ಮಂಡ್ಯ ಕೌಟುಂಬಿಕ ಕಲಹಕ್ಕೆ ದಂಪತಿ ಸಾವು; ಮಗುವಿನ ಕತ್ತು ಹಿಸುಕಿದ್ದಾಗ ಪ್ರಜ್ಞೆ ತಪ್ಪಿದ್ದ ಕಂದಮ್ಮ ಪಾರು!

ಮಂಡ್ಯ ಕೌಟುಂಬಿಕ ಕಲಹಕ್ಕೆ ದಂಪತಿ ಸಾವು; ಮಗುವಿನ ಕತ್ತು ಹಿಸುಕಿದ್ದಾಗ ಪ್ರಜ್ಞೆ ತಪ್ಪಿದ್ದ ಕಂದಮ್ಮ ಪಾರು!

ಮಂಡ್ಯ ಕೌಟುಂಬಿಕ ಕಲಹಕ್ಕೆ ದಂಪತಿ ಸಾವು; ಮಗುವಿನ ಕತ್ತು ಹಿಸುಕಿದ್ದಾಗ ಪ್ರಜ್ಞೆ ತಪ್ಪಿದ್ದ ಕಂದಮ್ಮ ಪಾರು!

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ಕೌಟುಂಬಿಕ ಕಲಹದಿಂದ ಮನನೊಂದು ದಂಪತಿ ಸಾವಿಗೆ ಶರಣಾಗಿದ್ದಾರೆ. ಸಾಯುವ ಮುನ್ನ ತಮ್ಮ ಎರಡು ವರ್ಷದ ಮಗುವಿನ ಪ್ರಾಣ ತೆಗೆಯಲು ಯತ್ನಿಸಿದ್ದು, ಮಗು ಪ್ರಜ್ಞೆ ತಪ್ಪಿದಾಗ ಅವರು ನೇಣು ಬಿಗಿದುಕೊಂಡಿದ್ದಾರೆ. ಅದೃಷ್ಟವಶಾತ್, ಮಗು ಪ್ರಾಣಾಪಾಯದಿಂದ ಪಾರಾಗಿದೆ.

ಮಂಡ್ಯ (ಮಾ.09): ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದಲ್ಲಿ ಇಂದು ಬೆಳ್ಳಂಬೆಳಿಗ್ಗೆ ಹೃದಯ ವಿದ್ರಾವಕ ಘಟನೆಯೊಂದು ಸಂಭವಿಸಿದೆ. ಕ್ಷಣಿಕ ಆವೇಶ ಮತ್ತು ಕೌಟುಂಬಿಕ ಕಲಹವು ಒಂದು ಸುಂದರ ಸಂಸಾರವನ್ನು ಮಸಣಕ್ಕೆ ತಳ್ಳಿದೆ. ಪತಿ-ಪತ್ನಿ ಇಬ್ಬರೂ ತಮ್ಮ ಜೀವನವನ್ನು ಕೊನೆಗೊಳಿಸಿಕೊಂಡಿದ್ದು, ಸಾವಿನ ದವಡೆಯಿಂದ ಎರಡು ವರ್ಷದ ಮಗು ಪವಾಡದಂತೆ ಪಾರಾಗಿದೆ.

ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ಹೊಸಕೋಟೆ ಗ್ರಾಮದ ಮೂಲದ ದರ್ಶನ್ ಮತ್ತು ದಿವ್ಯಶ್ರೀ ಮೃತಪಟ್ಟ ದಂಪತಿಗಳು. ಕಳೆದ ಮೂರು ವರ್ಷಗಳ ಹಿಂದೆಯಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಈ ಜೋಡಿ, ಕೆ.ಆರ್.ಪೇಟೆ ಪಟ್ಟಣದ ಜಯನಗರ ಬಡಾವಣೆಯಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದರು. ಸುಂದರವಾದ ಬದುಕು ಕಟ್ಟಿಕೊಳ್ಳಬೇಕಿದ್ದ ಈ ದಂಪತಿಗಳ ನಡುವೆ ಇತ್ತೀಚೆಗೆ ಸಣ್ಣಪುಟ್ಟ ಕೌಟುಂಬಿಕ ವಿಚಾರವಾಗಿ ಭಿನ್ನಾಭಿಪ್ರಾಯಗಳು ಮೂಡಿದ್ದವು ಎನ್ನಲಾಗಿದೆ.

ಇಂದು ಬೆಳಿಗ್ಗೆ ಇಬ್ಬರ ನಡುವೆ ಕಲಹ ವಿಕೋಪಕ್ಕೆ ಹೋಗಿದ್ದು, ಮನನೊಂದ ದಂಪತಿಗಳು ತೀವ್ರ ನಿರ್ಧಾರ ಕೈಗೊಂಡಿದ್ದಾರೆ. ತಾವು ಈ ಸಾಯುವ ಮುನ್ನ ತಮ್ಮ ಎರಡು ವರ್ಷದ ಮಗುವನ್ನೂ ಜೊತೆಗೆ ಕರೆದೊಯ್ಯಲು ನಿರ್ಧರಿಸಿದ ದಂಪತಿಗಳು, ಮಗುವಿನ ಕತ್ತು ಹಿಸುಕಿ ಪ್ರಾಣ ತೆಗೆಯಲು ಯತ್ನಿಸಿದ್ದಾರೆ. ಮಗು ಅಸ್ವಸ್ಥಗೊಂಡು ಪ್ರಜ್ಞೆ ತಪ್ಪಿದಾಗ, ಮಗು ಸಾವನ್ನಪ್ಪಿದೆ ಎಂದು ಭಾವಿಸಿದ ಪೋಷಕರು ನಂತರ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.

ದಂಪತಿಗಳು ಅಂತಿಮ ನಿರ್ಧಾರ ಕೈಗೊಂಡ ನಂತರ ಮನೆಯಲ್ಲಿ ಮಗುವಿನ ಅಳುವಿನ ಧ್ವನಿ ಕೇಳಿ ಬಂದಾಗ ಅಕ್ಕಪಕ್ಕದವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಮತ್ತು ಸ್ಥಳೀಯರು ಪರಿಶೀಲಿಸಿದಾಗ ದಂಪತಿಗಳು ಮೃತಪಟ್ಟಿದ್ದು, ಮಗು ಮಾತ್ರ ಉಸಿರಾಡುತ್ತಿರುವುದು ಕಂಡುಬಂದಿದೆ. ಕೂಡಲೇ ಅಸ್ವಸ್ಥಗೊಂಡಿದ್ದ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಕಂದಮ್ಮ ಪ್ರಾಣಾಪಾಯದಿಂದ ಪಾರಾಗಿದೆ. ಆದರೆ ಕಣ್ಣೆದುರೇ ಪೋಷಕರನ್ನು ಕಳೆದುಕೊಂಡ ಮಗು ಈಗ ಅನಾಥವಾಗಿದೆ.

ವಿಷಯ ತಿಳಿಯುತ್ತಿದ್ದಂತೆಯೇ ಕೆ.ಆರ್.ಪೇಟೆ ಟೌನ್ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮಹಜರು ನಡೆಸಿದ್ದಾರೆ. ದಂಪತಿಗಳ ಇಂತಹ ಕಠಿಣ ನಿರ್ಧಾರಕ್ಕೆ ನಿಖರವಾದ ಕಾರಣವೇನು ಎಂಬುದು ಇನ್ನು ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿ, ತನಿಖೆಯನ್ನು ಮುಂದುವರಿಸಿದ್ದಾರೆ.

ಜೀವನದಲ್ಲಿ ಯಾವುದೇ ಸಮಸ್ಯೆಗಳಿದ್ದರೂ ಸಾವು ಒಂದೇ ಪರಿಹಾರವಲ್ಲ. ಮಾನಸಿಕ ಒತ್ತಡ ಅಥವಾ ಸಮಸ್ಯೆಗಳಿದ್ದಲ್ಲಿ ತಜ್ಞರ ಸಲಹೆ ಪಡೆಯಿರಿ. ಸಹಾಯಕ್ಕಾಗಿ ಸರ್ಕಾರಿ ಸಹಾಯವಾಣಿ ‘ಆರೋಗ್ಯ ಸಹಾಯವಾಣಿ 104’ ಅಥವಾ ‘ಸಹಾಯ್’ ನಂತಹ ಸಂಸ್ಥೆಗಳನ್ನು ಸಂಪರ್ಕಿಸಿ.

Source link

Leave a Reply

Your email address will not be published. Required fields are marked *