Headlines

ಮಂಡ್ಯ: ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿ ಹೊಡೆದ ಕಾರು; ಮೂವರು ದುರ್ಮರಣ

ಮಂಡ್ಯ: ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿ ಹೊಡೆದ ಕಾರು; ಮೂವರು ದುರ್ಮರಣ


ಮಂಡ್ಯ, ಡಿಸೆಂಬರ್ 07: ಕಾರು ಅಪಘಾತದಲ್ಲಿ (ಕಾರು ಅಪಘಾತ) ಮೂವರು ದುರ್ಮರಣ (ಸಾವು) ಇಂತಹ ಘಟನೆ ಜಿಲ್ಲೆಯ ನಾಗಮಂಗಲ ತಾಲೂಕಿನ ನಾಗತಿ ಬಳಿ ನಡೆದಿದೆ. ಕಾರಿನಲ್ಲಿದ್ದ ಚನ್ನೇಗೌಡ(60), ಸರೋಜಮ್ಮ(55) ಮತ್ತು ಜಯಮ್ಮ(70) ಮೃತರು. ಇನ್ನು ಮೃತರು ಚಿಕ್ಕಮಗಳೂರು ಮೂಲದವರು. ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಡೆದದ್ದೇನು?

ಬೆಂಗಳೂರಿನಿಂದ ಚಿಕ್ಕಮಗಳೂರಿನ ಕಡೆಗೆ ಕಾರು ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ತಿರುವಿನಲ್ಲಿ ಡಿವೈಡರ್‌ಗೆ ಡಿಕ್ಕಿಯಾಗಿ ಕಾರು ಪಲ್ಟಿ ಹೊಡೆದಿದೆ. ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸದ್ಯ ಆದಿಚುಂಚನಗಿರಿ ಆಸ್ಪತ್ರೆಗೆ ಮೂವರ ಮೃತದೇಹ ಸ್ಥಳಾಂತರಿಸಲಾಗಿದೆ.

ನಿಂತಿದ್ದ ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು

ನಿಂತಿದ್ದ ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿಯಾಗಿ ಎರಡು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಗದಗ ತಾಲೂಕಿನ ಹರ್ತಿ ಗ್ರಾಮದ ಬಳಿ ತಡರಾತ್ರಿ ನಡೆದಿದೆ. ಬಸವರಾಜ್ ಕಮ್ಮಾರ(35), ಪ್ರಶಾಂತ ಬಡಿಗೇರ್(21) ಮೃತರು.

ಇದನ್ನೂ ಓದಿ: ಚಿಕ್ಕಮಗಳೂರು: ದತ್ತ ಜಯಂತಿ ಬ್ಯಾನರ್ ತೆರವು ವಿಚಾರವಾಗಿ ಗಲಾಟೆ, ಸಖರಾಯಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ

ಮದುವೆ ಆಮಂತ್ರಣ ನೀಡಿ ವಾಪಸ್ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಗದಗ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗದಗ ಗ್ರಾಮಾಂತರ ಠಾಣಾ ಪ್ರಕರಣ ದಾಖಲಾಗಿದೆ.

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು: ಇಬ್ಬರ ಸ್ಥಿತಿ ಗಂಭೀರ

ಇನ್ನು ಮತ್ತೊಂದು ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಹತ್ತನೇ ಮೈಲುಕಲ್ಲು ಗ್ರಾಮದ ಬಳಿ ಮರಕ್ಕೆ ಕಾರು ಡಿಕ್ಕಿ ಹೊಡೆದಿದ್ದು, ನಾಲ್ವರ ಇಬ್ಬರ ಸ್ಥಿತಿ ಗಂಭೀರವಾಗಿದೆ. ಚನ್ನಗಿರಿ ಪೊಲೀಸ್ ಠಾಣಾ ಘಟನೆ ನಡೆದಿದೆ.

ಇದನ್ನೂ ಓದಿ: ‘ಅಪ್ಪ ನಿಮ್ಮ ಪ್ರೀತಿಗೆ ನಾನು ಅರ್ಹಳಲ್ಲ’: 8 ಪುಟದ ಡೆತ್‌ನೋಟ್ ಬರೆದಿಟ್ಟು ಮಗಳು ಆತ್ಮಹತ್ಯೆಗೆ ಶರಣು

ಎಪಿಎಂಸಿ ಕಾರ್ಯದರ್ಶಿ ರವಿಕುಮಾರ್, ಮಂಜುನಾಥ, ತರನಹಳ್ಳಿ ಪರಮೇಶ್ವರಪ್ಪ ಸೇರಿ ನಾಲ್ವರಿಗೆ ಗಾಯನ. ಚನ್ನಗಿರಿ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ರಂದು ಪ್ರಕಟಿಸಲಾಗಿದೆ – 6:01 pm, ಭಾನುವಾರ, 7 ಡಿಸೆಂಬರ್ 25



Source link

Leave a Reply

Your email address will not be published. Required fields are marked *