Headlines

ಮಾಡಿದ್ದುಣ್ಣೋ ಮಾರಾಯ, ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆಗೆ ಕಾಂಗ್ರೆಸ್ ಪ್ರತಿಕ್ರಿಯೆ

ಮಾಡಿದ್ದುಣ್ಣೋ ಮಾರಾಯ, ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆಗೆ ಕಾಂಗ್ರೆಸ್ ಪ್ರತಿಕ್ರಿಯೆ

ಮಾಡಿದ್ದುಣ್ಣೋ ಮಾರಾಯ, ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆಗೆ ಕಾಂಗ್ರೆಸ್ ಪ್ರತಿಕ್ರಿಯೆ

Prajwal Revanna Case Judgement: ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಅತ್ಯಾ*ಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಈ ತೀರ್ಪಿಗೆ ಕಾಂಗ್ರೆಸ್ ‘ಮಾಡಿದ್ದುಣ್ಣೋ ಮಾರಾಯ’ ಎಂದು ಪ್ರತಿಕ್ರಿಯಿಸಿದೆ. ನ್ಯಾಯಾಲಯವು 11.5 ಲಕ್ಷ ದಂಡವನ್ನೂ ವಿಧಿಸಿದೆ.

ಇಂದು ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಪ್ರಕಟಗೊಂಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಜನರು ಪ್ರತಿಕ್ರಿಯೆಯನ್ನು ನೀಡುತ್ತಿದ್ದಾರೆ. ಇದೀಗ ಈ ತೀರ್ಪಿನ ಸಂಬಂಧ ಕಾಂಗ್ರೆಸ್‌ನಿಂದಲೂ ಪ್ರತಿಕ್ರಿಯೆ ಬಂದಿದೆ.

ಅಪರಾಧಿ ಪ್ರಜ್ವಲ್ ರೇವಣ್ಣಗೆ ಐಪಿಸಿ ಸೆಕ್ಷನ್ 376(2)(k) ಅತ್ಯಾ1ಚಾರ ಅಪರಾಧಕ್ಕೆ ಜೀವಾವಧಿ ಶಿಕ್ಷೆಯಾಗಿದೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ ವಿಡಿಯೋಗಳು ವೈರಲ್ ಆಗಿದ್ದವು. ಈ ವಿಡಿಯೋ ಸಂಬಂಧ ತನಿಖೆಗೆ ಸಿಎಂ ಸಿದ್ದರಾಮಯ್ಯ ಸರ್ಕಾರ ಎಸ್‌ಐಟಿ ರಚಿಸಿ ತನಿಖೆಗೆ ಆದೇಶಿಸಿತ್ತು.

ಪ್ರಕರಣದ ವಿಚಾರಣೆ ನಡೆಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶುಕ್ರವಾರ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿತ್ತು. ಇಂದು ಮಧ್ಯಾಹ್ನ ಶಿಕ್ಷೆ ಪ್ರಮಾಣವನ್ನು ನ್ಯಾಯಾಲಯ ಪ್ರಕಟಿಸಿದೆ. ಈ ವೇಳೆ ನ್ಯಾಯಾಲಯದಲ್ಲಿ ಕೈಕಟ್ಟಿ ನಿಂತಿದ್ದ ದೋಷಿ ಪ್ರಜ್ವಲ್ ರೇವಣ್ಣ, ಕಣ್ಣೀರು ಹಾಕಿದ್ದನು.

ಕಾಂಗ್ರೆಸ್ ಪ್ರತಿಕ್ರಿಯೆ ಏನು?

ಮಾಡಿದ್ದುಣ್ಣೋ ಮಾರಾಯ! ಉಪ್ಪು ತಿಂದ ಮೇಲೆ ನೀರು ಕುಡಿಯಲೇ ಬೇಕು! ಕರ್ಮದ ಫಲವನ್ನು ಇದೇ ಜನ್ಮದಲ್ಲೇ ಅನುಭವಿಸಬೇಕು! ಎಂದು ಕರ್ನಾಟಕ ಕಾಂಗ್ರೆಸ್ ಎಕ್ಸ್ ಖಾತೆಯಿಂದ ಟ್ವೀಟ್ ಮಾಡಲಾಗಿದೆ.

3 ವರ್ಷ ಕಠಿಣ ಕಾರಗೃಹ ಶಿಕ್ಷೆ, 11.5 ಲಕ್ಷ ದಂಡ

376(2)(n) ಸೆಕ್ಷನ್ ಗೆ ಜೀವಾವಧಿ. 354 ಗೆ 3 ವರ್ಷ, 354(b) 3 ವರ್ಷ ಕಠಿಣ ಕಾರಗೃಹ ಶಿಕ್ಷೆ, ಒಟ್ಟು 11.5 ಲಕ್ಷ ದಂಡ ಜೊತೆಗೆ ಒಟ್ಟು ವಿಧಿಸಲಾದ ದಂಡದ ಮೊತ್ತದಲ್ಲಿ ₹11,25,000 ಅನ್ನು ಪೀಡಿತೆಗೆ ಪರಿಹಾರವಾಗಿ ನೀಡಲು ಕೋರ್ಟ್ ಆದೇಶ ಹೊರಬಿದ್ದಿದೆ. ಈ ಮೂಲಕ ಪ್ರಜ್ವಲ್ ರೇವಣ್ಣಗೆ ಬಹುದೊಡ್ಡ ಶಿಕ್ಷೆಯಾಗಿದೆ.

Source link

Leave a Reply

Your email address will not be published. Required fields are marked *