Headlines

‘ಧುರಂಧರ್ 2’ ಬ್ಯಾನ್ ಮಾಡಿ, ವಕೀಲನಿಂದ ಹೈಕೋರ್ಟ್​​ಗೆ ಅರ್ಜಿ

‘ಧುರಂಧರ್ 2’ ಬ್ಯಾನ್ ಮಾಡಿ, ವಕೀಲನಿಂದ ಹೈಕೋರ್ಟ್​​ಗೆ ಅರ್ಜಿ


'ಧುರಂಧರ 2' ಬ್ಯಾನ್ ಮಾಡಿ, ವಕೀಲರಿಂದ ಹೈಕೋರ್ಟ್‌ಗೆ ಅರ್ಜಿ

ರಣ್ವೀರ್ ಸಿಂಗ್ (ರಣವೀರ್ ಸಿಂಗ್) ನಟಿಸಿ, ನಿರ್ದೇಶನ ಮಾಡಿರುವ ‘ಧುರಂಧರ 2’ ಸಿನಿಮಾ ರಿಲೀಸ್ ಆಗಿ ಕೆಲವು ದಿನಗಳಾಗಿದ್ದರೆ, ಎಲ್ಲೆಡೆ ಸಿನಿಮಾಕ್ಕೆ ಭರ್ಜರಿ ರೆಸ್ಪಾನ್ಸ್ ದಕ್ಕಿದೆ. ಕೆಲವೇ ದಿನಗಳಲ್ಲಿ ಸಿನಿಮಾ 500 ಕೋಟಿಗೂ ಹೆಚ್ಚು ಮೊತ್ತ ಗಳಿಸಿದೆ. ಬೆಳಗಿನಿಂದ ಮಧ್ಯ ರಾತ್ರಿಯವರೆಗೆ ಸತತವಾಗಿ ಪ್ರದರ್ಶನಗಳು ನಡೆಯುತ್ತಿವೆ. ಕೆಲವು ಸಿನಿಮಾ ಬಗ್ಗೆ ಅಸಮಾಧಾನ ಸಹ ವ್ಯಕ್ತಪಡಿಸಿದ್ದಾರೆ. ಆದರೆ ಇದೀಗ ಚೆನ್ನೈನ ವಕೀಲರು, ಸಿನಿಮಾ ವಿರುದ್ಧ ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ್ದು, ಸಿನಿಮಾದ ಮೇಲೆ ನಿಷೇಧ ಹೇರಬೇಕು ಎಂದು ಒತ್ತಾಯಿಸಿದ್ದಾರೆ.

ವಕೀಲರು, ನ್ಯಾಯಮೂರ್ತಿ ಅರವಿಂದ್ ಧರ್ಮಾಧಿಕಾರಿ ಮತ್ತು ನ್ಯಾಯಮೂರ್ತಿ ಜಿ ಅರುಗನ್ ಅವರನ್ನೊಳಗೊಂಡ ಪೀಠದ ಮುಂದೆ ಈ ಅರ್ಜಿ ಸಲ್ಲಿಸಿ, ವಾದ ಮಂಡಿಸಿದ್ದಾರೆ. ‘ಧುರಂಧರ 2’ ಸಿನಿಮಾವು ರಾಜಕೀಯ ವಿಷಯಗಳನ್ನು ಒಳಗೊಂಡಿದ್ದು, ಚುನಾವಣಾ ಸಮಯದಲ್ಲಿ ಇದು ಮತದಾರರ ಮೇಲೆ ಪ್ರಭಾವ ಬೀರಬಹುದು ಎಂದು ಅರ್ಜಿದಾರರು ವಾದಿಸಿದ್ದಾರೆ.

ತಮಿಳುನಾಡಿನಲ್ಲಿ ಚುನಾವಣೆ ಘೋಷಣೆ ಆಗಿದ್ದು ಏಪ್ರಿಲ್ 23 ರಂದು ಮತದಾನ ನಡೆಯಲಿದೆ. ಪ್ರಸ್ತುತ ಮಾದರಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದೆ. ಇಂತಹ ಸಂದರ್ಭದಲ್ಲಿ ರಾಜಕೀಯ ಪ್ರೇರಿತ ಅಥವಾ ವಿವಾದಾತ್ಮಕ ವಿಷಯಗಳಿರುವ ಚಿತ್ರಗಳ ಬಿಡುಗಡೆಯು ಸಂಹಿತೆಯ ಉಲ್ಲಂಘನೆಯಾಗಬಹುದು ಎಂಬುದು ಅರ್ಜಿದಾರರ ವಾದವಾಗಿದೆ. ಮೌಖಿಕ ಅರ್ಜಿಯನ್ನು ಆಲಿಸಿದ ನ್ಯಾಯಪೀಠವು, ಈ ವಿಷಯದ ಕುರಿತು ಅಧಿಕೃತ ರಿಟ್ ಅರ್ಜಿಯನ್ನು ಸಲ್ಲಿಸುವಂತೆ ಸೂಚಿಸಲಾಗಿದೆ. ಅರ್ಜಿ ಸಲ್ಲಿಕೆಯಾದ ನಂತರ ಇದರ ವಿಚಾರಣೆಯನ್ನು ತುರ್ತು ವಿಚಾರಣೆಯನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ನ್ಯಾಯಾಲಯವು.

ಇದನ್ನೂ ಓದಿ:ಮತ್ತೆ ಬಂತು ಬೆದರಿಕೆ: ರಣವೀರ್ ಸಿಂಗ್-ದೀಪಿಕಾಗೆ ಭದ್ರತೆ

ಚುನಾವಣಾ ಸಮಯದಲ್ಲಿ ರಾಜಕೀಯ ಸಂವೇದನಾಶೀಲ ವಿಷಯಗಳಿರುವ ಚಲನಚಿತ್ರಗಳು ಹೆಚ್ಚಾಗಿ ಕಾನೂನು ಹೋರಾಟಗಳನ್ನು ಎದುರಿಸುತ್ತವೆ. ಮದ್ರಾಸ್ ಈ ಅರ್ಜಿಯನ್ನು ಅಧಿಕೃತವಾಗಿ ಸ್ವೀಕರಿಸಿದ ನಂತರ ಚಿತ್ರದ ಭವಿಷ್ಯ ನಿರ್ಧರ. ಇದೇ ರೀತಿಯ ವಿವಾದವು ನಟ ವಿಜಯ್ ಅವರ ‘ಜನನಾಯಕನ್’ ಚಿತ್ರಕ್ಕೂ ಎದುರಾಗಿದೆ. ಸೆನ್ಸಾರ್ ಮಂಡಳಿಯು ಈ ಚಿತ್ರದ ಪ್ರಮಾಣಪತ್ರವನ್ನು ತಡೆಹಿಡಿದಿದ್ದು, ಚುನಾವಣಾ ನೀತಿ ಸಂಹಿತೆಯ ಪರಿಶೀಲನೆಗಾಗಿ ಭಾರತೀಯ ಚುನಾವಣಾ ಆಯೋಗಕ್ಕೆ ಕಳುಹಿಸಲಾಗಿದೆ.

ಆದಿತ್ಯ ಧರ್ ನಿರ್ದೇಶನದ ಈ ಚಿತ್ರವು ಕರಾಚಿಯ ಲಿಯಾರಿ ಎಂಬ ಭೂಗತ ಜಗತ್ತಿನೊಂದಿಗೆ ನಡೆಯುವ ಕಥೆಯಾಗಿದೆ. ಸಿನಿಮಾದಲ್ಲಿ ರಣವೀರ್ ಸಿಂಗ್, ಮಾಧವನ್ ಮತ್ತು ಸಂಜಯ್ ದತ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಭಾರತದ ಸೈನಿಕನೊಬ್ಬ ಪಾಕಿಸ್ತಾನಕ್ಕೆ ಹೋಗಿ ಅಲ್ಲಿ ಉಗ್ರರನ್ನು ಸೆದೆ ಬಡಿಯುವ ಕಥೆಯನ್ನು ಒಳಗೊಂಡಿದೆ. ‘ಧುರಂಧರ 2’ ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಯಶಸ್ಸು ಕಂಡಿದೆ, ಬಿಡುಗಡೆಯಾದ ಮೊದಲ ನಾಲ್ಕು ದಿನಗಳಲ್ಲಿ ವಿಶ್ವದಾದ್ಯಂತ 750 ಕೋಟಿಗೂ ಹೆಚ್ಚು ಮೊತ್ತ ಗಳಿಸಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *