ಬೆಂಗಳೂರು, ಮಂಡ್ಯ ಸೇರಿದಂತೆ ಕರ್ನಾಟಕದ 10 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ

ಬೆಂಗಳೂರು, ಮಂಡ್ಯ ಸೇರಿದಂತೆ ಕರ್ನಾಟಕದ 10 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ


ಬೆಂಗಳೂರು, ಮಂಡ್ಯ ಸೇರಿದಂತೆ ರಾಜ್ಯದ 10 ಕಡೆ ಲೋಕಾ ರೆಡ್

ಬೆಂಗಳೂರು, ನವೆಂಬರ್ 25: ಬೆಂಗಳೂರು, ಮಂಡ್ಯ, ಹಾವೇರಿ ಸೇರಿದಂತೆ ರಾಜ್ಯದ ಹತ್ತು ಕಡೆ ಲೋಕಾಯುಕ್ತ ರೈಡ್ (ಲೋಕಾಯುಕ್ತ ದಾಳಿ) ಮಾಡಿದ್ದು, ಬೆಳ್ಳಂಬೆಳಿಗ್ಗೆ ಅಧಿಕಾರಿಗೆ ಶಾಕ್ ನೀಡಿದೆ. ಬೆಂಗಳೂರಿನಲ್ಲಿ ಆರ್‌ಟಿಒ ಸೂಪರಿಂಟೆಂಡೆಂಟ್ ಕುಮಾರಸ್ವಾಮಿ, ಮಂಡ್ಯ ನಗರ ಪಾಲಿಕೆ ಸಿಎಒ ಪುಟ್ಟಸ್ವಾಮಿ, ಬೀದರ್ನ ಕೃಷ್ಣ ಮೇಲ್ದಂಡೆ ಯೋಜನೆ ಇಂಜಿನಿಯರ್ ಪ್ರೇಮ್ ಸಿಂಗ್ ಸೇರಿದಂತೆ 11 ಅಧಿಕಾರಿಗಳ ಮನೆಗಳು, ಕಚೇರಿಗಳ ಮೇಲೆ ದಾಳಿ ನಡೆಸುತ್ತಿರುವ ಲೋಕಾಯುಕ್ತ , ಪರಿಶೀಲನೆ ನಡೆಸುತ್ತಿದ್ದಾರೆ.

ಎಲ್ಲೆಲ್ಲಿ ಲೋಕಾಯುಕ್ತ ದಾಳಿ?

ಬೀದರ್‌ನಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆ ಮುಖ್ಯ ಇಂಜಿನಿಯರ್ ಪ್ರೇಮ್‌ಸಿಂಗ್ ರಾಥೋಡ್ ಮನೆ ಮೇಲೆ ಲೋಕಾಯುಕ್ತ ಡಿವೈಎಸ್‌ಪಿ ಹನುಮಂತರಾಯರ ನೇತೃತ್ವದಲ್ಲಿ ದಾಖಲೆ ಪರಿಶೀಲನೆ ನಡೆಯುತ್ತಿದೆ.ಯಾದಗಿರಿ ಜಿಲ್ಲೆಯ ಶಹಾಪೂರ ತಾಲೂಕಿನ ಭೀಮರಾಯನ ಗುಡಿಯ ನಿವಾಸ ಮತ್ತು ಕಚೇರಿ ಮೇಲೆ ದಾಳಿ ನಡೆಸಲಾಗಿದೆ. ಅಕ್ರಮ ಆಸ್ತಿ ಗಳಿಕೆ ಆರೋಪ ಹಿನ್ನೆಲೆ ಶಿವಮೊಗ್ಗ ಮೆಡಿಕಲ್ ಕಾಲೇಜು ಡಿನ್ನ ಸ್ಟೇಷನ್ ಮನೆ ಮೇಲೆ ಲೋಕಾಯುಕ್ತ ಎಸ್ಪಿ ಮಂಜುನಾಥ್ ಚೌಧರಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಕೊಡಗಿನಲ್ಲಿ ಪಿಡಬ್ಲ್ಯೂಡಿ, ನಗರದ ಗಿರೀಶ್ ಕಚೇರಿ, ಮನೆಗಳ ಮೇಲೆ ಲೋಕಾಯುಕ್ತ ಡಿವೈಎಸ್ಪಿ ದಿನಕರ್ ಶೆಟ್ಟಿ ನೇತೃತ್ವದಲ್ಲಿ ಮೈಸೂರಿನಲ್ಲಿ ದಾಳಿ ನಡೆಸಿದ್ದು, ಮಡಿಕೇರಿಯಲ್ಲಿ ಲೋಕಾಯುಕ್ತ ಸಬ್ ಇನ್ಸ್ ಪೆಕ್ಟರ್ ವೀಣಾ ನಾಯ್ಕ ನೇತೃತ್ವದಲ್ಲಿ ದಾಳಿ ನಡೆದಿದೆ.

ದಾವಣಗೆರೆ ಎಪಿಎಂಸಿ ಸಹಾಯಕ ನಿರ್ದೇಶಕ ಪ್ರಭು ನಿವಾಸ, ಕಚೇರಿ, ನಂತರ ಮನೆ ಮೇಲೆ ಲೋಕಾಯುಕ್ತ ಎಸ್ಪಿ ಎಂ.ಎಸ್.ಕೌಲಾಪುರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.ಹಾವೇರಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಕಾರ್ಯಪಾಲಕ ಇಂಜಿನಿಯರ್ ಶೇಖಪ್ಪ ಸಣ್ಣಪ್ಪ ಮತ್ತಿಕಟ್ಟಿ ನಿವಾಸದ ಮೇಲೆ ಲೋಕಾ ದಾಳಿ ನಡೆದಿದೆ. ಧಾರವಾಡದಲ್ಲಿ ಪ್ರೊ.ಸುಭಾಶ್ಚಂದ್ರ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಮೈಸೂರಿನಲ್ಲಿ ರೆವಿನ್ಯೂ ಇನ್ಸ್ ಪೆಕ್ಟರ್ ರಾಮಸ್ವಾಮಿ ಮನೆಯಲ್ಲಿ ಲೋಕಾಯುಕ್ತ ಪೊಲೀಸರಿಂದ ಪರಿಶೀಲನೆ ನಡೆಯುತ್ತಿದೆ. ಮಂಡ್ಯದಲ್ಲೂ ಏಕಕಾಲಕ್ಕೆ 5 ಕಡೆ ದಾಳಿ ನಡೆಸಿರುವ ಲೋಕಾಯುಕ್ತ ಪೊಲೀಸರು ಪುಟ್ಟಸ್ವಾಮಿ ಮನೆ ಮೇಲೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ.

ಇದನ್ನೂ ಓದಿ ಜಿಬಿಎನ ಟಿವಿಸಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಕಾರಣ ಏನು?

ಕುಲ ಸಚಿವರಾಗಿ ಅಧಿಕಾರ ವಹಿಸಿಕೊಳ್ಳಬೇಕಿದ್ದ ನಾಟೇಕರ್ ಗೆ ಶಾಕ್

ಧಾರವಾಡದ ಕವಿವಿ ಅಂಬೇಡ್ಕರ್ ಸ್ಟಡೀಸ್ ಸಂಯೋಜಕ ನಾಟೀಕರ್ ಅವರ ಯಾಲಕ್ಕಿ ಶೆಟ್ಟರ್ ಕಾಲನಿಯಲ್ಲಿನ ಮನೆ, ಕವಿವಿ ಸಮಾಜಶಾಸ್ತ್ರ ವಿಭಾಗ, ಅಂಬೇಡ್ಕರ್ ಸ್ಟಡೀಸ್, ಕೊಪ್ಪಳದ ಮನೆ, ವಿಜಯಪುರ ಜಿಲ್ಲೆ ತಾಳಿಕೋಟೆಯ ಸ್ವಂತ ಮನೆಯ ಮೇಲೆ ದಾಳಿ ನಡೆದಿದೆ. ನಾಟೀಕರ್‌ಗೆ ಲೋಕಾಯುಕ್ತ ಶಾಕ್ ನೀಡಿದೆ. ನಾಟೀಕರ್ ಇಂದು ಮೌಲ್ಯಮಾಪನ ಕುಲಸಚಿವರಾಗಿ ಅಧಿಕಾರ ವಹಿಸಿಕೊಳ್ಳಬೇಕಿತ್ತು. ಆದರೆ ಅಕ್ರಮ ಆಸ್ತಿ ಗಳಿಕೆ ಹಿನ್ನೆಲೆ ಇಂದು ಬೆಳಗ್ಗೆ ನಾಟೀಕರ್ ಮನೆ ಮತ್ತು ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *