ಚಿನ್ನಸ್ವಾಮಿ ಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯಗಳು ನಡೆದು ಹತ್ತಿರ ವರ್ಷವಾಗುತ್ತಾ ಬರುತ್ತಿದೆ. ಆರ್ ಸಿಬಿ (RCB) ವಿಜಯೋತ್ಸವದ ಮೆರವಣಿಗೆಯಲ್ಲಿ ಆದ ಅವಘಡದ ಬಳಿಕ ಚಿನ್ನಸ್ವಾಮಿ ಕ್ರೀಡಾಂಗಣ ಸಂಪೂರ್ಣವಾಗಿ ಸ್ತಬ್ಧವಾಗಿದೆ. ಆದರೆ ವೆಂಕಟೇಶ್ ಪ್ರಸಾದ್ ಕೆಎಸ್ ಸಿಎ ಅಧ್ಯಕ್ಷ ಸ್ಥಾನಕ್ಕೇರಿದ ಬಳಿಕ ಚಿನ್ನಸ್ವಾಮಿಗೆ ಕ್ರಿಕೆಟ್ ಮರಳಿ ಬರುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ. ಹೀಗಾಗಿ ಮುಂಬರುವ ಐಪಿಎಲ್ (ಐಪಿಎಲ್) ಪಂದ್ಯಾವಳಿ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯಬಹುದು ಎಂದು ಆಸೆಯಿಂದ ಕಾಯುತ್ತಿದ್ದ ಅಭಿಮಾನಿಗಳಿಗೆ ಇದುವರೆಗೆ ಸಿಹಿ ಸುದ್ದಿ ಸಿಕ್ಕಿಲ್ಲ. ಇದೆಲ್ಲದರ ನಡುವೆ ಇಂದು ಕೆಎಸ್ಎಸ್ಎಯಲ್ಲಿ ನಡೆದ ಸುದ್ದಿಘೋಷ್ಠಿಯಲ್ಲಿ ಮಾತನಾಡಿದ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಚಿನ್ನಸ್ವಾಮಿಗೆ ಕ್ರಿಕೆಟ್ ಪಂದ್ಯಗಳನ್ನು ಮರಳಿ ತರಲು ಎಲ್ಲಾ ಪ್ರಯತ್ನಗಳನ್ನು ಮಾಡಿದೆ, ಸರ್ಕಾರ ಕೂಡ ನಮ್ಮ ಜೊತೆಗಿದೆ. ಆದರೆ ಆರ್ಸಿಬಿ ಯಾಕೋ ಬೆಂಗಳೂರಿನಲ್ಲಿ ಪಂದ್ಯಗಳನ್ನು ನಡೆಸಲು ಅಷ್ಟು ಒಲವು ತೋರಿಸುತ್ತಿಲ್ಲ. ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯಗಳು ನಡೆಯುವುದು ಅನುಮಾನ ಎಂದು ತೋರುತ್ತಿದೆ.
ಆರ್ಸಿಬಿ ಒಲವು ತೋರಿಸುತ್ತಿಲ್ಲ
ಸುದ್ದಿಘೋಷ್ಠಿಯಲ್ಲಿ ಮಾತನಾಡಿದ ವೆಂಕಟೇಶ್ ಪ್ರಸಾದ್, ‘ಬೆಂಗಳೂರಿನಲ್ಲಿ ಮತ್ತೆ ಐಪಿಎಲ್ ಪಂದ್ಯ ಆಡಿಸಲು ಸಿದ್ಧರಿದ್ದೇವೆ. ಆದರೆ ಆರ್ಸಿಬಿ ಮ್ಯಾನೇಜ್ಮೆಂಟ್ ಅಷ್ಟು ಒಲವು ತೋರಿಸುತ್ತಿಲ್ಲ. ಹೀಗಾಗಿಯೂ ಕ್ರಿಕೆಟ್ ಅಭಿಮಾನಿಗಳಿಗಾಗಿ ನೀ ಇಲ್ಲಿ ಆಡಬೇಕು ಎಂದು ಆರ್ಸಿಬಿ ಮ್ಯಾನೇಜ್ಮೆಂಟ್ ಬಳಿ ಮನವಿ ಮಾಡುತ್ತೇನೆ. ನಿಮಗೆ ಜೊತೆಗೆ ಏನೇ ಸಂಶಯಗಳಿದ್ರು ಸರ್ಕಾರದ ಜೊತೆ ಮಾತನಾಡಿ ಎಂಬ ಸಲಹೆಯನ್ನು ನೀಡಿದ್ದೇವೆ. ಚಿನ್ನಸ್ವಾಮಿ ಮೈದಾನದಲ್ಲಿ ಆರ್ಸಿಬಿ ತನ್ನ ಪಂದ್ಯಗಳನ್ನು ಆಡಬೇಕು ಅನ್ನೋದು ನಮ್ಮ ಆಶಯ.
ಮುಂದುವರೆದು ಅವರು ಮಾತನಾಡಿದರು, ಆದಷ್ಟು ಬೇಗ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ನಡೆಯುತ್ತದೆ. ಅಂತಾರಾಷ್ಟ್ರೀಯ, ಐಪಿಎಲ್ ಪಂದ್ಯಗಳನ್ನು ಮತ್ತೆ ಬೆಂಗಳೂರಿಗೆ ತರುತ್ತೇವೆ. ಕರ್ನಾಟಕ ಸರ್ಕಾರ ನಮ್ಮ ಜೊತೆಗಿದೆ. ನಾವೂ ಸರ್ಕಾರದ ಇಲಾಖೆಗಳಿಗೆ ಮನವೊಲಿಸುತ್ತೇವೆ. ಜಿಬಿಎ, ಬೆಸ್ಕಾಂ, BWSSB, ಪೊಲೀಸ್ ಎಲ್ಲರ ವಿಶ್ವಾಸ ಗಿಟ್ಟಿಸುವ ಭರವಸೆ ಇದೆ. ಎಲ್ಲವನ್ನು ಕೂಡಲೇ ಮಾಡುವುದು ಅಷ್ಟು ಸುಲಭವಲ್ಲ. ಆದರೆ ನಾವೂ ಮ್ಯಾನೇಜ್ ಮಾಡುತ್ತಾರೆ. ಆ ಕೆಲಸವನ್ನು ನಮ್ಮ ಸಮಿತಿ ಮಾಡಲಿದೆ. ನಾವು ಕ್ರಿಕೆಟ್ ಅಭಿಮಾನಿಗಳಿಗೆ ಮಾತು ಕೊಡುವುದಾಗಿದೆ. ಮತ್ತೇ ಚಿನ್ನಸ್ವಾಮಿ ಪದ್ಯಗಳನ್ನು ಆದಷ್ಟು ಬೇಗ ಹೆಚ್ಚಿಸುತ್ತದೆ.
ಚಿನ್ನಸ್ವಾಮಿಯಲ್ಲಿ IPL ಪಂದ್ಯಗಳಿಗೆ ಗೃಹ ಇಲಾಖೆ ಗ್ರೀನ್ ಸಿಗ್ನಲ್: ತವರಿಗೆ ಮರಳುತ್ತಾ ಆರ್ಸಿಬಿ?
ಅವರೇ ಉತ್ತರ ಕೊಡಬೇಕು
ಇನ್ನು ಕಾಲ್ತುಳಿತ ಪ್ರಕರಣದಲ್ಲಿ ಆರ್ಸಿಬಿಯನ್ನು ಟಾರ್ಗೆಟ್ ಮಾಡಿದ್ದಕ್ಕೆ, ಆಡಳಿತ ಮಂಡಳಿ ಚಿನ್ನಸ್ವಾಮಿಯಲ್ಲಿ ಪಂದ್ಯಗಳನ್ನು ನಡೆಸಲು ಹಿಂಜರಿಕೆಯಾ ಎಂಬ ಪ್ರಶ್ನೆಗೆ ಉತ್ತರಿಸಿದ ವೆಂಕಟೇಶ ಪ್ರಸಾದ್,’ ಇರಬಹುದೇನೋ ಆದರೆ ಅವರೇ ಉತ್ತರ ಕೊಡಬೇಕು. ಆದರೆ ನಾವು ಗೇಟ್ಗಳು, ಸ್ಟ್ಯಾಂಡ್ಗಳ ದುರಸ್ತಿ ಮಾಡಿದ್ದೇವೆ. ಈ ಮೂಲಕ ಫೈರ್ ಇಂಜಿನ್ ಒಳಗೆ ಬರಲು ಅನುಕೂಲ ಆಗುತ್ತೆ. ಹಾಗೇ ಗೇಟ್ ಮೀಟರ್ ಆರು ಅಗಲ ಮಾಡುವೆವೆ. ಗೋಡೆಗಳನ್ನು ದುರಸ್ತಿ ಮಾಡಲಾಗುತ್ತಿದೆ. ಅಗ್ನಿ ಶಾಮಕ ಕಾಮಗಾರಿಯು ಮುಗಿದಿದೆ. ಇನ್ನು ಕೆಲವು ಕಾಮಗಾರಿ ಹಂತ ಹಂತವಾಗಿ ನಡೆಯುತ್ತಿದೆ. 50 ಸಾವಿರ ಲೀಟರ್ ಸಾಮರ್ಥ್ಯದ ಟ್ಯಾಂಕ್ ಆಗಿದೆ. ಬೆಸ್ಕಾಂ ಕೆಲಸ ಕೂಡ ಮುಗಿದಿದೆ. ಹಾಗೆಯೇ ಒಂದು ವಾರದಲ್ಲಿ ಆರ್ ಸಿಬಿಯನ್ನು ಸಂಪರ್ಕಿಸಿದ್ದೆ. ಆದರೆ ಅವರಿಂದ ಯಾವುದೇ ಸ್ಪಷ್ಟ ಸಂದೇಶ ಬಂದಿಲ್ಲ.
ಹೆಚ್ಚಿನ ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ