ಮಾಲೂರು ಶಾಸಕರಾಗಿ ನಂಜೇಗೌಡ ಮುಂದುವರಿಕೆ: ಮರು ಎಣಿಕೆಯಲ್ಲೂ ‘ಕೈ’ ನಾಯಕನದ್ದೇ ಮೇಲುಗೈ

ಮಾಲೂರು ಶಾಸಕರಾಗಿ ನಂಜೇಗೌಡ ಮುಂದುವರಿಕೆ: ಮರು ಎಣಿಕೆಯಲ್ಲೂ ‘ಕೈ’ ನಾಯಕನದ್ದೇ ಮೇಲುಗೈ


ಕೋಲಾರ, ಫೆಬ್ರವರಿ 05: ಮಾಲೂರು ವಿಧಾನಸಭಾ ಕ್ಷೇತ್ರದ ಮತ ಮರುಎಣಿಕೆ ಕಾರ್ಯದಲ್ಲಿಯೂ ಕಾಂಗ್ರೆಸ್ನ ಹಾಲಿ ಶಾಸಕ ಕೆ.ವೈ. ನಂಜೇಗೌಡ ಮೇಲುಗೈ ಸಾಧಿಸಿದ್ದಾರೆ. ಮರುಏಣಿಕೆ ನಡೆಸಿ, ಅಧಿಕಾರಿಗಳು ಮಾಹಿತಿ ಸಲ್ಲಿಸಿದ್ದರು. ಹೀಗಾಗಿ ನಂಜೇಗೌಡ ಅವರೇ ಮಾಲೂರು ಕ್ಷೇತ್ರದ ಶಾಸಕರಾಗಿ ಮುಂದುವರಿಯುತ್ತಾರೆ ಎಂದು ತಿಳಿಸಿದ್ದಾರೆ.

2023ರಲ್ಲಿ ನಡೆದಿದ್ದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಂಜುನಾಥಗೌಡ ಕಾಂಗ್ರೆಸ್ ಅಭ್ಯರ್ಥಿ ಕೆ.ವೈ.ನಂಜೇಗೌಡ 248 ಮತಗಳ ಅಂತರದಲ್ಲಿ ಸ್ಪರ್ಧಿಸಿದ್ದರು. ಆದರೆ, ಮತ ಎಣಿಕೆಯಲ್ಲಿ ಲೋಪವಾಗಿದೆ ಎಂದು ಆರೋಪಿಸಿದ್ದಾರೆ ಮಂಜುನಾಥ್ ಗೌಡ ನಂಜೇಗೌಡ ಅವರ ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ ಕೋರ್ಟ್ ಮೆಟ್ಟಿಲೇರಿದ್ದರು. ಆ ಬಳಿಕ ಕೋರ್ಟ್ ಸೂಚನೆಯಂತೆ ಕೋಲಾರದ ತೋಟಗಾರಿಕೆ ವಿಶ್ವವಿದ್ಯಾಲಯದಲ್ಲಿ ನವೆಂಬರ್ 11 ರಂದು ಒಟ್ಟು 18 ಸುತ್ತು ಮರುಮತ ಎಣಿಕೆ ಕಾರ್ಯ ನಡೆದಿತ್ತು. ಬಳಿಕ ಫಲಿತಾಂಶವನ್ನು ಚುನಾವಣಾ ಆಯೋಗ ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಿತ್ತು.

ಇದನ್ನೂ ಓದಿ: ಮಾಲೂರು ಕ್ಷೇತ್ರದ ಮರುಮತ ಎಣಿಕೆ ಕಾರ್ಯ ಅಂತ್ಯ; ಆದರೂ ತೃಪ್ತಿಯಾಗಿಲ್ಲ ಎಂದ ಬಿಜೆಪಿ ಪರಾಜಿತ ಅಭ್ಯರ್ಥಿ

ಆದರೆ ಮಾಜಿ ಶಾಸಕ ಮಂಜುನಾಥ ಗೌಡ ಮರು ಎಣಿಕೆಯ ಬಗ್ಗೆಯೂ ಅಸಮಾಧಾನ ಹೊರಹಾಕಿದ್ದರು. ಈ ಪ್ರಶ್ನೆಗಳಿಗೆ ನನಗೆ ಉತ್ತರ ಸಿಕ್ಕಿಲ್ಲ. ಅಧಿಕಾರಿಗಳು ಪ್ರೊಸಿಜರ್ ಲ್ಯಾಪ್ಸ್ ಇದೆ. ಸಂಪೂರ್ಣ ವಿವಿ ಪ್ಯಾಟ್ ಗಳನ್ನು ಎಣಿಸಬೇಕಿತ್ತು. ಆದರೆ ಕೇವಲ ಐದು ವಿವಿ ಪ್ಯಾಟ್ ಮಾತ್ರ ಎಣಿಕೆ ಮಾಡಲಾಗಿದೆ. ಚುನಾವಣೆ ಮರುಎಣಿಕೆ ವಿರುದ್ಧ ನನ್ನ ಕಾನೂನು ಹೋರಾಟ ಮುಂದುವರಿಯಲಿದೆ. ಸುಪ್ರೀಂ ಕೋರ್ಟ್ ಅರ್ಜಿದಾರರ ಮನವಿಯನ್ನು ಪರಿಗಣಿಸಿ ಎಂದು ಹೇಳಿದೆ. ಆದರೆ ನನ್ನ ಮನವಿಗೆ ಪ್ರಾಧಾನ್ಯತೆ ಸಿಕ್ಕಿಲ್ಲ ಎಂದು ಆರೋಪಿಸಿದ್ದರು. ಇತ್ತ ನಂಜೇಗೌಡ ಮಾತ್ರ ಮರು ಎಣಿಕೆಯಲ್ಲಿಯೂ ತಾವೇ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.

ರಂದು ಪ್ರಕಟಿಸಲಾಗಿದೆ – 3:56 pm, ಗುರುವಾರ, 5 ಫೆಬ್ರವರಿ 26



Source link

Leave a Reply

Your email address will not be published. Required fields are marked *