Headlines

ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ!

ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ!


ಬೆಂಗಳೂರು, ಜನವರಿ 30: ಕೆ.ಪಿ. ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಗೋವಿಂದರಾಜು 4 ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಚೀಟಿ ವ್ಯವಹಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ವ್ಯಕ್ತಿಯೊಬ್ಬರನ್ನು ಕೇಸ್‌ನಲ್ಲಿ ಸಿಕ್ಕಿಸುವುದಾಗಿ ಬೆದರಿಸಿ ಇನ್ಸ್‌ಪೆಕ್ಟರ್ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ತಿಳಿಸಿದರು. ಮೈಸೂರು ರಸ್ತೆಯ ಆರ್‌ಆರ್‌ ಗ್ರೌಂಡ್ ಬಳಿ ನಡೆಸುತ್ತಿದ್ದ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಅವರನ್ನು ವಶಕ್ಕೆ ಪಡೆದಿದ್ದಾರೆ. ಈ ಪ್ರಕರಣದಲ್ಲಿ ಒಟ್ಟು 5 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಡಲಾಗಿದೆ. ಇದರಲ್ಲಿ 1 ಲಕ್ಷ ರೂಪಾಯಿ ಸೇರಿದ್ದ ಇನ್ಸ್‌ಪೆಕ್ಟರ್, ಉಳಿದ 4 ಲಕ್ಷ ರೂಪಾಯಿ ಸ್ವೀಕರಿಸುವಾಗ ಟ್ರ್ಯಾಪ್ ಆಗಿದ್ದಾರೆ. ಧನರಾಜ್ ಎಂಬುವವರು ನೀಡಿದ ದೂರಿನನ್ವಯ ಈ ಕಾರ್ಯಾಚರಣೆ ನಡೆಸಲಾಯಿತು, ಇನ್ಸ್ ಪೆಕ್ಟರ್ ಗೋವಿಂದರಾಜು ವಿರುದ್ಧ ತನಿಖೆ ಮುಂದುವರಿದಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *