ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಹಲ್ಲೆ ಕೇಸ್​ ಗೆ ಟ್ವಿಸ್ಟ್: ನೊಂದು ಆತ್ಮಹತ್ಯೆಗೆ ಯತ್ನಿಸಿದ್ದನಾ ಬಾಲಕ?

ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಹಲ್ಲೆ ಕೇಸ್​ ಗೆ ಟ್ವಿಸ್ಟ್: ನೊಂದು ಆತ್ಮಹತ್ಯೆಗೆ ಯತ್ನಿಸಿದ್ದನಾ ಬಾಲಕ?


ಚಿತ್ರದುರ್ಗ, ಅಕ್ಟೋಬರ್ 21: ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿ ಮುಖ್ಯ ಶಿಕ್ಷಕ ಕ್ರೌರ್ಯ ಮೆರೆದಿರುವ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಗ್ರಾಮದ ಸಂಸ್ಕೃತ ವೇದಾಧ್ಯಯನ ಶಾಲೆಯಲ್ಲಿ ನಡೆದಿತ್ತು. ಗುರು ತಿಪ್ಪೇರುದ್ರಸ್ವಾಮಿ ದೇಗುಲಕ್ಕೆ ಸೇರಿದ ವೇದಾಧ್ಯಯನ ಶಾಲೆಯ ಉತ್ತರ ಕರ್ನಾಟಕ ಮೂಲದ ವಿದ್ಯಾರ್ಥಿ ಮೇಲೆ ಮುಖ್ಯ ಶಿಕ್ಷಕ ವೀರೇಶ್ ಹಿರೇಮಠ್ ಮನಸೋ ಇಚ್ಛೆ ಹಲ್ಲೆ ನಡೆಸಿದ್ದರು. ಈ ಪ್ರಕರಣಕ್ಕೆ ಈಗ ಟ್ವಿಸ್ಟ್ ಸಿಕ್ಕಿದೆ. ಘಟನೆಯಿಂದ ನೊಂದ ಬಾಲಕ ಆತ್ಮಹತ್ಯೆಗೆ ಯತ್ನಿಸಿದ್ದ ಎಂಬ ವಿಚಾರವನ್ನು ಸ್ಥಳೀಯರು ಬಹಿರಂಗಪಡಿಸಿದ್ದಾರೆ.

ವಿದ್ಯಾರ್ಥಿಗಳ ಮೇಲೆ ಹಲ್ಲೆ ವಿಷಯ ತಿಳಿಯದಂತೆ ಸ್ಥಳೀಯರು ಸಂಸ್ಕೃತ ಪಾಠ ಶಾಲೆಗೆ ಮುತ್ತಿಗೆ ಹಾಕಿದ್ದು, ಇಓ ಗಂಗಾಧರಪ್ಪ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಶಿಕ್ಷಕ ವಿರೇಶ್‌ಗೆ ಸಂಸ್ಕೃತ ಬರಲ್ಲ, ಶಾಲೆಯಲ್ಲಿ ಇರಲ್ಲ. ಬದಲಾಗಿ ಪೂಜೆ , ವಾಮಾಚಾರ ಮಾಡಲು ಹೋಗುತ್ತಾನೆ. ಮಕ್ಕಳ ಮೇಲೆ ನಿರಂತರ ಕ್ರೌರ್ಯ ಮೆರೆಯುತ್ತಿದ್ದಾನೆಂದು ಆರೋಪಿಸಿದ್ದಾರೆ. ಫೆ10, 2025ರಂದು ಈ ಪ್ರಕರಣ ನಡೆದಿದ್ದು, ನೊಂದ ಬಾಲಕ ಕೆರೆ ಬಳಿಗೆ ತೆರಳಿ ಆತ್ಮಹತ್ಯೆಗೆ ಮುಂದಾಗಿದ್ದ. ಆಟೋದವನೊಬ್ಬ ಆತನನ್ನು ರಕ್ಷಿಸಿದ್ದಾನೆ. ಬಳಿಕ ಕೂಡ್ಲಗಿ ತಾಲೂಕಿನ ಅಪ್ಪೇನಹಳ್ಳಿಯಿಂದ ಅಜ್ಜಿ ಬಂದು ಮೊಮ್ಮಗನನ್ನು ಕರೆದೊಯ್ದಿದ್ದಾಳೆ. ಸದ್ಯ ಬಾಲಕ ಗುಡಿಕೋಟೆ ಗ್ರಾಮದ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾನೆ. ಎಲ್ಲ ಸೇರಿ ಪ್ರಕರಣ ಹೊರಬರದಂತೆ ಮುಚ್ಚಿ ಹಾಕಿದ್ದಾರೆ ಎಂದು ಸ್ಥಳೀಯರು ದೂರಿದ್ದಾರೆ.

ಇದನ್ನೂ ಓದಿ: ಪೆಟ್ರೋಲ್ ಬಂಕಲ್ಲಿ ಕೆಲಸ ಮಾಡುತ್ತಿರುವ ಯುವಕನ ಜೊತೆ ಎಂಜಿನಿಯರಿಂಗ್ ಓದ್ತಿರೋ ಯುವತಿಗೆ ಲವ್, ಮದುವೆ! ಆಮೇಲೇನಾಯ್ತು?

‘ಬಾಲಕನ ಮೇಲೆ ಹಲ್ಲೆ ಅಕ್ಷಮ್ಯ’

ಸಂಬಂಧ ಮುಜರಾಯಿ ಸಚಿವ ರಾಮಲಿಂಗರೆಡ್ಡಿ ಕೂಡ ಒಂದು ಘಟನೆ ಹೇಳಿದ್ದಾರೆ. ಇದು ಖಾಸಗಿ ಸಂಸ್ಕೃತ ಶಾಲೆ, ನಮ್ಮ ಇಲಾಖೆ ವ್ಯಾಪ್ತಿಗೆ ಬರುತ್ತದೆ. 9 ವರ್ಷದ ಬಾಲಕನ ಮೇಲೆ ಮುಖ್ಯ ಶಿಕ್ಷಕಿ ಹಲ್ಲೆ ಮಾಡಿದ್ದು ಅಕ್ಷಮ್ಯ. ಈ ಸಂಬಂಧ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಬೇರೆ ಬೇರೆ ಶಾಲೆಗಳಿಂದ ಯಾವುದೇ ದೂರು ಬರದಿದ್ದರೂ ಎಲ್ಲ ಸಂಸ್ಕೃತ ಶಾಲೆಗಳ ಬಗ್ಗೆ ಗಮನಹರಿಸಲು ಹೇಳಲಾಗಿದೆ.

ವಿಷಯ ತಿಳಿಯದಂತೆ ನಾಯಕನಹಟ್ಟಿ ಸಂಸ್ಕೃತ ಶಾಲೆಗೆ ಡಿಡಿಪಿಐ ಮಂಜುನಾಥ್ ಭೇಟಿ ನೀಡಿದರು. ಪ್ರಕರಣದ ಬಗ್ಗೆ ಜಿಲ್ಲಾಧಿಕಾರಿಗೆ ವರದಿ ನೀಡುತ್ತೇವೆ. ಸಂಸ್ಕೃತ ಶಾಲೆ ನಮ್ಮ ವ್ಯಾಪ್ತಿಗೆ ಬರಲ್ಲ, ಮುಜರಾಯಿ ಇಲಾಖೆ ಇದೆ. ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮದ ಜೊತೆಗೆ ದೌರ್ಜನ್ಯಕ್ಕೊಳಗಾದ ವಿದ್ಯಾರ್ಥಿಗೆ ಸೂಕ್ತ ವಿದ್ಯಾಭ್ಯಾಸಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಶಿಕ್ಷಕ ವೀರೇಶ್ ಅಮಾನವೀಯ ವರ್ತನೆ ಬಗ್ಗೆ ಗೊತ್ತಾಗಿದ್ದು,ಕಾನೂನು ಕ್ರಮ ಕೈಗೊಳ್ಳಲು ಸೂಚಿಸುತ್ತೇವೆ ಎಂದು ತಹಶೀಲ್ದಾರ್ ರೆಹನ್ ಪಾಷಾ ಕೂಡ ಸೂಚಿಸಿದ್ದಾರೆ. ಘಟನೆಯ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ಸಿಸಿಟಿವಿ ಅಳವಡಿಸದೆ ಇರುವ ಬಗ್ಗೆಯೂ ಪರಿಶೀಲಿಸಲು.

ಘಟನೆಯ ಬಗ್ಗೆ ತಿಪ್ಪೇಸ್ವಾಮಿ ದೇಗುಲದ ಕಾರ್ಯನಿರ್ವಾಹಕ ಗಂಗಾಧರಪ್ಪ ಅರ್ಜಿ ನಾಯಕನಹಟ್ಟಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ವಿದ್ಯಾರ್ಥಿ ಮದೆಲಿನ ಹಲ್ಲೆ ವಿಡಿಯೋ ವೈರಲ್ ಬಳಿಕ ನಾಪತ್ತೆಯಾಗಿದ್ದ ಶಿಕ್ಷಕನನ್ನು ಸದ್ಯ ಪೊಲೀಸರು ಬಂಧಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *