ರೈತರನ್ನು ಮದುವೆಯಾಗುವ ಹೆಣ್ಣು ಮಕ್ಕಳಿಗೆ ವಿಶೇಷ ಭತ್ಯೆ ನೀಡಿ: ಸಿಎಂಗೆ ಕಾಂಗ್ರೆಸ್​​ ಶಾಸಕ ರಂಗನಾಥ್ ಪತ್ರ

ರೈತರನ್ನು ಮದುವೆಯಾಗುವ ಹೆಣ್ಣು ಮಕ್ಕಳಿಗೆ ವಿಶೇಷ ಭತ್ಯೆ ನೀಡಿ: ಸಿಎಂಗೆ ಕಾಂಗ್ರೆಸ್​​ ಶಾಸಕ ರಂಗನಾಥ್ ಪತ್ರ


ಸಿಎಂಗೆ ಶಾಸಕ ಡಾ. ಹೆಚ್. ಡಿ. ರಂಗನಾಥ್ ಪತ್ರಚಿತ್ರ ಕ್ರೆಡಿಟ್ ಮೂಲ: ಟಿವಿ9 ಕನ್ನಡ

ತುಮಕೂರು, ಫೆಬ್ರವರಿ 19: ಇತ್ತೀಚಿಗೆ ಹುಡುಗರಿಗೆ ಮದುವೆ ಆಗಲು ಹುಡುಗಿಯರು ಸಿಗುವುದೇ ಕಷ್ಟ ಎನ್ನುವ ಸ್ಥಿತಿ ನಿರ್ಮಾಣವಾಗಿದೆ. ಅದರಲ್ಲೂ ರೈತರು, ಹಳ್ಳಿಯಲ್ಲಿ ಇರುವವರು ಎಂದರಂತೂ ಮುಗೀತು. ಹೆಣ್ಣು ಕೊಡಲು ಮುಂದೆ ಬರುವವರೇ ಇಲ್ಲ ಎನ್ನುವ ಹಂತಕ್ಕೆ ಸಮಾಜ ತಲುಪಿದೆ. ಈ ನಡುವೆ ಕುಣಿಗಲ್ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ. ಹೆಚ್. ಡಿ. ರಂಗನಾಥ್ ಅವರು ಸಿಎಂ ಸಿದ್ದರಾಮಯ್ಯನವರಿಗೆ ಬರೆದಿರುವ ಪತ್ರವೊಂದು ಭಾರಿ ವೈರಲ್ ಆಗಿದೆ.

ರಂಗನಾಥ್ ಬರೆದಿರುವ ಪತ್ರದಲ್ಲೇನಿದೆ?

ಸಿಎಂಗೆ ವಿಭಿನ್ನವಾದ ಪತ್ರ ಬರೆದು ಗಮನ ಸೆಳೆದ ಶಾಸಕ ಡಾ.ರಂಗನಾಥ್, ಕೃಷಿಯಲ್ಲಿ ತೊಡಗಿರುವ ತಾಲೂಕಿನ ಗಂಡು ಮಗುವನ್ನು ಮದುವೆಯಾಗುವ ಹೆಣ್ಣು ಮಕ್ಕಳಿಗೆ ಮುಂಬರುವ ಅಧಿವೇಶನದಲ್ಲಿ ವಿಶೇಷ ಭತ್ಯೆ ಹಾಗೂ ಸ್ಥಾನಮಾನ ಘೋಷಿಸಿದ್ದಾರೆ. ನನ್ನ ಮತ ಕ್ಷೇತ್ರ ಕುಣಿಗಲ್ ತಾಲ್ಲೂಕು ಗ್ರಾಮೀಣ ಪ್ರದೇಶವಾಗಿದ್ದು, ವ್ಯವಸಾಯ ಅವಲಂಬನೆ ಹೆಚ್ಚಿದೆ. ಹೀಗಾಗಿ ಗ್ರಾಮಗಳಲ್ಲಿ ಹೆಚ್ಚಿನ ಯುವಕರು ವಾಸವಿದ್ದು, ಅವರು ವ್ಯವಸಾಯ ಮಾಡಿಕೊಂಡು ಜೀವನ ಮಾಡುತ್ತಿದ್ದಾರೆ. ಇವರನ್ನು ಮದುವೆ ಆಗಲು ಹೆಣ್ಣು ಮಕ್ಕಳು ನಿರಾಕರಿಸಿದ್ದಾರೆ, ಮೂವತ್ತು ವರ್ಷ ದಾಟಿದರೂ ಅವರ ವಿವಾಹ ನಡೆಯುತ್ತಿಲ್ಲ. ಹೀಗಾಗಿ ಅವರು ತೊಂದರೆಗೆ ಸಿಲುಕಿದ್ದು, ವ್ಯವಸಾಯ ಮಾಡಿಕೊಂಡಿರುವವರನ್ನು ಮದುವೆ ಆಗುವ ಹೆಣ್ಣು ಮಕ್ಕಳಿಗೆ ಮುಂಬರುವ ಅಧಿವೇಶನದಲ್ಲಿ ವಿಶೇಷ ಭತ್ಯೆ, ವಿಶೇಷ ವಾದವನ್ನು ಘೋಷಿಸಲಾಗಿದೆ.

ಇದನ್ನೂ ಓದಿ: ಮದುವೆಗೆ ಬಂದ ಮಹಿಳೆ ನಾಪತ್ತೆ ಕೇಸ್; ಪತಿ ಸ್ನೇಹಿತನ ಮನೆಯಲ್ಲಿ ಮಹಿಳೆ ಸಿಕ್ಕಿಬಿದ್ದಿದ್ದೇಗೆ?

ರೈತಾಪಿ ಕುಟುಂಬಗಳ ಹುಡುಗರಿಗೆ ಮದುವೆಗೆ ಹುಡುಗಿ ಸಿಗದ ವಿಚಾರವನ್ನು ಈ ಹಿಂದೆ ವಿಧಾನಪರಿಷತ್ ಸದಸ್ಯ ಪುಟ್ಟಣ್ಣ ಅವರು ಪ್ರಸ್ತಾಪಿಸಿ ಗಮನ ಸೆಳೆದಿದ್ದರು. ರೈತರು ಮತ್ತು ಕೃಷಿ ಕಾರ್ಮಿಕರನ್ನು ಮದುವೆಯಾಗುವ ಹೆಣ್ಣುಮಕ್ಕಳಿಗೆ 10 ಲಕ್ಷ ಠೇವಣಿ ಇಡುವ ಯೋಜನೆಯನ್ನು ಜಾರಿಗೆ ತರಬೇಕು ಎಂದು ಅವರು ಒತ್ತಾಯಿಸಿದರು. ಹುಡುಗಿಯರು ಹೆಚ್ಚಾಗಿ ಸರ್ಕಾರಿ ನೌಕರರು, ಸಿಟಿಗಳಲ್ಲಿರುವ ಗಂಡು ಮಕ್ಕಳೇ ಬೇಕು ಎನ್ನುತ್ತಿದ್ದಾರೆ. ಹೀಗಾಗಿ ಹಳ್ಳಿಗಳಲ್ಲಿ ರೈತರು, ಕೃಷಿ ಕಾರ್ಮಿಕರು, ಕೂಲಿಕಾರ್ಮಿಕರ ಮದುವೆ ಆಗಲು ಯಾರೂ ಒಪ್ಪದ ಕಾರಣ ಸರ್ಕಾರ ಹೊಸ ಯೋಜನೆ ಜಾರಿಗೆ ತರಬೇಕು ಎಂದು ಹೇಳಿದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.

ರಂದು ಪ್ರಕಟಿಸಲಾಗಿದೆ – 2:05 pm, ಗುರುವಾರ, 19 ಫೆಬ್ರವರಿ 26



Source link

Leave a Reply

Your email address will not be published. Required fields are marked *