Headlines

RSS ಪಥಸಂಚಲನದಲ್ಲಿ ಭಾಗಿಯಾಗಿದ್ದಕ್ಕೆ PDO ಅಮಾನತು: ಆದೇಶಕ್ಕೆ ಕೆಎಸ್‌ಎಟಿ ತಡೆ

RSS ಪಥಸಂಚಲನದಲ್ಲಿ ಭಾಗಿಯಾಗಿದ್ದಕ್ಕೆ PDO ಅಮಾನತು: ಆದೇಶಕ್ಕೆ ಕೆಎಸ್‌ಎಟಿ ತಡೆ


ಬೆಂಗಳೂರು, ಅಕ್ಟೋಬರ್ 30: ರಾಯಚೂರಿನ ಲಿಂಗಸುಗೂರಿನಲ್ಲಿ ನಡೆದ ಆರ್ ಎಸ್ ಎಸ್ ಪಥಸಂಚಲನದಲ್ಲಿ ಭಾಗವಹಿಸಿದ್ದಕ್ಕಾಗಿ, ಪಿಡಿಓ ಪ್ರವೀಣ್ ಕುಮಾರ್ ಅವರನ್ನು ಅಮಾನತು ಮಾಡಿರುವ ಆದೇಶಕ್ಕೆ ಕೆಎಸ್‌ಎಟಿ ತಡೆ ನೀಡಿದೆ. ಈ ಬಗ್ಗೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ, ಪ್ರವೀಣ್ ಅವರ ಮೇಲೆ ಹೇರಲಾಗಿದ್ದ ಏಕಪಕ್ಷೀಯ ಅಮಾನತು ಆದೇಶವನ್ನು ನಾವು ಪ್ರಶ್ನಿಸಿದ್ದೇವೆ. ಈಗ ಅದಕ್ಕೆ ತಡೆ ಸಿಕ್ಕಿದೆ. ಯಾವುದೇ ರೀತಿಯ ಬೆದರಿಕೆ ಆರ್‌ಎಸ್‌ಎಸ್‌ನ ರಾಷ್ಟ್ರ ನಿರ್ಮಾಣದ ಆದರ್ಶಗಳನ್ನು ತಡೆಯಲು ಸಾಧ್ಯವಿಲ್ಲ. ಈ ಆದೇಶದಿಂದ ರಾಜ್ಯ ಸರ್ಕಾರಕ್ಕೆ ತೀವ್ರ ಮುಖಭಂಗವಾಗಿದೆ.

ಸಂಸದ ತೇಜಸ್ವಿ ಸೂರ್ಯ ಮಾಹಿತಿ

ಇದನ್ನೂ ಓದಿ: RSS ಪಥಸಂಚಲನದಲ್ಲಿ ಭಾಗಿ: ರಾಯಚೂರಿನ ರೋಡಲಬಂಡಾ ಪಿಡಿಓ ಅಮಾನತು

ಆರೆಸ್ಸೆಸ್ ಶತಮಾನೋತ್ಸವ ಹಿನ್ನಲೆ ಅಕ್ಟೋಬರ್ 12 ರಂದು ಲಿಂಗಸುಗೂರು ಪಟ್ಟಣದಲ್ಲಿ ನಡೆದ ಪಥಸಂಚಲನದಲ್ಲಿ ಸಂಘದ ಸಮವಸ್ತ್ರ ಧರಿಸಿ, ಕೈನಲ್ಲಿ ದೊಣ್ಣೆ ಹಿಡಿದ ಗಣವೇಷಧಾರಿಯಾಗಿ ಲಿಂಗಸುಗೂರು ತಾಲೂಕಿನ ರೋಡಲಬಂಡಾ ಪಿಡಿಓ ಪ್ರವೀಣ್ ಭಾಗವಹಿಸಿದ್ದರು. ಪ್ರಾವೀಣ್ಯ ಪ್ರವೀಣ್, ಕರ್ನಾಟಕ ನಾಗರಿಕ ಸೇವಾ (ನಡತೆ) ನಿಯಮಗಳು 2021ರ ನಿಯಮ 3ರ ಅನ್ವಯ ಪ್ರತಿಯೊಬ್ಬ ಸರ್ಕಾರಿ ನೌಕರರು ಎಲ್ಲಾ ಕಾಲದಲ್ಲಿಯೂ ಸಂಪೂರ್ಣ ನೀತಿ ನಿಷ್ಠೆಯನ್ನು ಹೊಂದಿರುವುದು ಮತ್ತು ಕರ್ತವ್ಯ ಶ್ರದ್ಧೆಯನ್ನು ಹೊಂದಿರುವುದು ಹಾಗೂ ಸರ್ಕಾರಿ ನೌಕರರಿಗೆ ತಕ್ಕದ್ದನ್ನು ಮಾಡಬಾರದೆಂದು ಆರೋಪಿಸಲಾಯಿತು. ಇದೇ ಕಾರಣಕ್ಕೆ ಅವರಿಗೆ ಅಮಾನತು ಮಾಡಿ ಪಂಚಾಯತ್ ರಾಜ್ಯ ಇಲಾಖೆ ಆಯುಕ್ತ ಡಾ.ಅರುಂಧತಿ ಚಂದ್ರಶೇಖರ್ ಆದೇಶಿದ್ದರು.

ಅಮಾನತು ಬೆನ್ನಲ್ಲೇ ಪ್ರವೀಣ್ ಜೊತೆ ಈ ಬಗ್ಗೆ ಚರ್ಚಿಸಿದ್ದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ಕಾನೂನುಬಾಹಿರ ಮತ್ತು ಅಕ್ರಮ ಅಮಾನತನ್ನು ಪ್ರಶ್ನಿಸಲು ನಾನು ವೈಯಕ್ತಿಕವಾಗಿ ನ್ಯಾಯಾಧಿಕರಣ ಮತ್ತು ನ್ಯಾಯಾಲಯಗಳ ಮುಂದೆ ಹಾಜರಾಗುತ್ತೇನೆ ಎಂದು ಅವರಿಗೆ ಭರವಸೆ ನೀಡಿದ್ದರು. ಆರ್‌ಎಸ್‌ಎಸ್‌ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಸರ್ಕಾರಿ ನೌಕರರ ಹಕ್ಕನ್ನು ಎತ್ತಿ ಹಿಡಿದಿರುವ ಹೈಕೋರ್ಟ್‌ಗಳ ಅನೇಕ ತೀರ್ಪುಗಳಿವೆ. ಈ ಅಕ್ರಮ ಅಮಾನತು ರದ್ದಾಗಿರುವಲ್ಲಿ ನನಗೆ ಯಾವುದೇ ಸಂದೇಹ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು. ಎಂದು ಕೊಟ್ಟ ಮಾತಿನಂತೆ ಸಂಸದರು ಪ್ರವೀಣ್ ಕಾನೂನುಹೋರಾಟದಲ್ಲಿ ನೆರವಾಗಿದ್ದು, ಸರ್ಕಾರದ ಆದೇಶಕ್ಕೆ ಕೆಎಸ್‌ಎಟಿ ತಡೆ ನೀಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.

ರಂದು ಪ್ರಕಟಿಸಲಾಗಿದೆ – 1:15 pm, ಗುರುವಾರ, 30 ಅಕ್ಟೋಬರ್ 25





Source link

Leave a Reply

Your email address will not be published. Required fields are marked *