
ಚಿಕ್ಕಮಗಳೂರು, ಮಾರ್ಚ್ 21: ತಾಲೂಕಿನ ಕೊಡಾಳ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ (KSRTC) ಬಸ್ ಪಲ್ಟಿಯಾದ ಘಟನೆ ನಡೆದಿದೆ. ಕುಕನೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಈ ಸರ್ಕಾರಿ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಬಸ್‌ನಲ್ಲಿ 40ಕ್ಕೂ ಹೆಚ್ಚು ಪ್ರಯಾಣಿಕರು ಇನ್ನೇನು, ಘಟನೆಯಲ್ಲಿ 8 ಮಂದಿ ಪ್ರಯಾಣಿಕರು ಇದ್ದಾರೆ.
ಗಾಯಾಳುಗಳನ್ನು ತಕ್ಷಣವೇ ಚಿಕ್ಕಮಗಳೂರು ಮಲ್ಲೇಗೌಡ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಈ ಆಲ್ದೂರು ಪೊಲೀಸ್ ಠಾಣೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.