ಮಂಗಳಮುಖಿ ಎಂದು ಗೊತ್ತಿದ್ದರೂ ಪ್ರೀತಿಯಲ್ಲಿ ಬಿದ್ದ ಯುವಕ: ಆಮೇಲಾಗಿದ್ದು ದುರಂತ

ಮಂಗಳಮುಖಿ ಎಂದು ಗೊತ್ತಿದ್ದರೂ ಪ್ರೀತಿಯಲ್ಲಿ ಬಿದ್ದ ಯುವಕ: ಆಮೇಲಾಗಿದ್ದು ದುರಂತ


ಶೇಖರ್ ಅಲಿಯಾಸ್ ಮಣಿ, ಸುಹಾಸಿನಿಚಿತ್ರದ ಕ್ರೆಡಿಟ್ ಮೂಲ: tv9

ಬಳ್ಳಾರಿ, ಫೆಬ್ರವರಿ 18: ಬಳ್ಳಾರಿ (ಬಳ್ಳಾರಿ) ನಗರದ ಕೆಎಂಎಫ್ (ಕೆಎಂಎಫ್) ಡೈರಿ ಕ್ರಾಸ್ ಬಳಿಯ ಬಾಡಿಗೆ ಮನೆಯಲ್ಲಿ ಪರಸ್ಪರ ಪ್ರೀತಿಸುತ್ತಿದ್ದ ಮಂಗಳಮುಖಿ ಮತ್ತು ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ಮನೆಯ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರ ಶವಗಳು ಇದ್ದಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಮೃತರನ್ನು ಮಂಗಳಮುಖಿ ಸುಹಾಸಿನಿ (29) ಹಾಗೂ ಶೇಖರ್ ಅಲಿಯಾಸ್ ಮಣಿ (31) ಎಂದು ಗುರುತಿಸಲಾಗಿದೆ. ಶೇಖರ್ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಮಲ್ಪನಗುಡಿ ಗ್ರಾಮದ ನಿವಾಸಿ, ಆಟೋ ಚಾಲಕರಾಗಿ ಜೀವನ ನಡೆಸುತ್ತಿದ್ದರು. ಸುಹಾಸಿನಿ ಬಳ್ಳಾರಿ ತಾಲೂಕಿನ ಚಾಗನೂರು ಗ್ರಾಮದ ಸುಮಾರು.

ಇಬ್ಬರೂ ಕಳೆದ ಆರು ವರ್ಷಗಳಿಂದ ಒಟ್ಟಿಗೆ ವಾಸವಾಗಿದ್ದರು. ಸುಹಾಸಿನಿ ಮಂಗಳಮುಖಿ ಎಂದು ಗೊತ್ತಿದ್ದರೂ ಶೇಖರ್ ಪ್ರೀತಿಸುತ್ತಿದ್ದರು.

ಘಟನೆ ಕುರಿತು ಮಾಹಿತಿ ಪಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಂತರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಬಳ್ಳಾರಿ ಬಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಪ್ರಕರಣ ಸಂಬಂಧ ಬ್ರೂಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಮಂಗಳಮುಖಿಯರಿಂದ ಗಂಭೀರ ಆರೋಪ

ಮಂಗಳಮುಖಿ ಸಮುದಾಯದ ಸದಸ್ಯರು ಶೇಖರ್ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಹಣಕ್ಕಾಗಿ ಸುಹಾಸಿನಿಯ ಜೊತೆ ಇದ್ದ ಶೇಖರ್, ನಂತರ ಕೊಲೆ ಮಾಡಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. ಆದರೆ ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಬಗ್ಗೆ ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸುತ್ತಿದೆ.

ಇದನ್ನೂ ಓದಿ: ಫ್ರೀಯಾಗಿ ಮೂವಿ ಸಿಗುತ್ತೆ ಎಂದು ಡೌನ್ ಲೋಡ್ ಮಾಡ್ತಿದ್ದಿರಾ? ಡೌನ್ ಲೋಡ್ ಆಗುವ ಸಮಯವೇ ಆಗುತ್ತೆ ವಂಚಕರಿಗೆ ವರದಾನ, ಹೇಗೆ ಗೊತ್ತಾ?

ಮತ್ತೊಂದೆಡೆ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಸಾವಿನ ನಿಖರವಾದ ಕಾರಣ ಮರಣ ವರದಿ ನಂತರವೇ ತಿಳಿಯಲಿದೆ ಎಂದು ತಿಳಿದುಬಂದಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *