ಲೋಕಾಯುಕ್ತ ದಾಳಿ ವೇಳೆ ಸಚಿವ ಜಮೀರ್ ಆಪ್ತ ಕಾರ್ಯದರ್ಶಿ ಮನೆಯಲ್ಲಿ ಕೋಟಿ ಕೋಟಿ ಮೌಲ್ಯದ ಆಸ್ತಿ ಪತ್ತೆ

ಲೋಕಾಯುಕ್ತ ದಾಳಿ ವೇಳೆ ಸಚಿವ ಜಮೀರ್ ಆಪ್ತ ಕಾರ್ಯದರ್ಶಿ ಮನೆಯಲ್ಲಿ ಕೋಟಿ ಕೋಟಿ ಮೌಲ್ಯದ ಆಸ್ತಿ ಪತ್ತೆ


ಬೆಂಗಳೂರು, ಡಿಸೆಂಬರ್ 24: ಸಚಿವ ಜಮೀರ್ ಅಹ್ಮದ್ ಖಾನ್ ಆಪ್ತ ಕಾರ್ಯದರ್ಶಿ ಸರ್ದಾರ್ ಸರ್ಫರಾಜ್ ಖಾನ್ ನಿವಾಸದಲ್ಲಿ ಲೋಕಾಯುಕ್ತ ದಾಳಿ ಮುಕ್ತಾಯವಾಗಿದ್ದು, ಸರ್ಫರಾಜ್ ಖಾನ್ ಬಳಿ 14.38 ಕೋಟಿ ರೂ. ಮೌಲ್ಯದ ಆಸ್ತಿ ಇದೆ. 8.44 ಕೋಟಿ ರೂ. ಮೌಲ್ಯ ಸ್ಥಿರಾಸ್ತಿ ಮತ್ತು 5.93 ಕೋಟಿ ರೂ. ಮೊತ್ತದ ಚರಾಸ್ತಿ ಇದೆ. 4 ವಾಸದ ಮನೆ ಮತ್ತು 356 ಕೃಷಿ ಜಮೀನು ದಾಖಲೆ, 6,500 ಹಣ, 2.99 ಲಕ್ಷ ಮೌಲ್ಯದ ಚಿನ್ನ, 1.29 ಕೋಟಿ ಎಫ್‌ಡಿ ಇರೋದು ಗೊತ್ತಾಗಿದೆ.

ಅಕ್ರಮ ಆಸ್ತಿ ಗಳಿಕೆ ಆರೋಪದ ಸಂಬಂಧ ಈ ದಾಳಿ ನಡೆದಿದ್ದು, ಬೆಂಗಳೂರಿನ ಹಲಸೂರು ನಿವಾಸ, ಇತರ ಆರು ಮನೆಗಳು ಸೇರಿದಂತೆ ಒಟ್ಟು ಏಳು ಮನೆಗಳು, ಕೊಡಗಿನಲ್ಲಿರುವ ಎರಡು ಕಾಫಿ ಎಸ್ಟೇಟ್‌ಗಳು ಮತ್ತು ಹೆಚ್.ಡಿ.ಕೋಟೆಯ ಒಂದು ರೆಸಾರ್ಟ್ ಸರ್ಫರಾಜ್ ಖಾನ್‌ಗೆ ಸೇರಿದ ಒಟ್ಟು 13 ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸರ್ದಾರ್ ಸರ್ಫರಾಜ್ ಖಾನ್ ವಸತಿ ಇಲಾಖೆಗೆ ನಿಯೋಜನೆಗೊಂಡಿರುವ ಅಧಿಕಾರಿ, ಅವರ ವಿರುದ್ಧ ಅಕ್ರಮ ಆಸ್ತಿ ಗಳಿಕೆಯ ಕುರಿತು ಪ್ರಕರಣ ದಾಖಲಾಗಿದೆ. ಇಂದು (ಡಿ.24) ಬೆಳ್ಳಂಬೆಳಿಗ್ಗೆ 50ಕ್ಕೂ ಹೆಚ್ಚು ಲೋಕಾಯುಕ್ತ ಅಧಿಕಾರಿಗಳು ಮತ್ತು ಸಿಬ್ಬಂದಿ ದಾಳಿ ನಡೆಸಿದ್ದರು. ಎಲ್ಲಾ ಸ್ಥಳಗಳಲ್ಲಿ ದಾಖಲೆಗಳ ಪರಿಶೀಲನೆ ಮತ್ತು ಆಸ್ತಿ ವಿವರಗಳ ಸಂಗ್ರಹ ಕಾರ್ಯ ನಡೆದಿದೆ.

ಇದನ್ನೂ ಓದಿ: ಸಚಿವ ಜಮೀರ್ ಅಹ್ಮದ್ ಆಪ್ತ ಕಾರ್ಯದರ್ಶಿಗೆ ಲೋಕಾಯುಕ್ತ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತು ಇದೆ ಗೊತ್ತೇ?

ಲೋಕಾಯುಕ್ತ ಬಲೆಗೆ ಬಿದ್ದ ಎಸ್ಸಿಪಿ

30 ಸಾವಿರ ರೂ. ಲಂಚ ಸ್ವೀಕರಿಸುವಾಗ ಬೆಂಗಳೂರಿನ ಮಲ್ಲೇಶ್ವರಂ ಉಪ ವಿಭಾಗದ ಎಸ್ಸಿಪಿ ಕೃಷ್ಣಮೂರ್ತಿ ಲೋಕ ಬಲೆಗೆ ಬಿದ್ದಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂ ಕಚೇರಿಯಲ್ಲೇ ಸಿಕ್ಕಿಬಿದ್ದ ಸಾಗರ್ ಹೋಟೆಲ್ ಬಳಿ ಲಂಚ ಸ್ವೀಕರಿಸುವಾಗ. ಪ್ರತಿ ತಿಂಗಳು 32 ಸಾವಿರ ರೂಪಾಯಿ ಕೊಡಬೇಕೆಂದು ಇಸಿಪಿ ಬೇಡಿಕೆ ಇಟ್ಟಿದ್ದು, ಈ ಬಗ್ಗೆ ಲೋಕಾಯುಕ್ತಕ್ಕೆ ಸಾಗರ್ ಹೋಟೆಲ್ ಮಾಲೀಕ ದೂರು ನೀಡಿದ್ದರು. ಎಸ್ಸಿಪಿ ಕೃಷ್ಣಮೂರ್ತಿ ಲಂಚಕ್ಕೆ ಬೇಡಿಕೆ ಇಟ್ಟಿರುವ ಆಡಿಯೋ ಕೂಡ ಲಭ್ಯವಾಗಿತ್ತು. ಈ ಆಧಾರದಲ್ಲಿಯೇ ದೂರು ದಾಖಲಾಗಿತ್ತು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *