ಶಿವಮೊಗ್ಗ, (ಜನವರಿ 09) : ಮಾಜಿ ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪ ಅವರಿಗೆ ವಿದೇಶದಿಂದ ಮತ್ತೊಮ್ಮೆ ಕರೆ ಬಂದಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಈಶ್ವರಪ್ಪ ಅವರು ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ನಿಖಿಲ್ ಅವರನ್ನು ಭೇಟಿ ಮಾಡಿ ಅಧಿಕೃತ ದೂರು ಸಲ್ಲಿಸಿದ್ದಾರೆ. ಜ.7ರಂದು ವಿದೇಶದಿಂದ ಈಶ್ವರಪ್ಪ ಅವರಿಗೆ ಬೆದರಿಕೆ ಕರೆ ಬಂದಿದ್ದು, ಇದರಿಂದ ಅವರ ಭದ್ರತೆ ಕುರಿತು ಮತ್ತೆ ಆತಂಕ ಉಂಟಾಗಿದೆ. ಈ ಹಿಂದೆ ಕೂಡ ಬೆದರಿಕೆ ಕರೆಗಳಿಗೆ ಈಶ್ವರಪ್ಪ ಅವರಿಗೆ ಪೊಲೀಸ್ ಭದ್ರತೆ ಮತ್ತು ಎಸ್ಕಾರ್ಟ್ ವ್ಯವಸ್ಥೆಯನ್ನು ಒದಗಿಸಲಾಗಿದೆ. ಆದರೆ ಇತ್ತೀಚೆಗೆ ರಾಜ್ಯ ಸರ್ಕಾರ ಎಸ್ಕಾರ್ಟ್ ಮತ್ತು ಪೊಲೀಸ್ ಭದ್ರತೆಯನ್ನು ಹಿಂಪಡೆದಿತ್ತು . ಇದೀಗ ಮತ್ತೆ ತಮಗೆ ವೈ ಸೆಕ್ಯೂರಿಟಿ ನೀಡಬೇಕೆಂದು ಕೋರಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.