
ಮಡಿಕೇರಿ, ಏಪ್ರಿಲ್ 05: ಒಟ್ಟು ಮಡಿಕೇರಿ ತಾಲೂಕಿನ ಕಕ್ಕಬ್ಬೆ ಗ್ರಾಮದಲ್ಲಿ ಟ್ರೆಕ್ಕಿಂಗ್‌ಗೆ ತೆರಳಿದ್ದ ಕೇರಳ ಮೂಲದ ಯುವತಿ ನಾಪತ್ತೆಯಾಗಿ ಮೂರು ದಿನಗಳಾದರೂ ಆಕೆಗೆ ಸುಳಿವು ಮಾತ್ರ ಈವರೆಗೂ ಸಿಕ್ಕಿಲ್ಲ. ಎರ್ನಾಕುಲಂನಲ್ಲಿ ಐಟಿ ಉದ್ಯೋಗಿಯಾಗಿರುವ ಕೇರಳದ ಕೋಯಿಕ್ಕೋಡ್ ನಿವಾಸಿ 35 ವರ್ಷದ ಶರಣ್ಯಾ ಕಕ್ಕಬ್ಬೆ ಗ್ರಾಮದ ಹೋಂಸ್ಟೇಯೊಂದರಿಂದ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆಂದು ತೆರಳಿದ್ದಳು. ಬೆಳಗ್ಗೆ 8.30ರ ಸುಮಾರಿಗೆ ಟ್ರೆಕ್ಕಿಂಗ್ ಗೆ ತೆರಳಲು ಅರಣ್ಯ ಇಲಾಖೆ ಚೆಕ್ ಪೋಸ್ಟ್ ಬಳಿ ಈಕೆ ಬಂದಿದ್ದಳು. ಆದರೆ ಯಾರೊಬ್ಬರನ್ನೇ ಟ್ರೆಕ್ಕಿಂಗ್ ಬಿಡದ ಕಾರಣ ಬೇರೊಂದು ಗ್ರೂಪ್ ಬಂದ ಅವರ ಬಳಿಕ ಈಕೆಯನ್ನ ಕಳುಹಿಸಲಾಯಿತು. ಆದರೆ ಶರಣ್ಯಾ ಬೆಟ್ಟದಿಂದ ವಾಪಸ್ ಬಾರದ ಕಾರಣ, ಆಕೆಗಾಗಿ ಕಳೆದ ಮೂರು ದಿನಗಳಿಂದ ಶೋಧ ನಡೆಯುತ್ತಿದೆ.
ಬೆಳಿಗ್ಗೆ ಟ್ರೆಕ್ಕಿಂಗ್ ಗೆಂದು ತೆರಳಿದ್ದವರು ಮಧ್ಯಾಹ್ನ 1.30ರ ವೇಳೆಗೆ ಅರಣ್ಯ ಇಲಾಖೆ ಚೆಕ್ ಪೋಸ್ಟ್ ಸಲ್ಲಿಸಬೇಕಿತ್ತು. ಹೀಗಾಗಿ ಶರಣ್ಯಾಳನ್ನು ತೆಗೆದುಕೊಳ್ಳಲೆಂದು ಹೋಮ್ ಸ್ಟೇ ಮಾಲೀಕ ತಮ್ಮ ಸ್ಕೂಟಿ ಸಮೇತ ಸ್ಥಳಕ್ಕೆ ಬಂದಿದ್ದರು. ಆ ಬಳಿಕ ಶರಣ್ಯಾಗೆ ಅವರು ಕರೆ ಮಾಡಿದಾಗ ನಾಟ್ ರೀಚೇಬಲ್ ಬಂದಿದೆ. ಮತ್ತೆರಡು ಬಾರಿ ಪ್ರಯತ್ನಿಸಿದಾಗ ಕರೆ ಸ್ವೀಕರಿಸಿದ ಆಕೆ, ತಾನು ದಾರಿ ತಪ್ಪಿದ್ದೇನೆ ಎಂದು ಹೇಳಿದ್ದಾಳೆ. ಅಷ್ಟರಲ್ಲಿ ಫೋನ್ ಕಟ್ ಆಗಿದೆಯಂತೆ. ಅದಾದ ಬಳಿಕ ಫೋನ್ ಮತ್ತೆ ಕನೆಕ್ಟ್ ಆಗಿಲ್ಲ. ಕೂಡಲೇ ಅವರ ವಿಷಯವನ್ನು ಅರಣ್ಯ ಇಲಾಖೆಗೆ ತಿಳಿಸಿದ್ದು, ಎಲ್ಲರೂ ಸೇರಿ ಸಂಜೆ ಬೆಟ್ಟದ ಮೇಲೆ ಹೋಗಿದ್ದಾರೆ. ಅದ್ರೆ ಅಲ್ಲೆಲ್ಲೂ ಯುವತಿ ಕಂಡಿಲ್ಲ. ಹೆಚ್ಚಿನ ಅರಣ್ಯ ಇಲಾಖೆ, ಪೊಲೀಸ್ ಇಲಾಖೆ ಸಿಬ್ಬಂದಿ ಸೇರಿ ಸ್ಥಳೀಯರೆಲ್ಲರೂ ಯುವತಿಗಾಗಿ ಹುಡುಕಿದ್ದಾರೆ. ಆದರೆ ಎಲ್ಲೂ ಕೂಡ ಅವಳ ಸುಳಿವೇ ಸಿಕ್ಕಿಲ್ಲ. ಈ ಕಾರ್ಯಾಚರಣೆ ಮೂರು ದಿನ ಕಳೆದರೂ ಶರಣ್ಯಾ ಪತ್ತೆ ಮಾತ್ರ ಆಗಿಲ್ಲ.
ಇದನ್ನೂ ಓದಿ: ಟ್ರೆಕ್ಕಿಂಗ್‌ಗೆ ತೆರಳಿದ್ದ ಕೇರಳದ ಯುವತಿ ಮಡಿಕೇರಿಯಲ್ಲಿ ನಾಪತ್ತೆ; 4 ತಂಡಗಳಿಂದ ಶೋಧ ಕಾರ್ಯ
ಅರಣ್ಯ ಮತ್ತು ಪೊಲೀಸ್ ಇಲಾಖೆ ಹಾಗೂ ನಕ್ಸಲ್ ನಿಗ್ರಹ 60ಕ್ಕೂ ಅಧಿಕ ಸಿಬ್ಬಂದಿ, ಸ್ಥಳೀಯರು ಕಾರ್ಯಾಚರಣೆ ನಡೆಸುತ್ತಿದ್ದರು, ವಿಚಿತ್ರ ಅಂದ್ರೆ ಶರಣ್ಯಾ ಕಳೆದ 15 ವರ್ಷಗಳಿಂದ ಟ್ರೆಕ್ಕಿಂಗ್ ಹೋಗಿ ಅನುಭವ ಹೊಂದಿರುವ ಯುವತಿ. ಆಕೆಗೆ ದಾರಿ ತಪ್ಪಿ ನಾಪತ್ತೆಯಾಗುವ ಸಾಧ್ಯತೆ ಕಡಿಮೆ. ಆ ಕಾರಣಕ್ಕೆ ಕಾಡು ಪ್ರಾಣಿಗಳ ದಾಳಿಗೆ ಯುವತಿ ತುತ್ತಾಗಿರಬಹುದಾ ಎಂಬ ಶಂಕೆ ಶುರುವಾಗಿದೆ. ಅದೂ ಅಲ್ಲದೆ ಬೆಟ್ಟದ ದಾರಿ ಬಹಳ ಸ್ಪಷ್ಟವಾಗಿದ್ದು, ಎಲ್ಲಿಯೂ ದಾರಿ ತಪ್ಪುವ ಸಾಧ್ಯತೆ ಇಲ್ಲ. ಹೀಗಿರುವಾಗ ಟ್ರೆಕ್ಕಿಂಗ್ ಅನುಭವ ಇರುವ ಈಕೆ ಹೇಗೆ ದಾರಿ ತಪ್ಪುತ್ತಾಳೆ ಎನ್ನುವ ಪ್ರಶ್ನೆಯೂ ಉದ್ಭವಿಸಿದೆ. ಅದಲ್ಲದೆ, ಅರಣ್ಯ ಇಲಾಖೆಯ ಚೆಕ್ ಪೋಸ್ ಬಳಿಯ ಸಿಸಿಟಿವಿ ಕೆಲಸ ಮಾಡದೆ ಇರೋದು ಕೂಡ ಹಲವು ಅನುಮಾನಗಳಿಗೆ ಕಾರಣವಾಗಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.