ವಿಮಾನದಲ್ಲಿ ಬಾಂಬ್ ಎಂದು ಬರೆದು ವ್ಯಕ್ತಿಯೊಬ್ಬನ ಹುಚ್ಚಾಟ
ಬೆಂಗಳೂರು, ಅಕ್ಟೋಬರ್ 19: ದುಬೈನಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಇಂಡಿಗೋ ವಿಮಾನ (ಸಂಖ್ಯೆ 6E4814) ನಲ್ಲಿ (ಇಂಡಿಗೋ ಫ್ಲೈಟ್) ನಡೆದ ಘಟನೆಯೊಂದು ಪ್ರಯಾಣಿಕರ ಆತಂಕಕ್ಕೆ ಎಡೆಮಾಡಿತ್ತು. ಶನಿವಾರ (ಅ.18) ಮಧ್ಯರಾತ್ರಿ ನಡೆದ ಘಟನೆಯಲ್ಲಿ, ಒಬ್ಬ ಪ್ರಯಾಣಿಕನು ವಿಮಾನದ ಬಾತ್ ರೂಮ್‌ನಲ್ಲಿ ‘ಬಾಂಬ್’ (ಬಾಂಬ್) ಎಂದು ಪೆನ್ನಿಂದ ಬರೆದಿದ್ದಾನೆ. ಈ ಬರಹವನ್ನು ನೋಡಿರುವ ವಿಮಾನ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ನಂತರ ಪರಿಶೀಲನೆ ನಂತರ ಆತಂಕ ಪಡುವ ಸಂಗತಿಯಿಲ್ಲವೆಂದು ತಿಳಿದ ಪ್ರಯಾಣಿಕರು ಮತ್ತು ಸಿಬ್ಬಂದಿ ನಿಟ್ಟುಸಿರು ಬಿಟ್ಟರು.
ಮಧ್ಯರಾತ್ರಿ ಬೆಂಗಳೂರಿನಲ್ಲಿ ವಿಮಾನದ ಎಮರ್ಜೆನ್ಸಿ ಲ್ಯಾಂಡಿಂಗ್
ಸುರಕ್ಷತೆಯ ದೃಷ್ಟಿಯಿಂದ ಬೆಂಗಳೂರಿನ ಬದಲಿಗೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಿರುಗಿಸಲಾಯಿತು. ಮಧ್ಯರಾತ್ರಿ ವಿಮಾನ ಎಮರ್ಜೆನ್ಸಿ ಲ್ಯಾಂಡಿಂಗ್ ಆಗಿದ್ದು, ಏರ್ಪೋರ್ಟ್ ಸುರಕ್ಷತಾ ಸಿಬ್ಬಂದಿ ತಕ್ಷಣ ಕ್ರಮ ಕೈಗೊಂಡಿದ್ದಾರೆ. 168 ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದ ನಂತರ ಸಂಪೂರ್ಣ ವಿಮಾನ ಮತ್ತು ಪ್ರಯಾಣಿಕರ ಪರಿಶೀಲನೆ ನಡೆಸಲಾಯಿತು, ಯಾವುದೇ ಸ್ಫೋಟಕ ವಸ್ತುವಿಲ್ಲ.
ಅಪಾವಿಲ್ಲವೆಂದು ತಿಳಿದ ಬಳಿಕ ಪ್ರಯಾಣಿಕರು ಮತ್ತು ಸಿಬ್ಬಂದಿ ನಿಟ್ಟುಸಿರು ಬಿಟ್ಟಿದ್ದಾರೆ. ಹುಚ್ಚಾಟದಿಂದ ಪ್ರಯಾಣಿಕರಲ್ಲಿಯೂ ಆತಂಕ ಹುಟ್ಟಿಸಿ, ಬೆಂಗಳೂರಿನಲ್ಲಿ ತುರ್ತು ಲ್ಯಾಂಡಿಂಗ್ ಮಾಡಿದ ವ್ಯಕ್ತಿ ಯಾರೆಂದು ತಿಳಿದು ಬಂದಿಲ್ಲ. ವ್ಯಕ್ತಿಯ ಕುರಿತು ಮಾಹಿತಿ ಸಿಕ್ಕಲ್ಲಿ ತಕ್ಷಣ ಕ್ರಮ ಕೈಗೊಳ್ಳಲಾಗುವುದು.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.