Headlines

ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್: ಕೈ ಸಾಲದು ಎಂದು ಮೆಷಿನ್ ತಂದ ಅಧಿಕಾರಿಗಳು

ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್: ಕೈ ಸಾಲದು ಎಂದು ಮೆಷಿನ್ ತಂದ ಅಧಿಕಾರಿಗಳು


ಬೆಂಗಳೂರು, ಫೆ.13: ಅಕ್ರಮ ಆಸ್ತಿ ಗಳಿಕೆ ಆರೋಪದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (KREIS) ಅಧೀಕ್ಷಕ ಹೆಚ್.ಎಂ. ಜನಾರ್ದನ್ ಅವರಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಬೆಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಧಿಕಾರಿಗಳು ಏಕಕಾಲದಲ್ಲಿ ಆರು ಕಡೆ ದಾಳಿ ನಡೆಸಿ ಶೋಧ ಕಾರ್ಯ ಕೈಗೊಂಡಿದ್ದರು. ಈ ದಾಳಿಯ ವೇಳೆ ಅತ್ಯಂತ ಶಾಕಿಂಗ್ ವಿಚಾರವೊಂದು ಹೊರಬಿದ್ದಿದೆ. ಜನಾರ್ದನ್ ಅವರ ಆಪ್ತ ಸುಜಯ್ ಶೆಟ್ಟಿ ಎಂಬುವವರಿಗೆ ಸೇರಿದ ಪ್ಲಾಟ್‌ನಲ್ಲಿ ಲೋಕಾಯುಕ್ತ ಅಧಿಕಾರಿಗಳು ಶೋಧ ನಡೆಸಿದಾಗ, ಬರೋಬ್ಬರಿ 1.70 ಕೋಟಿ ರೂಪಾಯಿ ನಗದು ಇತ್ತು. ಈ ಹಣವು ಜನಾರ್ದನ್ ಅವರಿಗೆ ಸೇರಿದೆ ಎಂಬ ತನಿಖೆ ತೀವ್ರಗೊಂಡಿತ್ತು. ಜನಾರ್ದನ್ ಅವರಿಗೆ ಸೇರಿದ ಮನೆ, ಕಚೇರಿ ಸೇರಿದಂತೆ ಒಟ್ಟು ಆರು ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿದೆ. ಇದೀಗ ಈ ಬಗ್ಗೆ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇನ್ನು ಲೋಕೋಪಯೋಗಿ ಇಲಾಖೆ (PWD) ಮತ್ತು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ (KREIS) ಇಂಜಿನಿಯರ್‌ಗಳು ಸೇರಿದಂತೆ ನಾಲ್ವರು ಪ್ರಮುಖ ಅಧಿಕಾರಿಗಳು ಮತ್ತು ಕಚೇರಿಗಳ ಮೇಲೆ ನಡೆದ ದಾಳಿಯಲ್ಲಿ ಬರೋಬ್ಬರಿ 23 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಅಕ್ರಮ ಆಸ್ತಿ ಇದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *