ಗದಗ, ಜ.11: ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಮನೆ ಪಾಯ ಆಗುವಾಗ ಚಿನ್ನದ ನಿಧಿ ಪತ್ತೆಯಾದ ಘಟನೆ ಇದೀಗ ಹೊಸದೊಂದು ಸಮಸ್ಯೆಗೆ ಕಾರಣವಾಗಿದೆ. ಪ್ರಾಮಾಣಿಕತೆ ಮೆರೆದ ಕುಟುಂಬ ನಿಧಿಯನ್ನು ನಿಧಿಗೆ ಹಸ್ತಾಂತರಿಸಿದರೂ ಈಗ ಆ ಕುಟುಂಬಕ್ಕೆ ಭಯ ಮತ್ತು ಆತಂಕ ಶುರುವಾಗಿದೆ. ನಿಧಿ ಸಿಕ್ಕಿದ ಸ್ಥಳವನ್ನು ನಿಶಿದ್ಧ ಪ್ರದೇಶವೆಂದು ಘೋಷಿಸಿರುವ ಕಾರಣ, ಅವರು ಕಟ್ಟುತ್ತಿದ್ದ ಮನೆ ಅರ್ಧಕ್ಕೆ ನಿಂತಿದೆ. ಹೀಗಾಗಿ, ವಾಸಕ್ಕೆ ಮನೆಯಿಲ್ಲದೆ ಕುಟುಂಬ ಬೀದಿಗೆ ಬಂದಂತಾಗಿದ್ದರೆ, ಎಲ್ಲಿ ಬದುಕು ಸಾಗಿಸಬೇಕು ಎಂಬ ಚಿಂತೆಯಲ್ಲಿದೆ. ಮನೆಯ ಯಜಮಾನಿದ್ದು, ಕುಟುಂಬದಲ್ಲಿ ತಾಯಿ ಮತ್ತು ಚಿಕ್ಕ ಮಗನಿದ್ದಾನೆ. ಈ ಬಡ ಕುಟುಂಬಕ್ಕೆ ಈಗ ಆಸರೆ ಇಲ್ಲದೆ ಒದ್ದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಮನೆಯ ಸದಸ್ಯರು ಮತ್ತು ಗ್ರಾಮಸ್ಥರು ಒಗ್ಗಟ್ಟಾಗಿ ನಿಂತು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಸರ್ಕಾರ ಮಾನವೀಯ ದೃಷ್ಟಿಯಿಂದ ಕುಟುಂಬಕ್ಕೆ ಒಂದು ನಿವೇಶನ ಅಥವಾ ಮನೆ ನಿರ್ಮಿಸಿಕೊಡಬೇಕು ಎಂದು ಒತ್ತಾಯಿಸಲಾಗುತ್ತಿದೆ. ಕುಟುಂಬದವರು ಚಿನ್ನದ ಆಸೆಯನ್ನು ಬಿಟ್ಟು, ನಮಗೆ ಮನೆ ಬೇಕು ಎಂದು ಕಣ್ಣೀರು ಹಾಕುತ್ತಿದ್ದಾರೆ. ಈ ಬಗ್ಗೆ ಟಿವಿ9 ಜೊತೆಗೆ ಮಾತನಾಡಿದ ಕುಟುಂಬದವರು , “ನಮ್ಮ ಅಣ್ಣನ ಮನೆ ಅಥವಾ ಸಣ್ಣ ಮಾವನ ಮನೆಯಲ್ಲಿ ತಾತ್ಕಾಲಿಕವಾಗಿ ವಾಸಿಸುತ್ತಿದ್ದಾರೆ. ಚಿನ್ನದ ನಿಧಿ ನಮಗೆ ಬೇಡ, ಸರ್ಕಾರ ನಮಗೆ ಬದುಕಲು ಒಂದು ಮನೆ ನೀಡಿದರೆ ಸಾಕು. ನಿಧಿ ಸಿಕ್ಕಾಗ ನಮಗೆ ಇಂತಹ ಪರಿಸ್ಥಿತಿ ಎದುರಾಗಿದೆ, ಹೊಲ ಮಾರಿ ಮನೆ ಕಟ್ಟಲು ಆರಂಭಿಸಿದ್ದೇವೆ ಎಂದು ಕುಟುಂಬದ ಹಿರಿಯ ಸದಸ್ಯರಿಂದ ಆರಂಭವಾಯಿತು. ಚಿನ್ನ ಸಿಕ್ಕರೂ, ಅದು ಇವರಿಗೆ ನೆಮ್ಮದಿ ನೀಡುವ ಬದಲು ಕಷ್ಟ ತಂದಿದೆ. ಹೀಗಾಗಿ, ಸರ್ಕಾರವು ತಕ್ಷಣವೇ ಸ್ಪಂದಿಸಿ ಆ ಕುಟುಂಬಕ್ಕೆ ಸೂಕ್ತ ನೆರವು ನೀಡಬೇಕೆಂದು ಇಡೀ ಲಕ್ಕುಂಡಿ ಗ್ರಾಮಸ್ಥರು ಒಕ್ಕೊರಲಿನಿಂದ ಒತ್ತಾಯಿಸಿದ್ದಾರೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ