10ನೇ ದಿನ ಉತ್ಖನನ ವೇಳೆ ಕೋಟೆ ವೀರಭದ್ರೇಶ್ವರ ದೇಗುಲದ ಬಳಿ ಮತ್ತೊಂದು ಪ್ರಾಚ್ಯಾವಶೇಷ ಪತ್ತೆ!

10ನೇ ದಿನ ಉತ್ಖನನ ವೇಳೆ ಕೋಟೆ ವೀರಭದ್ರೇಶ್ವರ ದೇಗುಲದ ಬಳಿ ಮತ್ತೊಂದು ಪ್ರಾಚ್ಯಾವಶೇಷ ಪತ್ತೆ!


ಗದಗ, (ಜನವರಿ 27): ಐತಿಹಾಸಿಕ ಲಕ್ಕುಂಡಿ (ಲಕ್ಕುಂಡಿ) ಗ್ರಾಮದಲ್ಲಿ ಅಭಿವೃದ್ಧಿ ಪ್ರಾಧಿಕಾರ ಹಾಗೂ ಪುರಾತತ್ವ ಇಲಾಖೆ ವತಿಯಿಂದ ಕಳೆದ 10 ದಿನಗಳಿಂದ ಉತ್ಖನನ ಕಾರ್ಯ ನಡೆಯುತ್ತಿದೆ. ಕೋಟೆ ವೀರಭದ್ರೇಶ್ವರ ದೇವಸ್ಥಾನದ ಬಳಿ 10×10 ಅಳತೆಯ ನಾಲ್ಕು ಬಾಕ್ಸ್‌ಗಳಲ್ಲಿ ಉತ್ಖನನ ನಡೆಯುತ್ತಿದೆ, 10 ಅಡಿ ಆಳ ತೆಗೆದ ನಂತರ A-1 ಬಾಕ್ಸ್‌ನಲ್ಲಿ ಬಿರುಕು ಕಾಣಿಸಿಕೊಂಡಿದೆ. ಯಾವುದೇ ಕ್ಷಣದಲ್ಲಿ ಮಣ್ಣು ಕುಸಿಯುವ ಆತಂಕ ಸಿಬ್ಬಂದಿಗಳು ಕಾಡುತ್ತಿದೆ. ಇನ್ನು B-1 ಬ್ಲಾಕ್‌ನಲ್ಲಿ ಬೃಹತ್ ಗಾತ್ರದ ಕಲ್ಲು ಇದ್ದಿದ್ದು, ಕಲ್ಲು ಬೀಳುವ ಭೀತಿ ಎದುರಾಗಿದೆ. ಎ-ಬ್ಲಾಕ್‌ನಲ್ಲಿ ಬಂಡೆಗಳ ಸಮೂಹ ಉತ್ಖನನ ಕಾರ್ಯಕ್ಕೆ ತೀವ್ರ ತೊಂದರೆ ಎದುರಾಗಿದೆ. ಸುಮಾರು 35 ಕ್ಕೂ ಹೆಚ್ಚು ಸಿಬ್ಬಂದಿಗಳು ಈ ಅಪಾಯಕಾರಿ ಪರಿಸ್ಥಿತಿಗಳ ನಡುವೆ ಉತ್ಖನನ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. 10ನೇ ದಿನವಾದ ಇಂದು (ಜನವರಿ 27) ಉತ್ಖನನ ವೇಳೆ ಪ್ರಾಚ್ಯವಶೇಷವಿದೆ. ಹೌದು..ದೇವಕೋಷ್ಠದ ಮೇಲಿನ ಶಿಖರದ ಪ್ರಾಚ್ಯವಶೇಷ ಏನಿದ್ದು, ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *