Headlines

ಬಿಜೆಪಿ ನಾಯಕರ ‘ಕುದುರೆ ವ್ಯಾಪಾರ’ ಆರೋಪಕ್ಕೆ ಕಾಂಗ್ರೆಸ್​ ಶಾಸಕ ಲಕ್ಷ್ಮಣ ಸವದಿ ಟಕ್ಕರ್​

ಬಿಜೆಪಿ ನಾಯಕರ ‘ಕುದುರೆ ವ್ಯಾಪಾರ’ ಆರೋಪಕ್ಕೆ ಕಾಂಗ್ರೆಸ್​ ಶಾಸಕ ಲಕ್ಷ್ಮಣ ಸವದಿ ಟಕ್ಕರ್​


ದೇವನಹಳ್ಳಿ, ನವೆಂಬರ್ 25: ರಾಜ್ಯ ಕಾಂಗ್ರೆಸ್ನಲ್ಲಿ ಪಟ್ಟಕ್ಕಾಗಿ ಫೈಟ್ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ನಾಯಕರು ಶಾಸಕರಿಗೆ 50 ರಿಂದ 100 ಕೋಟಿ ರೂ. ಆಫರ್ ಮಾಡ್ತಿರುವ ಬಗ್ಗೆ ಆರೋಪಿಸಿದ್ದರು. ಈ ಬಗ್ಗೆ ಪ್ರತಿಕ್ರಿಸಿರೋ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಕಮಲ ಪಡೆಗೆ ತಿರುಗೇಟು ನೀಡಿದ್ದಾರೆ. ಬಿಜೆಪಿಯವರು ಹಳೆಯ ದಿನಗಳನ್ನು, ಅಂದರೆ 2019ರ ಘಟನೆಗಳನ್ನು ನೆನಪಿಸಿಕೊಳ್ಳುತ್ತಿದ್ದಾರೆ ಎಂದು ಸವದಿ ವ್ಯಂಗ್ಯವಾಡಿದ್ದಾರೆ. ಜೊತೆಗೆ ಪಕ್ಷದಲ್ಲಿ ನಡೆಯುತ್ತಿರುವ ಪ್ರಸಕ್ತ ಬೆಳವಣಿಗೆಗಳನ್ನು ರಾಷ್ಟ್ರೀಯ ನಾಯಕರು ಶೀಘ್ರವಾಗಿ ಇತ್ಯರ್ಥಪಡಿಸಬೇಕು. ಇಲ್ಲವಾದರೆ ಅದು ಪಕ್ಷಕ್ಕೆ ಮುಜುಗರ ಮತ್ತು ಹಾನಿ ಉಂಟುಮಾಡುತ್ತದೆ ಎಂಬ ಆತಂಕವನ್ನು ಅವರು ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *