ಬೆಂಗಳೂರು, ಏಪ್ರಿಲ್ 16: ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆಗೆ ಕೇಂದ್ರ ಸರ್ಕಾರ ಮಹತ್ವದ ಯೋಜನೆ ರೂಪಿಸಿದೆ. ಪ್ರಸ್ತುತ ಇರುವ 543 ಲೋಕಸಭಾ ಸ್ಥಾನಗಳನ್ನು 816 ಅಥವಾ 850ಕ್ಕೆ ಏರಿಸುವ ಸಾಧ್ಯತೆಯಿದೆ. ಇದು ಹಲವು ಲಭ್ಯತೆಯ ನಂತರ ದೇಶದ ಲೋಕಸಭಾ ಸ್ಥಾನಗಳಲ್ಲಿ ಹೆಚ್ಚು ದೊಡ್ಡದಾಗಿದೆ. ಮುಂದಿನ ಲೋಕಸಭಾ ಚುನಾವಣೆಯ ಹೊತ್ತಿಗೆ ಈ ಬದಲಾವಣೆಗಳು ಕಾರ್ಯರೂಪಕ್ಕೆ ಬರಬಹುದು. ಒಂದು ವೇಳೆ ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆಯ, ಕರ್ನಾಟಕದಲ್ಲಿ ಪ್ರಸ್ತುತ ಇರುವ 28 ಸ್ಥಾನಗಳು 2011ರ ಜನಗಣತಿ ಆಧಾರದಲ್ಲಿ 41ಕ್ಕೆ ಅಥವಾ ಶೇ 50 ಸೂತ್ರದ ಪ್ರಕಾರ 42ಕ್ಕೆ ಏರಿಕೆಯಾಗುವ ಸಾಧ್ಯತೆಯಿದೆ. ಯಾವ್ಯಾವ ರಾಜ್ಯಗಳಲ್ಲಿ ಹೇಗೆ ಬದಲಾಗಲಿದೆ ಎಂಬ ಮಾಹಿತಿ ಇಲ್ಲಿದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ