Headlines

ಮಂಗಳೂರಿನಲ್ಲಿ ಕಾರಿನಿಂದ ಗುದ್ದಿ ಕೊಲೆಗೆ ಯತ್ನ: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಮಂಗಳೂರಿನಲ್ಲಿ ಕಾರಿನಿಂದ ಗುದ್ದಿ ಕೊಲೆಗೆ ಯತ್ನ: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ


ಮಂಗಳೂರಿನಲ್ಲಿ ಕಾರಿನಿಂದ ಗುದ್ದಿ ಕೊಲೆಗೆ ಯತ್ನ: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಮಂಗಳೂರು, (ಮಾರ್ಚ್ 17): ಹಣದ ವಿಚಾರಕ್ಕೆ ಕಾರಿನಿಂದ ಗುದ್ದಿ ವ್ಯಕ್ತಿಯನ್ನು ಹತ್ಯೆ ಯತ್ನ ನಡೆದಿರುವ ಮಂಗಳೂರು ಆರ್ಯಸಮಾಜ ರಸ್ತೆಯಲ್ಲಿ ನಡೆದಿದೆ. ಭೂವ್ಯವಹಾರಕ್ಕೆ ಸಂಬಂಧಿಸಿ ಹಣದ ವ್ಯಾಜ್ಯದ ಕೋಪದಲ್ಲಿ ಮಂಗಳೂರಿನ ಪಳ್ನೀರ್ ನಿವಾಸಿ ಮಹಮ್ಮದ್ ಷರೀಫ್ ಎಂಬಾತ ಕಾರಿನಿಂದ ಮೋಹನ್ ದಾಸ್ ಶೆಟ್ಟಿಗೆ ಗುದ್ದಿದ್ದು, ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಸುರತ್ಕಲ್‌ನ ಕಾನ ಮತ್ತು ವಾಮಂಜೂರಿನಲ್ಲಿ ಆರೋಪಿ ಮಹಮ್ಮದ್ ಷರೀಫ್ ಸುಮಾರು 2 ಕೋಟಿ ರೂ. ಹಣವನ್ನು ಹೂಡಿಕೆ ಮಾಡಿದ್ದ. ಆದರೆ ಮೋಹನ್ ದಾಸ್ ಶೆಟ್ಟಿ ಮೋಸ ಮಾಡಿರುವ ಸಿಟ್ಟಿನಲ್ಲಿ ಆತ ಸ್ಕೂಟರ್ ನಲ್ಲಿ ತೆರಳುವಾಗ ಮಹಮ್ಮದ್ ಷರೀಫ್ ಕಾರಿನಿಂದ ಗುದ್ದಿ ಕೊಲೆ ಯತ್ನ ನಡೆಸಿದ್ದಾನೆ. ಈ ಸಂಬಂಧ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದ್ದು, ಸದ್ಯ ಮಹಮ್ಮದ್ ಷರೀಫ್ ಅವರನ್ನು ಬಂಧಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *