ಪ್ರೀತಿ ಹೆಸರಲ್ಲಿ ದೈಹಿಕ ಸಂಪರ್ಕ ಸಾಧಿಸಿ ವಂಚನೆ, ಆತ್ಮಹತ್ಯೆಗೆ ಯತ್ನಿಸಿದ ಯುವತಿ
ರಾಮನಗರ, ಜನವರಿ 15: ರಾಮನಗರದಲ್ಲಿ (ರಾಮನಗರ) ಪ್ರೇಮ ವೈಫಲ್ಯದಿಂದ ಮನನೊಂದು ಯುವತಿಯೊಬ್ಬಳು ಡೆತ್ ನೋಟ್ ಬರೆದು ಮಾತ್ರ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ರಾಮನಗರ ಮಹಿಳಾ ಪೊಲೀಸ್ ಠಾಣೆ ಸಮೀಪವೇ ಈ ಘಟನೆ ನಡೆದಿದ್ದು, ಸಮಯಕ್ಕೆ ಸರಿಯಾಗಿ ಗಮನಿಸಿದ ಪೊಲೀಸರು ಯುವತಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಪ್ರಾಣಪಾಯದಿಂದ ರಕ್ಷಿಸಿದ್ದಾರೆ. ಆತ್ಮಹತ್ಯೆಗೆ ಯತ್ನಿಸಿದ ಯುವತಿ ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರ ತಾಲೂಕಿನ ಗಟ್ಟಿಗುಂದ ಗ್ರಾಮದ ನಿವಾಸಿ. ಆಕೆಯಲ್ಲಿ ಕೆಲಸ ಮಾಡುತ್ತಿದ್ದು, ಕಳೆದ ಒಂದೂವರೆ ವರ್ಷಗಳಿಂದ ಕನಕಪುರ ತಾಲ್ಲೂಕಿನ ತೆರಿಗೆದೊಡ್ಡಿ ಗ್ರಾಮದ ಅರುಣ್ ನಾಯ್ಕ ಎಂಬ ಯುವಕನನ್ನು ಪ್ರೀತಿಸುತ್ತಿದ್ದರು.
ಪ್ರೀತಿಯ ಹೆಸರಿನಲ್ಲಿ ಅರುಣ್ ನಾಯ್ಕ್ ಯುವತಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದ. ಇದೀಗ ವಿವಾಹವಾಗಲು ನಿರಾಕರಿಸುತ್ತಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಈ ವಿಚಾರವಾಗಿ ಕಳೆದ ಎರಡು ತಿಂಗಳಿಂದ ಇಬ್ಬರ ನಡುವೆ ರಾಜಿಧಾನಕ್ಕೂ ನಡೆದಿದ್ದರೂ, ಪ್ರೇಮಿಯಾದ ಯುವತಿ ತೀವ್ರವಾಗಿ ಮನನೊಂದಿದ್ದಾರೆ.
ಇದೇ ಕಾರಣದಿಂದ ಬೆಂಗಳೂರಿನಿಂದ ರಾಮನಗರಕ್ಕೆ ಬಂದ ಯುವತಿ ಡೆತ್ ನೋಟ್ ಬರೆದು ಮಾತ್ರ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅಸ್ವಸ್ಥಗೊಂಡ ಅವರನ್ನು ತಕ್ಷಣ ರಾಮನಗರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಚಿಕಿತ್ಸೆ ಮುಂದುವರಿದಿದೆ.
ಕುಡಿಯುವ ನೀರು ಕೇಳುವ ನೆಪದಲ್ಲಿ ಸರಗಳ್ಳತನ, ಆರೋಪಿಗಳ ಬಂಧನ
ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆ ಕುಡಿಯುವ ನೀರು ಕೇಳುವ ನೆಪದಲ್ಲಿ ಸರಗಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಒಟ್ಟು 59 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತರು ಎರಡು ಸರಗಳ್ಳತನ ಪ್ರಕರಣಗಳಲ್ಲಿ ಶಾಮೀಲಾಗಿ ತನಿಖೆಯಿಂದ ಬೆಳಕಿಗೆ ಬಂದಿವೆ. ಮನೆಗಳಿಗೆ ನೀರು ಕೇಳುವ ನೆಪದಲ್ಲಿ ಪ್ರವೇಶಿಸಿ, ಚಿನ್ನಾಭರಣಗಳನ್ನು ಕಳ್ಳತನ ಮಾಡುತ್ತಿರುವಂತೆ ಆರೋಪಿಗಳು ಒಪ್ಪಿಕೊಂಡಿದ್ದಾರೆ.
ಇದನ್ನೂ ಓದಿ: ಐದು ವರ್ಷದ ಬಾಲಕಿಯನ್ನು ಬೆದರಿಸಿ 55 ವರ್ಷದ ವ್ಯಕ್ತಿಯಿಂದ 5 ದಿನಗಳ ಕಾಲ ಅತ್ಯಾಚಾರ
ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ, ಈ ಸಂಬಂಧ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ