ಪೊಲೀಸ್ ಇಲಾಖೆಯಲ್ಲಿ ನೇಮಕಾತಿ
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶವೊಂದು ಒದಗಿಬಂದಿದೆ. ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 8,176 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಸರ್ಕಾರವು ಅನುಮೋದನೆ ನೀಡಿದ್ದು, ಈ ಕುರಿತು ಅಧಿಕೃತ ಆದೇಶ ಹೊರಬಿದ್ದಿದೆ. ಈ ಬೃಹತ್ ನೇಮಕಾತಿ ಪ್ರಕ್ರಿಯೆಯು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಮಹತ್ವದ ಹೆಜ್ಜೆಯಾಗಿದೆ.
ಹುದ್ದೆಗಳ ವರ್ಗೀಕರಣ ಮತ್ತು ವಿವರಗಳು:
ಈ ನೇಮಕಾತಿಯಲ್ಲಿ ವಿವಿಧ ಶ್ರೇಣಿಯ ಹುದ್ದೆಗಳನ್ನು ಕಲ್ಯಾಣ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕೇತರ ವಲಯಗಳಿಗೆ ಹಂಚಿಕೆ ಮಾಡಲಾಗಿದೆ. ಅವುಗಳ ವಿವರ ಹೀಗಿದೆ:
ನಾಗರಿಕ ಪೊಲೀಸ್ ಕಾನ್ಟೇಬಲ್ (ಸಿವಿಲ್):
ಒಟ್ಟು 4,110 ಹುದ್ದೆಗಳು, 3,500 ಹುದ್ದೆಗಳು ಕಲ್ಯಾಣ ಕರ್ನಾಟಕೇತರ ವಲಯಕ್ಕೆ ಹಾಗೂ 610 ಹುದ್ದೆಗಳು ಕಲ್ಯಾಣ ಕರ್ನಾಟಕ ಭಾಗಕ್ಕೆ ಮೀಸಲಾಗಿವೆ.
ವಿಶೇಷ ರಿಸರ್ವ್ ಪೊಲೀಸ್ ಕಾನ್ಟೇಬಲ್ (KSRP):
ಒಟ್ಟು 2,032 ಹುದ್ದೆಗಳ ಭರ್ತಿಗೆ ಅವಕಾಶವಿದೆ, ಇದರಲ್ಲಿ 1,500 ಹುದ್ದೆಗಳು ಕಲ್ಯಾಣ ಕರ್ನಾಟಕೇತರ ಹಾಗೂ 532 ಹುದ್ದೆಗಳು ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ಲಭ್ಯವಿವೆ.
ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (APC):
ಈ ವಿಭಾಗದಲ್ಲಿ 1,650 ಹುದ್ದೆಗಳು, 1,375 ಹುದ್ದೆಗಳು ಕಲ್ಯಾಣ ಕರ್ನಾಟಕೇತರ ಮತ್ತು 275 ಹುದ್ದೆಗಳು ಕಲ್ಯಾಣ ಕರ್ನಾಟಕ ವಲಯಕ್ಕೆ ಹಂಚಿಕೆಯಾಗಿದೆ.
ಪೊಲೀಸ್ ಕಾನ್ಟೇಬಲ್ (KSISF):
ಕಲ್ಯಾಣ ಕರ್ನಾಟಕ ಭಾಗಕ್ಕೆ ಮಾತ್ರ ಮೀಸಲಾದ 364 ಹುದ್ದೆಗಳನ್ನು ಈ ಭರ್ತಿ ಮಾಡಲಾಗುತ್ತಿದೆ.
ಡಿಟೆಕ್ಟಿವ್ ಸಬ್ ಇನ್ಸ್ ಪೆಕ್ಟರ್ (DSI):
ಒಟ್ಟು 20 ಹುದ್ದೆಗಳು, ಇದರಲ್ಲಿ 15 ಹುದ್ದೆಗಳು ಕಲ್ಯಾಣ ಕರ್ನಾಟಕೇತರ ಹಾಗೂ 5 ಹುದ್ದೆಗಳು ಕಲ್ಯಾಣ ಕರ್ನಾಟಕ ಭಾಗಕ್ಕೆ ಇವೆ.
ಇದನ್ನೂ ಓದಿ: ರಾಮನಗರದಲ್ಲಿ ಮಾ. 5ರಂದು ಬೃಹತ್ ಉದ್ಯೋಗ ಮೇಳ
ಮೀಸಲಾತಿ ನಿಯಮ ಮತ್ತು ನ್ಯಾಯಾಲಯದ ಆದೇಶ:
ಈ ನೇಮಕಾತಿಯು ಪರಿಷ್ಕೃತ ಮೀಸಲಾತಿ ನಿಯಮಗಳ ಅನ್ವಯ. ಪರಿಶಿಷ್ಟ ಜಾತಿಯ ಮೀಸಲಾತಿ ಶೇ. 15 ರಿಂದ ಶೇ. 17ಕ್ಕೆ ಹಾಗೂ ಪರಿಶಿಷ್ಟ ಪಂಗಡದ ಮೀಸಲಾತಿ ಶೇ. 3 ರಿಂದ ಶೇ. 7 ಕ್ಕೆ ಹೆಚ್ಚಿಸಲಾಗಿದೆ. ಈ ಉಚ್ಚ ಸಂಬಂಧ ನ್ಯಾಯಾಲಯದಲ್ಲಿ ಸಲ್ಲಿಕೆಯಾಗಿರುವ ರಿಟ್ ಅರ್ಜಿಗಳು (ಸಂಖ್ಯೆ: 200448/2025, 17968/2025 ಮತ್ತು 3145/2025) ವಿಚಾರಣೆ ನಡೆಸಿ, ನ್ಯಾಯಾಲಯವು 27.11.2025 ರಂದು ಮಧ್ಯಂತರ ಆದೇಶವನ್ನು ಪರಿಗಣಿಸಿ ಅರ್ಜಿಯನ್ನು ಮುಂದುವರಿಸಲು ಸರ್ಕಾರ ನಿರ್ದೇಶನ ನೀಡಿದೆ.
ಈ ಮೇಲೆ ತಿಳಿಸಿದ ಎಲ್ಲಾ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಸರ್ಕಾರದಿಂದ ನೇಮಕಾತಿ ಅಧಿಸೂಚನೆ ಬಂದ ನಂತರ ಅರ್ಜಿಯನ್ನು ಸಲ್ಲಿಸಿ ಎಲ್ಲಾ ತಯಾರಿಯನ್ನು ನಡೆಸಿ ಪರೀಕ್ಷೆಯನ್ನ ಎದುರಿಸಿ ನಿಮ್ಮ ಕನಸಿನ ಉದ್ಯೋಗವನ್ನು ಪಡೆಯುವಲ್ಲಿ ಯಶಸ್ವಿಯಾಗಿ.
ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ: ಕರ್ನಾಟಕ ನೇಮಕಾತಿ
ಉದ್ಯೋಗಕ್ಕೆ ಸಂಬಂಧಿಸಿದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ