ಚಂದ್ರ ಗ್ರಹಣ ದಿನವೇ ವೈಭವದಿಂದ ನೆರವೇರಿದ ಹೊಳೆನರಸೀಪುರ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ

ಚಂದ್ರ ಗ್ರಹಣ ದಿನವೇ ವೈಭವದಿಂದ ನೆರವೇರಿದ ಹೊಳೆನರಸೀಪುರ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ


ಹಾಸನ, ಮಾರ್ಚ್ 3: ಕೇತುಗ್ರಸ್ತ ಚಂದ್ರ ಗ್ರಹಣ ದಿನವೇ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ರಥೋತ್ಸವ ಶ್ರದ್ಧಾ ಭಕ್ತಿಯಿಂದ ನೆರವೇರಿತು. ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಭಕ್ತರು ರಥಬೀದಿಯಲ್ಲಿ ತೇರನ್ನು ಎಳೆದು ಭಕ್ತಿ ಸಮರ್ಪಿಸಿದರು. ರಥೋತ್ಸವದಲ್ಲಿ ಸಂಸದ ಶ್ರೇಯಸ್ ಪಟೇಲ್, ಶಾಸಕ ಎಚ್.ಡಿ. ರೇವಣ್ಣ ಹಾಗೂ ವಿಧಾನಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಭಾಗವಹಿಸಿದರು. ದೇವರಿಗೆ ಪೂಜೆ ಸಲ್ಲಿಸಿ ತೇರನ್ನೆಳೆದು ಪುನೀತರಾದರು. ಗ್ರಹಣ ದಿನವಾದರೂ ಭಕ್ತರ ಸಂಭ್ರಮ ಜೋರಾಗಿತ್ತು.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *