ಕಲಬುರಗಿ/ಯಾದಗಿರಿ, (ಮಾರ್ಚ್ 03): ತಮ್ಮ ವಿರುದ್ಧ ದಾಖಲಾಗಿರುವ ಫೋಕ್ಸೋ ಪ್ರಕರಣ (ಪೋಕ್ಸೋ ಪ್ರಕರಣ) ರದ್ದು ಕೋರಿ ಯಾದಗಿರಿಯ ಮಹಲ್ ರೋಜಾ ಮಲ್ಲಿಕಾರ್ಜುನ ಮುತ್ಯಾ (ಮಲ್ಲಿಕಾರ್ಜುನ ಮುತ್ಯಾ) ಸಲ್ಲಿಸಿದ್ದ ಅರ್ಜಿಯನ್ನು ಸಲ್ಲಿಸಿದ್ದಾರೆ. ಬಾಲಕಿ ಜತೆ ಅನುಚಿತವಾಗಿ ವರ್ತಿಸಿದ ವೈರಲ್ ಬೆನ್ನಲ್ಲೇ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಫೋಕ್ಸೋ ಪ್ರಕರಣ ದಾಖಲಾಗಿದ್ದು, ಬಳಿಕ ಅಜ್ಞಾತ ಸ್ಥಳದಿಂದಲೇ ತಮ್ಮ ವಕೀಲರ ಮೂಲಕ ಪ್ರಕರಣ ರದ್ದುಕೋರಿ ಕಲಬುರಗಿ ಹೈಕೋರ್ಟ್ ಅರ್ಜಿ ಸಲ್ಲಿಸಿದ್ದರು. ಆದರೆ, ಇಂದು (ಮಾರ್ಚ್ 03) ಏಕಾಏಕಿ ಹೈಕೋರ್ಟ್ ನಲ್ಲಿ ಸಲ್ಲಿಸಿರುವ ಅರ್ಜಿಯನ್ನು ಹಿಂಪಡೆದಿದ್ದಾರೆ. ಇದರಿಂದ ಮುತ್ಯಾ ನಡೆ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಇನ್ನೊಂದೆಡೆ ಮಲ್ಲಿಕಾರ್ಜುನ ಮುತ್ಯಾ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಯಾದಗಿರಿ ಜಿಲ್ಲಾ ಮತ್ತು ಪ್ರಧಾನ ಸತ್ರ ನ್ಯಾಯಾಲಯ ಮಾರ್ಚ್ 6ಕ್ಕೆ ಮುಂದೂಡಿದೆ.
ಅರ್ಜಿ ವಾಪಸ್
ಅನುಚಿತವಾಗಿ ವರ್ತಿಸಿದ ವಿಡಿಯೋ ವೈರಲ್ ಆಗಿದ್ದು, ಇದರ ಬೆನ್ನಲ್ಲೇ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಯಾದಗಿರಿ ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದರು. ಇದರ ಬೆನ್ನಲ್ಲೇ ಮಲ್ಲಿಕಾರ್ಜು ಮುತ್ಯಾ ವಿರುದ್ಧ ಪೊಲೀಸರು ಫೋಕ್ಸೋ ಪ್ರಕರಣ ದಾಖಲಿಸಿದ್ದರು. ಕೇಸ್ ದಾಖಲಾಗಿದೆಯೇ ಮುತ್ಯಾ ನಾಪತ್ತೆ, ಅಜ್ಞಾತ ಸ್ಥಳದಿಂದಲೇ ತಮ್ಮ ವಿರುದ್ಧದ ಫೋಕಸ್ ಪ್ರಕರಣವನ್ನು ಕಲಬುರಗಿ ರದ್ದುಗೊಳಿಸಿ ಅರ್ಜಿ ಸಲ್ಲಿಸಿದ್ದರು. ಆದರೆ, ಇಂದು ಏಕಾಏಕಿ ಮುತ್ಯಾ ಪರ ವಕೀಲರು ಅರ್ಜಿಯನ್ನು ಸ್ವೀಕರಿಸಿದ್ದಾರೆ.
ಇದನ್ನೂ ಓದಿ: ಪೋಕ್ಸೋ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ: ಬಾಲಕಿ ಹೇಳಿಕೆ ಮೇಲೆ ಮಲ್ಲಿಕಾರ್ಜುನ ಮುತ್ಯಾನ ಭವಿಷ್ಯ ನಿರ್ಧಾರ
ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
ಇನ್ನೊಂದೆಡೆ ಪೋಕ್ಸೋ ಪ್ರಕರಣ ಸಂಬಂಧ ಮಲ್ಲಿಕಾರ್ಜುನ ಮುತ್ಯಾ, ನಿರೀಕ್ಷಣಾ ಜಾಮೀನು ಕೋರಿ ಯಾದಗಿರಿ ಜಿಲ್ಲಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿದೆ. ಇನ್ನೊಂದೆಡೆ ಇದಕ್ಕೆ ಸರಕಾರದ ಪರ ವಕೀಲರು ಸಹ ಆಕ್ಷೇಪಣೆ ಸಲ್ಲಿಸಿದ್ದಾರೆ. ಹೀಗಾಗಿ. ಜಾಮೀನು ಅರ್ಜಿ ವಿಚಾರಣೆಯನ್ನು ಯಾದಗಿರಿ ಜಿಲ್ಲಾ ಮತ್ತು ಪ್ರಧಾನ ಸತ್ರಾ ನ್ಯಾಯಾಲಯ ಮಾರ್ಚ್ 6ಕ್ಕೆ ಮುಂದೂಡಿದೆ. ಇದರಿಂದ ಮುತ್ಯಾ ಭವಿಷ್ಯ ಮಾರ್ಚ್ 6 ರಂದು ನಿರ್ಧಾರ.
ಬಾಲಕಿ ಹೇಳಿಕೆ ದಾಖಲು
ಮಲ್ಲಿಕಾರ್ಜುನ ಮುತ್ಯಾ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಬಾಲಕಿ ಹೇಳಿಕೆಯನ್ನು ಶಹಾಪುರ ಜೆಎಂಸಿ ಕೋರ್ಟ್ ಜಡ್ಜ್ ದಾಖಲಿಸಿದ್ದಾರೆ. ಬಳಿಕ ಬಾಲಕಿ ಹೇಳಿಕೆಯ ದಾಖಲು ಪ್ರತಿಯನ್ನು ಮುಚ್ಚಿದ ಲಕೋಟೆಯಲ್ಲಿ ತನಿಖಾಧಿಕಾರಿಗೆ ಸಲ್ಲಿಸದಿದ್ದರೆ. ಹೀಗಾಗಿ ಬಾಲಕಿ ನೀಡಿರುವ ಹೇಳಿಕೆ ಮೇಲೆ ಮಲ್ಲಿಕಾರ್ಜುನ ಮುತ್ಯಾನ ಭವಿಷ್ಯ ನಿರ್ಧರ ಆಗಲಿದೆ.
ಮುತ್ಯಾ ವಿರುದ್ಧ ಕೇಸ್ ರದ್ದು ಮಾಡುವಂತೆ ಭಕ್ತರ ಪ್ರತಭಟನೆ
ಇನ್ನೊಂದರಡೆ ಯಾದಗಿರಿ ಹಾಗೂ ಕಲಬುರಗಿ ಜಿಲ್ಲೆಯಲ್ಲಿ ಮಲ್ಲಿಕಾರ್ಜುನ ಮುತ್ಯಾ ಪರ ವಿವಿಧ ಸಮುದಾಯದ ಜನರು ಬೀದಿಗಿಳಿದು ಹೋರಾಟ ನಡೆಸಿದ್ದು, ಮುತ್ಯಾ ವಿರುದ್ಧ ದಾಖಲಾಗಿರುವ ಫೋಕ್ಸೋ ಪ್ರಕರಣವನ್ನು ರದ್ದುಗೊಳಿಸಲಾಗಿದೆ. ಈ ಪ್ರಕರಣದಲ್ಲಿ ಪ್ರಮುಖರು ಹಾಗೂ ಬಿಜೆಪಿ ನಾಯಕರು ಸಹ ಕಾಂಗ್ರೆಸ್ ಅಸಮಾಧಾನ ಹೊರಹಾಕಿದ್ದಾರೆ.
ಕರ್ನಾಟಕ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ರಂದು ಪ್ರಕಟಿಸಲಾಗಿದೆ – 4:29 pm, ಮಂಗಳವಾರ, 3 ಮಾರ್ಚ್ 26