ಕುಮಟಾ, ಡಿ. 30: ಕಾಲೇಜು ವಿದ್ಯಾರ್ಥಿಗಳಿದ್ದ ಬಸ್ ವೊಂದು ಪಲ್ಟಿಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಯಾಣ ಬಳಿ ನಡೆದಿದೆ. ಶಿರಸಿಯಿಂದ ಯಾಣ ಕಡೆಗೆ ತೆರಳುತ್ತಿದ್ದಾಗ ಬಸ್ ಪಲ್ಟಿಯಾಗಿದೆ. ದಾವಣಗೆರೆಯ ಜೈನ್ ಪಿಯು ವಿದ್ಯಾರ್ಥಿಗಳು ಎಂದು ಹೇಳಿದ್ದಾರೆ. ಈ ಬಸ್ಸಿನಲ್ಲಿ 20 ವಿದ್ಯಾರ್ಥಿಗಳು, 27 ವಿದ್ಯಾರ್ಥಿಗಳು, ಮೂವರು ಶಿಕ್ಷಕರು ಎಂದು ಹೇಳಲಾಗಿದೆ. 12 ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯ ಎಂದು ಹೇಳಲಾಗಿದೆ. ಇದೀಗ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಶಿರಸಿ ಮಾರಿಕಾಂಬಾ ದೇವಿಯ ದರ್ಶನ ಪಡೆದು ಯಾಣಕ್ಕೆ ಹೋಗುತ್ತಿದ್ದ ವಿದ್ಯಾರ್ಥಿಗಳ ಬಸ್ ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ಹೇಳಲಾಗಿದೆ. ಇದೀಗ ಈ ಕುಮಟಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ