ಜಾಮೀನು ಕೊಡಲು ಹಣಕ್ಕೆ ಬೇಡಿಕೆ ಇಟ್ಟ ಇಬ್ಬರು ಪೊಲೀಸ್ ಪೇದೆ ಲೋಕಾಯುಕ್ತ ಬಲೆಗೆ, ಅಟ್ರಾಸಿಟಿ ಪ್ರಕರಣದಲ್ಲಿ ಜಾಮೀನು ಕೊಡಿಸಲು ಹಣಕ್ಕೆ ಬೇಡಿಕೆ ಇಡುತ್ತಿದ್ದಂತೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ

ಕೊಪ್ಪಳದಲ್ಲಿ ಇಬ್ಬರು ಪೊಲೀಸ್ ಪೇದೆಗಳು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅಟ್ರಾಸಿಟಿ ಪ್ರಕರಣ ಒಂದರಲ್ಲಿ ಆರೋಪಿಗಳಿಗೆ ಜಾಮೀನು ಕೊಡಿಸಲು ಇಬ್ಬರು ಪೊಲೀಸ್ ಪೇದೆಗಳು ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆ. ಹಣ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ.

ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ ಪೊಲೀಸ್ ಠಾಣೆಯ ಇಬ್ಬರು ಪೇದೆಗಳಾದ ಮಾರುತಿ ಬ್ಯಾಳಿ ಹಾಗೂ ಚಂದಾಲಿಂಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಮಾಹಿತಿ ಪಡೆದ ಕೊಪ್ಪಳ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಇಬ್ಬರು ಪೊಲೀಸ್ ಪೇದೆಗಳನ್ನು ವಶಕ್ಕೆ ಪಡೆದಿದ್ದಾರೆ.

ಅಟ್ರಾಸಿಟಿ ಪ್ರಕರಣದಲ್ಲಿ ಜಾಮೀನು ಕೊಡೋದಾಗಿ ಹಣಕ್ಕೆ ಬೇಡಿಕೆ ಇಟ್ಟಿದ್ದರು.ಲ ಈ ಕುರಿತು ಮೆಹಬೂಬ್ ಪಾಶಾ ಬಳಿಯಿಂದ 15 ಸಾವಿರ ರೂಪಾಯಿ ಹಣ ಪಡೆದಿದ್ದರು. ಫೋನ್ ಪೇ ಮೂಲಕ ಪೇದೆಗಳು 15 ರೂಪಾಯಿ ಹಣ ಪಡೆದುಕೊಂಡಿದ್ದರು.

15 ಸಾವಿರ ರೂಪಾಯಿ ಹಣ ಪಡೆದ ಬಳಿಕ ಬಾಕಿ ಮೊತ್ತ ಮೂರು ಸಾವಿರ ರೂಪಾಯಿ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಪೊಲೀಸ್ ಪೇದೆಗಳನ್ನು ವಶಕ್ಕೆ ಪಡೆದಿದ್ದಾರೆ.

ಮೂರು ಸಾವಿರ ಪಡೆಯುವಾಗ ಬಲೆಗೆ

Source link
ಜಾಮೀನು ಕೊಡಲು ಹಣಕ್ಕೆ ಬೇಡಿಕೆ ಇಟ್ಟ ಇಬ್ಬರು ಪೊಲೀಸ್ ಪೇದೆ ಲೋಕಾಯುಕ್ತ ಬಲೆಗೆ