೀರಿನ ಸಮಸ್ಯೆ ಆರಂಭವಾಗಿದೆ. ರಾಜಾಜಿನಗರದ ಚಾಮುಂಡಿನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ತಾರಕಕ್ಕೇರಿದ್ದು, 3,000ಕ್ಕೂ ಹೆಚ್ಚು ಕುಟುಂಬಗಳು ಹನಿ ನೀರಿಗಾಗಿ ಮಧ್ಯರಾತ್ರಿ ನಿದ್ದೆ ಬಿಟ್ಟು ಕಾಯುವಂಥ ಪರಿಸ್ಥಿತಿ ನಿರ್ಮಾಣವಾಗಿದೆ. ಬೆಂಗಳೂರಿನ ಲಗ್ಗೆರೆ ಪ್ರದೇಶದಲ್ಲಿ ಶುದ್ಧ ಕುಡಿಯುವ ನೀರಿನ ಬೆಲೆ ಹೆಚ್ಚಾಗುತ್ತದೆ, ಜನರು ದೂರದ ಪ್ರದೇಶಗಳಿಂದ ನೀರು ತರಲು ಪರದಾಡುತ್ತಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದಲ್ಲಿಯೂ ನೀರಿನ ಭಾರಿ ಸಮಸ್ಯೆ ತಲೆದೋರಿದೆ. ಇದೀಗ ಕೆಆರ್‌ಎಸ್ ಡ್ಯಾಂನಲ್ಲೂ ನೀರಿನ ಮಟ್ಟ ಕುಸಿದಿರುವುದು ಬೆಂಗಳೂರಿನ ಜನತೆಗೆ ತಲೆನೋವು ತಂದಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಂದು ಪ್ರಕಟಿಸಲಾಗಿದೆ – 10:03 am, ಶನಿ, 18 ಏಪ್ರಿಲ್ 26



Source link

Leave a Reply

Your email address will not be published. Required fields are marked *