ಸಾಮಾಜಿಕ ಅಸಮಾನತೆ ಹಾಗೂ ಜಾತಿ ಶೋಷಣೆ ವಿಷಯವಿರುವ ದುನಿಯಾ ವಿಜಯ್ ನಟನೆಯ ‘ಲ್ಯಾಂಡ್ ಲಾಾರ್ಡ್’ ಸಿನಿಮಾ (ಲ್ಯಾಂಡ್ ಲಾರ್ಡ್ ಚಲನಚಿತ್ರ) ಜನವರಿ 23 ರಂದು ರಿಲೀಸ್ ಆಗಿದೆ. ವಿಮರ್ಶಕರಿಂದ ಈ ಚಿತ್ರ ಮೆಚ್ಚುಗೆ ಪಡೆದಿದೆ. ಈ ಸಿನಿಮಾಗೆ ತೆರಿಗೆ ವಿನಾಯಿತಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ. ಈ ಚಿತ್ರಕ್ಕೆ ಹೆಚ್ಚಿನ ಬೆಂಬಲ ಸಿಕ್ಕಿದ್ದು, ಹೆಚ್ಚು ಜನರನ್ನು ತಲುಪಲು ಈ ಬೆಳವಣಿಗೆ ಸಹಕಾರಿ ಆಗಲಿದೆ.
‘ಲ್ಯಾಂಡ್ಲ್ಯಾಂಡ್ 70 ರ ನೈಜ ಕಥೆ ಇದೆ. ರಾಚಯ್ಯ (ದುನಿಯಾ ವಿಜಯ್), ನಿಂಗವ್ವ (ರಚಿತಾ ರಾಮ್) ಮಗಳು ಭಾಗ್ಯಾ (ರಿತನ್ಯಾ ರಾಮ್) ಜೊತೆ ಹಾಯಾಗಿ ಜೀವನ ನಡೆಸುತ್ತಿದ್ದಾರೆ. ಆದಲ್ಲಿ ಸಣ್ಣ ಧಣಿ (ರಾಜ ಬಿ. ಶೆಟ್ಟಿ) ಪಾರುಪತ್ಯ. ಆತ ಹೇಳಿದಂತೆ ನಡೆಯಬೇಕು. ಯಾರ ಬಳಿಯೂ ಜಮೀನು ಇರಬಾರದು ಎಂಬುದು ಆತನಿಗೆ. ತಾವೇ ಬೆಳೆದ ಬೆಳೆಯಲ್ಲಿ ಸಿಗೋದು ಒಂದು ಹಿಡಿ ಮಾತ್ರ. ಇದನ್ನು ಪ್ರಶ್ನಿಸಿದ ಭಾಗ್ಯಾಳ ಪ್ರಿಯಕರನ ಸುತ್ತು ಕೊಲ್ಲದಿದ್ದರೆ. ಈ ಅಸಮಾನತೆಯ ವಿರುದ್ಧ ರಾಚಯ್ಯ ಸಿಡಿದೇಳುತ್ತಾರೆ. ಈ ರೀತಿಯಲ್ಲಿ ಸಿನಿಮಾ ಇದೆ.
‘ಲ್ಯಾಂಡ್ಲಾಾರ್ಡ್’ ಚಿತ್ರವನ್ನು ಜಡೇಶ್ ಕುಮಾರ್ ಹಂಪಿ ನಿರ್ದೇಶನ ಮಾಡಿದ್ದಾರೆ. ಈ ಮೊದಲು ವಿಜಯ್ ಹಾಗೂ ಜಡೇಶ್ ಕುಮಾರ್ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ತೆರಿಗೆ ವಿನಾಯಿತಿ ಕೊಡುವಂತೆ ಮನವಿ ಮಾಡಿದರು. ಈ ವೇಳೆ ಸಿನಿಮಾ ನೋಡಿದಾಗ ಸಿದ್ದರಾಮಯ್ಯ ಭರವಸೆ ನೀಡಿದ್ದರು. ಈಗ ಸಂಬಂಧಪಟ್ಟ ಅಧಿಕಾರಿಗಳಿಗೆ ತೆರಿಗೆ ವಿನಾಯಿತಿ ನೀಡಲು ಸೂಚನೆ ಸಿದ್ದರಾಮಯ್ಯ ತಿಳಿಸಿದ್ದಾರೆ. ತೆರಿಗೆ ವಿನಾಯಿತಿ ಸಿಗುವುದರಿಂದ ಟಿಕೆಟ್ ದರ ಕಡಿಮೆ ಆಗಲಿದೆ.
ಇದನ್ನೂ ಓದಿ: ಭೂತ-ಪ್ರೇತಗಳ ‘ರಕ್ಕಸಪುರ’ದಲ್ಲಿ ರಾಜ್ ಬಿ ಶೆಟ್ರು ರಕ್ಷಕನಾ-ರಾಕ್ಷಸನಾ?
‘ಲ್ಯಾಂಡ್ಲಾಾರ್ಡ್’ ಸಿನಿಮಾ ಜನವರಿ 23 ರಂದು ರಿಲೀಸ್ ಆಯಿತು. ಈ ಚಿತ್ರಕ್ಕೆ ಬುಕ್ ಮೈ ಶೋನದಲ್ಲಿ ಸುಮಾರು ಮೂರು ಸಾವಿರ ಜನ ರೇಟಿಂಗ್ ನೀಡಿದ್ದು, 9.4/10 ಸಿಕ್ಕಿದೆ. ದುನಿಯಾ ವಿಜಯ್, ರಚಿತಾ ರಾಮ್, ರಾಜ್ ಬಿ ಶೆಟ್ಟಿ ನಟನೆಯನ್ನು ಕೊಂಡಾಡಿದ್ದಾರೆ. ಈ ಮೂಲಕ ದುನಿಯಾ ವಿಜಯ್ ಮಗಳು ರಿತನ್ಯ ಬಣ್ಣದ ಲೋಕಕ್ಕೆ ಕಾಲಿಟ್ಟಿರುವುದು ವಿಶೇಷ.
ವರದಿ: ಈರಣ್ಣ ಬಸವ
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಮಾಡಿ.
ರಂದು ಪ್ರಕಟಿಸಲಾಗಿದೆ – 1:15 pm, ಮಂಗಳವಾರ, 3 ಫೆಬ್ರವರಿ 26