Headlines

ಮುಗಿಯಿತು ‘ಲವ್ ಸೀಸನ್ಸ್’ ಸಿನಿಮಾ ಶೂಟಿಂಗ್; ಇಲ್ಲಿದೆ ಮೇಕಿಂಗ್ ವಿಡಿಯೋ

ಮುಗಿಯಿತು ‘ಲವ್ ಸೀಸನ್ಸ್’ ಸಿನಿಮಾ ಶೂಟಿಂಗ್; ಇಲ್ಲಿದೆ ಮೇಕಿಂಗ್ ವಿಡಿಯೋ


ಮುಗಿಯಿತು 'ಲವ್ ಸೀಸನ್ಸ್' ಸಿನಿಮಾ ಶೂಟಿಂಗ್; ಇಲ್ಲಿದೆ ಮೇಕಿಂಗ್ ವಿಡಿಯೋ

‘ಲವ್ ಸೀಸನ್ಸ್’ (ಪ್ರೀತಿಯ ಋತುಗಳು) ಸಿನಿಮಾದ ಶೂಟಿಂಗ್ ಮುಗಿದಿದೆ. ರಂಗಭೂಮಿ ಹಿನ್ನೆಲೆಯ ಕೃತ್ವಿಕ್ ನಿರ್ದೇಶನದಲ್ಲಿ ಈ ಸಿನಿಮಾ ಸಿದ್ಧವಾಗುತ್ತಿದೆ. ಈಗ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ರಂಗಭೂಮಿ ಹಿನ್ನೆಲೆ ಹೊಂದಿರುವ ಹೊಸ ಕಲಾವಿದರು ಈ ಸಿನಿಮಾದಲ್ಲಿ ಪ್ರಮುಖ ಪಾತ್ರಗಳನ್ನು ಮಾಡುತ್ತಿದ್ದಾರೆ. ಮಂಡ್ಯ ರಮೇಶ್ ಅವರ ‘ನಟನಾ’ ಸಂಸ್ಥೆಯಲ್ಲಿ ಅಭಿನಯದ ಪಾಠ ಕಲಿತಿರುವ ಮುಕುಂದ ರಾಮಸ್ವಾಮಿ ಹೀರೋ ಆಗಿ ನಟಿಸಿದ್ದಾರೆ. ದಿಯಾ ಕೀರ್ತಿ, ಚಂದನಾ ಗೌಡ, ಶ್ವೇತಾ ಕೊಗ್ಲೂರ್ ಅವರು ನಾಯಕಿಯರಾಗಿ ಅಭಿನಯ ಮಾಡಿದ್ದಾರೆ. ಮಂಡ್ಯ ರಮೇಶ್, ರಾಜೇಶ್ ನಟರಂಗ, ಜಯತೀರ್ಥ, ಸಂಗೀತಾ, ಚೇತನ್ ದುರ್ಗ, ಹುಲಿ ಕಾರ್ತಿಕ್, ಬೇಬಿ ರಿತು ಸಿಂಗ್ ಕೂಡ ಪಾತ್ರವರ್ಗದಲ್ಲಿದ್ದಾರೆ. ‘ಎನ್.ಆರ್. ಸ್ಟುಡಿಯೋಸ್’ ಬ್ಯಾನರ್ ಮೂಲಕ ಎನ್.ಆರ್. ಮಂಜುನಾಥ (ನೀಲೇರಿ) ಅವರು ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ವೀರ್ ಸಮರ್ಥ್ ಅವರು ಸಂಗೀತ ಸಂಯೋಜನೆಯನ್ನು ಮಾಡಿದ್ದಾರೆ. ಕೆ.ಕಲ್ಯಾಣ್, ಪ್ರಮೋದ್ ಮರವಂತೆ ಮುಂತಾದವರು ಸಾಹಿತ್ಯ ಬರೆದಿದ್ದಾರೆ. ಅವಿನಾಶ ಶಾಸ್ತ್ರಿ ಅವರ ಛಾಯಾಗ್ರಹಣ, ಮಧು ತುಂಬಕೆರೆ ಅವರ ಸಂಕಲನ ಈ ಚಿತ್ರಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *