ಲಕ್ಕುಂಡಿ ಉತ್ಖನನ ಪ್ರದೇಶಕ್ಕೆ ಲಾಕ್! ಚಿತ್ರಗಳನ್ನು ಸಂಪೂರ್ಣ ನಿರ್ಬಂಧಿಸಿ ಡಿಸಿ ಆದೇಶ
ಗದಗ, ಜನವರಿ 17: ಲಕ್ಕುಂಡಿಯಲ್ಲಿ ಒಂದು ಕುಟುಂಬಕ್ಕೆ ಇತ್ತೀಚಿಗಷ್ಟೇ ಕೋಟ್ಯಂತರ ರೂ. ಬೆಲೆ ಬಾಳುವ ಚಿನ್ನ (ಚಿನ್ನದ ಒಡವೆ) ಸಿಕ್ಕಿತ್ತು. ಈ ಹಿನ್ನೆಲೆ ಲಕ್ಕುಂಡಿ ಗ್ರಾಮದಲ್ಲಿರುವ ಕೋಟೆ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಎದುರಿನ ಉತ್ಖನನ ಸ್ಥಳವನ್ನು ನಿರ್ಬಂಧಿತ ಪ್ರದೇಶ ಎಂದು ಘೋಷಿಸಲಾಗಿದೆ. ಈ ಸಂಬಂಧ ಗದಗ ಜಿಲ್ಲಾಧಿಕಾರಿ ಹಾಗೂ ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸಿ.ಎನ್. ಶ್ರೀಧರ್ ಆದೇಶ ಹೊರಡಿಸಿದ್ದಾರೆ.
ಹೊರಡುತ್ತಿರುವ ಉತ್ಖನನ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಯನ್ನು ಸರ್ಕಾರಕ್ಕೊಪ್ಪಿಸಿದ್ದ ಕುಟುಂಬ, ಮನಸ್ಸು ಬದಲಿಸಿ ಚಿನ್ನ ತಮಗೇ ಸೇರಬೇಕೆಂಬ ಬೇಡಿಕೆಯಿತ್ತು. ಇದೀಗ ಸಿಕ್ಕ ನಿಧಿಯ 5ನೇ ಒಂದು ಭಾಗವನ್ನು ಕುಟುಂಬಕ್ಕೆ ನೀಡುವುದಾಗಿ ಸರ್ಕಾರ ಒಪ್ಪಿಕೊಂಡಿದೆ. ಅದಲ್ಲದೆ ನಿಧಿ ಸಿಕ್ಕ ಜಾಗದಲ್ಲಿ ಉತ್ಖನನ ಮಾಡಲು ಮುಂದಾಗಿದೆ. ಈ ಸಂಬಂಧ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ, ಕಮಲಾಪುರ–ಹಂಪಿ ಹಾಗೂ ಉತ್ಖನನದ ಸಹ ನಿರ್ದೇಶಕರಾದ ಶೇಜೇಶ್ವರ, ನಿನ್ನೆ (ಜನವರಿ 16) ನೀಡಿದ ಪತ್ರದ ಹಿನ್ನಲೆಯಲ್ಲಿ ಈ ಆದೇಶವನ್ನು ಜಾರಿಗೊಳಿಸಲಾಗಿದೆ.
ಅಧಿಕೃತವಾಗಿ ನೇಮಿಸಲ್ಪಟ್ಟವರಿಗೆ ಮಾತ್ರ ಚಿತ್ರೀಕರಣಕ್ಕೆ ಅವಕಾಶ
ಲಕ್ಕುಂಡಿಯ ವೀರಭದ್ರೇಶ್ವರ ದೇವಸ್ಥಾನದ ಎದುರಿನ ಜಾಗದಲ್ಲಿ ಜನವರಿ 16 ರಿಂದ ಉತ್ಖನನ ಕಾರ್ಯ ಪ್ರಾರಂಭವಾಯಿತು, ಈ ಪ್ರದೇಶವು ಅತಿ ಸೂಕ್ಷ್ಮವಾಗಿರುವ ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಉತ್ಖನ ಸಂಪೂರ್ಣ ಕಾರ್ಯವಾಗುವವರೆಗೆ ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದಿಂದ ಅಧಿಕೃತವಾಗಿ ನೇಮಕಗೊಂಡವರಿಗೆ ಯಾವುದೇ ಸಾರ್ವಜನಿಕರು, ವಾಹನಗಳು ಅಥವಾ ಇತರ ವ್ಯಕ್ತಿಗಳು ಈ ಸ್ಥಳಕ್ಕೆ ಪ್ರವೇಶಿಸಲು, ಫೋಟೋಗ್ರಫಿ ಮತ್ತು ಸಂಪೂರ್ಣ ವೀಡಿಯೋಗ್ರಫಿ ನಡೆಸುವುದನ್ನು ನಿಷೇಧಿಸಲಾಗಿದೆ.
ಇದನ್ನೂ ಓದಿ ಲಕ್ಕುಂಡಿಯಲ್ಲಿ ಮೊದಲ ದಿನದ ಉತ್ಖನನ ಅಂತ್ಯ: ಏನು ಸಿಕ್ತು? ಮುಂದೇನು? ಅಧಿಕಾರಿ ಹೇಳಿದಷ್ಟು
ಪ್ರಾಚೀನ ಮತ್ತು ಪಾರಂಪರಿಕ ಮಹತ್ವವನ್ನು ಹೊಂದಿರುವ ಲಕ್ಕುಂಡಿಯ ಉತ್ಖನನ ಪ್ರದೇಶವನ್ನು ಸಂರಕ್ಷಿಸುವ ಉದ್ದೇಶದಿಂದ ಈ ಕ್ರಮವನ್ನು ಕೈಗೊಳ್ಳಲು, ಆದೇಶವನ್ನು ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಲು ಎಚ್ಚರಿಕೆ ನೀಡಲಾಗಿದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.