
ಬೆಂಗಳೂರು, ಏ.7: ಕಳೆದ ಮೂರು ವರ್ಷದಿಂದ ಬ್ರ್ಯಾಂಡ್ ಕರ್ನಾಟಕ… ಬ್ರ್ಯಾಂಡ್ ಕರ್ನಾಟಕ ಎನ್ನುವ ಕಾಂಗ್ರೆಸ್ ಸರ್ಕಾರಕ್ಕೆ ಈ ಬಸ್ಸುಗಳನ್ನು ಬ್ರ್ಯಾಂಡ್ ಮಾಡುವ ಯೋಚನೆಯೇ ಮಾಡಿಲ್ಲ ಅನ್ನಿಸುತ್ತದೆ. ಕಳೆದ ಹಲವು ದಿನಗಳಿಂದ ಸರ್ಕಾರಿ ಬಸ್ಸುಗಳ ಬಗ್ಗೆ ಒಂದಲ್ಲ ಒಂದು ದೂರು ಬರುತ್ತಲೇ ಇದೆ. ಇದೀಗ @KarnatakaPortfolio ಹಂಚಿಕೊಂಡಿರುವ ವಿಡಿಯೋ ನೋಡಿದ್ರೆ ಕೆಎಸ್ ಆರ್ ಟಿಸಿ ಬಸ್ಸುಗಳು ಎಷ್ಟು ಅಪಾಯಕಾರಿ ಎಂದು ನೋಡಬಹುದು. ಇದೀಗ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗುತ್ತಿದೆ. ಇದೀಗ ಈ ತಾಂತ್ರಿಕ ದೋಷ ಜನರ ಜೀವನಕ್ಕೆ ಎಷ್ಟೊಂದು ಅಪಾಯಕಾರಿಯಾಗಿದೆ ಹಾಗೂ ಸಂಸ್ಥೆಯ ನಿರ್ವಹಣಾ ಲೋಪವನ್ನು ಬೆತ್ತಲೆ ಮಾಡಿದೆ.
ಬಸ್ಸಿನ ವೇಗವನ್ನು ನಿಯಂತ್ರಿಸುವ ಆಕ್ಸಿಲರೇಟರ್ ಕಿತ್ತು ಬಂದಿದ್ದು, ಅದನ್ನು ಲೋಹದ ಬದಲಿಗೆ ಒಂದು ಸಾಧಾರಣ ಬಟ್ಟೆಯ ಪಟ್ಟಿಯಿಂದ ಕಟ್ಟಿ ನಿಲ್ಲಿಸಲಾಗಿದೆ. ಒಂದು ವೇಳೆ ಈ ಬಟ್ಟೆ ತುಂಡಾದರೆ ಅಪಘಾತ ಖಂಡಿತ. ಇಂತಹ ಬೇಜಾವ್ದಾರಿತನದಿಂದ ಜನರ ಪ್ರಾಣಕ್ಕೆ ಅಪಾಯ ತರುವುದು ಎಷ್ಟು ಸರಿ ಎಂದು ಜನ ಪ್ರಶ್ನೆ ಮಾಡಿದ್ದಾರೆ. ದಿನವಿಡೀ ಪ್ರಯಾಣಿಕರನ್ನು ಸುರಕ್ಷಿತವಾಗಿರಿಸಬೇಕಾದ ಚಾಲಕನ ಸೀಟನ್ನು ಸರಿಯಾಗಿ ರಿಪೇರಿ ಮಾಡುವ ಬದಲು ಕಬ್ಬಿಣದ ತಂತಿಗಳಿಂದ ಕಟ್ಟಲಾಗಿದೆ. ಪಾಪ ಅವರಿಗೂ ಕೂಡ ಸರಿಯಾದ ವ್ಯವಸ್ಥೆ ಕೂಡ ಮಾಡಲು ನಮ್ಮ ಸರ್ಕಾರದ ಬಳಿ ಹಣವಿಲ್ಲ ಎಂದು ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಲ್ಲಿದೆ ನೋಡಿ ವಿಡಿಯೋ:
ಬ್ರಾಂಡ್ ಕರ್ನಾಟಕ ಅಥವಾ ಬ್ರೇಕ್‌ಡೌನ್ ಕರ್ನಾಟಕ? ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಆಘಾತಕಾರಿ ಸ್ಥಿತಿ
ಇದು ಕರ್ನಾಟಕ KSRTC ಯಲ್ಲಿನ ಬಸ್‌ಗಳ ಪ್ರಸ್ತುತ ಸ್ಥಿತಿಯಾಗಿದೆ ಮತ್ತು ಇದು ಪ್ರಯಾಣಿಕರ ಸುರಕ್ಷತೆ ಮತ್ತು ಹೊಣೆಗಾರಿಕೆಯ ಬಗ್ಗೆ ಗಂಭೀರ ಕಾಳಜಿಯನ್ನು ಹುಟ್ಟುಹಾಕುತ್ತದೆ. ಆಘಾತಕಾರಿ ಸ್ಥಿತಿಯನ್ನು ನೋಡಿ… pic.twitter.com/hANUNTtIq5
— ಕರ್ನಾಟಕ ಪೋರ್ಟ್ಫೋಲಿಯೋ (@karnatakaportf) ಏಪ್ರಿಲ್ 7, 2026
ಇನ್ನು ಟೈರ್ ಬಳಿ ಆಯಿಲ್ ಸೊರಿಕೆಯಾಗಿರುವುದು ಕೂಡ ಈ ಬಸ್ಸಿನಲ್ಲಿ ಕಂಡು ಬಂದಿದೆ. ಇದರಿಂದ ಬ್ರೇಕ್ ಫೇಲ್ಯೂರ್ ಅಥವಾ ಗೇರ್ ಬಾಕ್ಸ್ ಸಮಸ್ಯೆಯಾಗುವ ಸಾಧ್ಯತೆಯೂ ಇದೆ. ಪ್ರತಿದಿನ ಶಾಲಾ ಮಕ್ಕಳು, ಕಾರ್ಮಿಕರು ಸಾಮಾನ್ಯ ಜನರು ಈ ಬಸ್‌ಗಳನ್ನೇ ಅವಲಂಬಿಸಿದ್ದಾರೆ. ಬಸ್‌ಗಳ ಈ ದುಸ್ಥಿತಿಗೆ ಒತ್ತಡದಲ್ಲಿ ಕೆಲಸ ಮಾಡುವ ಚಾಲಕರನ್ನು ಹೊಣೆ ಮಾಡಲಾಗಿದೆ. ಇದು ಸಂಪೂರ್ಣವಾಗಿ ಸಾರಿಗೆ ಇಲಾಖೆ ಮತ್ತು ಸರ್ಕಾರದ ನಿರ್ಲಕ್ಷ್ಯ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಯಾವುದಾದರೂ ದೊಡ್ಡ ದುರಂತ ಸಂಭವಿಸಿದ ಮೇಲೆ ಇಲಾಖೆಯು ಎಚ್ಚೆತ್ತುಕೊಳ್ಳುತ್ತದೆಯೇ?” ಎಂದು ಪ್ರಯಾಣಿಕರು ಪ್ರಶ್ನಿಸುತ್ತಿದ್ದಾರೆ.
ಇದನ್ನೂ ಓದಿ: ಮಹಿಳೆ ಬಟ್ಟೆ ವಾಶ್ಗೆ ಹಾಕಲು ಬಂದಾಗ ವಾಷಿಂಗ್ ಮಷಿನ್ ಒಳಗೆ ಬೆಚ್ಚಗೆ ಮಲಗಿತ್ತು! ಆಮೇಲೇನಾಯ್ತು ನೋಡಿ
ಸಾರ್ವಜನಿಕ ಸಾರಿಗೆಯು ನಂಬಿಕಾರ್ಹ ಮತ್ತು ಸುರಕ್ಷಿತ ಖಚಿತ. ಆದರೆ ಈಗಿನ ಪರಿಸ್ಥಿತಿ ನೋಡಿದರೆ ಪ್ರಯಾಣಿಕರು ಪ್ರತಿ ಕ್ಷಣವೂ ಪ್ರಾಣಭಯದಲ್ಲೇ ಸಂಚರಿಸಿದ್ದಾರೆ. ಕೂಡಲೇ ಎಲ್ಲಾ ಬಸ್‌ಗಳ ತಾಂತ್ರಿಕ ತಪಾಸಣೆ ನಡೆಸಿ, ಅನರ್ಹ ವಾಹನಗಳನ್ನು ರಸ್ತೆಯಿಂದ ಹಿಂಪಡೆಯಲು ನಾಗರಿಕರು ಒತ್ತಾಯಿಸಿದ್ದಾರೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ