ಖ್ಯಾತ ಮಲಯಾಳಂ ನಟ, ನಿರ್ದೇಶಕ ಶ್ರೀನಿವಾಸನ್ ಇಂದು (ಡಿಸೆಂಬರ್ 20) ನಿಧನರಾಗಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು. ಹಲವು ವರ್ಷಗಳಿಂದ ಅವರು ವಿವಿಧ ಕಾಯಿಲೆಯಿಂದ ಬಳಲುತ್ತಿದ್ದಾರೆ. ಅವರು ಕೇರಳದ ಉದಯಂಪೆರೂರ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾದರು.
ಶ್ರೀನಿವಾಸನ್ ಅವರಿಗೆ ಕೆಲವು ಅನಾರೋಗ್ಯ ಸಮಸ್ಯೆಗಳು ಇದ್ದವು. ಕಳೆದ ಕೆಲ ವರ್ಷಗಳಿಂದ ಅವರ ಆರೋಗ್ಯ ಹದಗೆಟ್ಟಿತ್ತು. ಹೀಗಾಗಿ, ಸಿನಿಮಾ ರಂಗದಲ್ಲಿ ಅವರು ಅಷ್ಟಾಗಿ ಆ್ಯಕ್ಟೀವ್ ಆಗಿರಲಿಲ್ಲ. ಇತ್ತೀಚೆಗೆ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ, ಅವರನ್ನು ಬದುಕಿಸಿಕೊಳ್ಳಲು ವೈದ್ಯರ ಬಳಿ ಸಾಧ್ಯವಾಗಿಲ್ಲ.
ನಟನಾಗಿ, ಸಿನಿಮಾ ಬರಹಗಾರನಾಗಿ, ನಿರ್ದೇಶಕನಾಗಿ ಅವರು ಗುರುತಿಸಿಕೊಂಡಿದ್ದರು. ಅವರ ನಿಧನವು ಮಲೆಯಾಳಂ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಸಾವಿಗೆ ಅನೇಕ ಸೆಲೆಬ್ರಿಟಿಗಳು ಸಂತಾಪ ಸೂಚಿಸುತ್ತಿದ್ದಾರೆ. ಮಲಯಾಳಂ ಚಿತ್ರರಂಗದ ಸ್ಟಾರ್ ಹೀರೋಗಳ ಜೊತೆ ಅವರಿಗೆ ಒಳ್ಳೆಯ ಒಡನಾಟ ಇತ್ತು. ಕೇರಳದ ಕಣ್ಣೂರ್ ಜಿಲ್ಲೆಯಲ್ಲಿ 1956ರ ಏಪ್ರಿಲ್ 6 ರಂದು ಶ್ರೀನಿವಾಸನ್ ಜನಿಸಿದರು. ಅವರು ಅರ್ಥ ಶಾಸ್ತ್ರದಲ್ಲಿ ಪದವಿ ಪಡೆದಿದ್ದಾರೆ. ಆ ನಂತರ ಚೆನ್ನೈನಲ್ಲಿ ಅವರು ಫಿಲ್ಮ್ ಆಯಂಡ್ ಟೆಲಿವಿಷನ್ ಸಂಸ್ಥೆಯಲ್ಲಿ ಸಿನಿಮಾ ಸಂಬಂಧಿತ ತರಬೇತಿ ಪಡೆದರು.
1976ರ ‘ಮನಿಮುಳಕ್ಕಮ್’ ಅವರ ನಟನೆಯ ಮೊದಲ ಸಿನಿಮಾ. ಆ ಬಳಿಕ ಹಲವು ಸಿನಿಮಾಗಳಲ್ಲಿ ನಟಿಸಿದರು. ವೃತ್ತಿ ಜೀವನದ ಪ್ರಸ್ತುತ2-3 ತಮಿಳು ಸಿನಿಮಾ ಮಾಡಿದ್ದು ಉಳಿದ ಎಲ್ಲಾ ಚಿತ್ರಗಳನ್ನು ಅವರು ಮಾಡಿದ್ದು ಮಲೆಯಾಳಂನಲ್ಲಿಯೇ. ಸುಮಾರು 40 ವರ್ಷಗಳ ಕಾಲ ಚಿತ್ರರಂಗದಲ್ಲಿ ಶ್ರಮಿಸಿದ ಅವರು, 200ಕ್ಕೂ ಅಧಿಕ ಸಿನಿಮಾ ಮಾಡಿದ್ದಾರೆ. ಅವರು ಕೊನೆಯ ಬಾರಿಗೆ ಬಣ್ಣ ಹಚ್ಚಿದ್ದು 2018ರಲ್ಲಿ.
ಚಿತ್ರಕಥೆ ಬರಹಗಾರನಾಗಿಯೂ ಶ್ರೀನಿವಾಸನ್ ಕೆಲಸ ಮಾಡಿದ್ದಾರೆ. ಅವರು ಮಮ್ಮೂಟ್ಟಿ ಹಾಗೂ ನಿವೀನ್ ಪೌಳಿಗೆ ತಲಾ ಒಂದೊಂದು ಸಿನಿಮಾ ನಿರ್ದೇಶನ ಮಾಡಿದ್ದಾರೆ. ಎರಡು ಸಿನಿಮಾ ನಿರ್ಮಿಸಿದ್ದಾರೆ. ಶ್ರೀನಿವಾಸನ್ ಅವರು, ರಾಷ್ಟ್ರ, ಕೇರಳ ರಾಜ್ಯ ಪ್ರಶಸ್ತಿ, ಫಿಲ್ಮ್ ಫೆರ್ ಪ್ರಶಸ್ತಿಗಳನ್ನು ಪಡೆದಿದ್ದಾರೆ. ನಟನಾಗಿ, ಬರಹಗಾರನಾಗಿ ಈ ಗೌರವ ಸ್ವೀಕರಿಸಿದ್ದಾರೆ.
ಇದನ್ನೂ ಓದಿ: ದೌರ್ಜನ್ಯ ಪ್ರಕರಣ: ಮಲಯಾಳಂ ನಟ ದಿಲೀಪ್ ನಿರ್ದೋಷಿ; ಕೋರ್ಟ್ ತೀರ್ಪು
ಶ್ರೀನಿವಾಸನ್ ಅವರ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ. ಮಕ್ಕಳಾದ ವಿನೀತ್ ಹಾಗೂ ಧ್ಯಾನ್ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ವಿನೀತ್ ನಿರ್ದೇಶನದ ‘ಹೃದಯಪೂರ್ವಂ’ ಸೂಪರ್ ಹಿಟ್ ಆಯಿತು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ರಂದು ಪ್ರಕಟಿಸಲಾಗಿದೆ – 11:05 am, ಶನಿ, 20 ಡಿಸೆಂಬರ್ 25