ಗೂಡ್ಸ್​​ ವಾಹನದಲ್ಲಿ ಗಾಂಜಾ ಸಾಗಾಟ: ಫಿಲ್ಮಿ ಸ್ಟೈಲ್​​ನಲ್ಲಿ ಖಾಕಿ ರೇಡ್​ ; ಇಬ್ಬರು ಅರೆಸ್ಟ್​​

ಗೂಡ್ಸ್​​ ವಾಹನದಲ್ಲಿ ಗಾಂಜಾ ಸಾಗಾಟ: ಫಿಲ್ಮಿ ಸ್ಟೈಲ್​​ನಲ್ಲಿ ಖಾಕಿ ರೇಡ್​ ; ಇಬ್ಬರು ಅರೆಸ್ಟ್​​


ಮಂಗಳೂರು, ಜನವರಿ 20: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಡ್ರಗ್ಸ್ ದಂಧೆಕೋರರ ಹುಟ್ಟಡಗಿಸುತ್ತಿದ್ದು, ಒಂದೊಂದೇ ಪ್ರಕರಣವನ್ನು ಭೇದಿಸಿ ಆರೋಪಿಗಳನ್ನು ಹೆಡೆಮುರಿ ಕಟ್ಟುವ ಕೆಲಸ ಮಾಡುತ್ತಿದ್ದಾರೆ. ಇತ್ತೀಚೆಗೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದ ಮಂಗಳೂರು ಸಿಸಿಬಿ, 4 ಕೋಟಿ ರೂ. ಮೌಲ್ಯದ ಎಂಡಿಎಂಎ ಡ್ರಗ್ಸ್ ಸಮೇತ ಉಗಾಂಡ ಮೂಲದ ಮಹಿಳೆಯನ್ನು ಬೆಂಗಳೂರಿನಲ್ಲಿ ಬಂಧಿಸಿತ್ತು. ಆ ಬೆನ್ನಲ್ಲೇ ಇದೀಗ ಗೂಡ್ಸ್ ವಾಹನದಲ್ಲಿ ಸಾಗಾಟ ನಡೆಯುತ್ತಿರುವ ಭಾರೀ ಪ್ರಮಾಣದ ಗಾಂಜಾವನ್ನು ಪುತ್ತೂರು ತಾಲೂಕಿನ ಪಡುವನ್ನೂರು ಗ್ರಾಮದ ಸಜಂಕಾಡಿ ಎಂಬಲ್ಲಿ ಸೀಜ್ ಮಾಡಲಾಗಿದೆ.

ಸುಮಾರು 106 ಕೆಜಿ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ ಇದರ ಸುಮಾರು 53 ಲಕ್ಷ ರೂಪಾಯಿಗಳ ಮೌಲ್ಯ ಪ್ರಕರಣ ಸಂಬಂಧ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ನಿವಾಸಿಗಳಾದ ಅಬ್ದುಲ್ ಸಾದಿಕ್ (37) ಮತ್ತು ರಫೀಕ್ ಪಿ. (37) ಎಂಬವರನ್ನು ಬಂಧಿಸಿದ್ದು, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ದೇಗುಲಕ್ಕೆಂದು ಹೋದ ಬಾಲಕ ಕೆರೆಯಲ್ಲಿ ಹೆಣವಾಗಿ ಪತ್ತೆ; ಪ್ರಾಣಿ ದಾಳಿಯೋ? ಕೊಲೆಯೋ?

ನಿನ್ನೆಯೂ ಕಾರ್ಯಾಚರಣೆ ನಡೆಸಿ ಮಾರಣಾಂತಿಕವಾಗಿ ಮಾದಕ ದ್ರವ್ಯ ಸೇವಿಸುತ್ತಿದ್ದ ಕೇರಳ ಮೂಲದ ಯುವಕ ಜೂಡ್ ಮಾಥ್ಯೂ(20) ಎಂಬಾತನನ್ನು ಬಂಧಿಸಿದ್ದರು. ಕೇರಳದ ಎರ್ನಾಕುಲಂ ಮುತೊಲಪುರಂ ನಿವಾಸಿ ಜೂಡ್ ಮಾಥ್ಯೂ ಬೈಕ್‌ನಲ್ಲಿ ಎಂಡಿಎಂಎ ಸಾಗಿಸುತ್ತಿದ್ದ ಪದವು ಗ್ರಾಮದ ಕೈಲಾಸ ಕಾಲೋನಿ ಬಳಿ ದಾಳಿ ನಡೆಸಿದ್ದ ಕದ್ರಿ ಬೈಕ್ ಮತ್ತು ಮಾದಕ ವಸ್ತುವನ್ನು ಜಪ್ತಿ ಮಾಡಲಾಗಿತ್ತು. ಸೀಜ್ ಮಾಡಲಾದ ವಸ್ತುಗಳ ಮೌಲ್ಯ 70 ಸಾವಿರ ಎನ್ನಲಾಗಿತ್ತು, ಈ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರು ಪೆಡ್ಲರ್‌ಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಉಗಾಂಡ ಮೂಲದ ಮಹಿಳೆಯನ್ನು ಮಂಗಳೂರು ಸಿಸಿಬಿ ಪೊಲೀಸರು ಇತ್ತೀಚೆಗಷ್ಟೇ ಬಂಧಿಸಿದ್ದರು. ಜಿಗಣಿ ಉಗಾಂಡದ ಮಹಿಳೆ ಜಲಿಯಾ ಝಲ್ವಾಂಗೊ ಅರೆಸ್ಟ್ ಮಾಡದ ನಂತರ, ಆಕೆ ಬಳಿ ಇದ್ದ 4 ಕೋಟಿ ರೂ. ಮೌಲ್ಯದ ಎಂಡಿಎಂಎ ನ್ಯಾಯಾಲಯವನ್ನು ಜಪ್ತಿ ಮಾಡಲಾಗಿತ್ತು. ಸಿಸಿಬಿ ಎಸ್ಪಿ ಮನೋಜ್ ಕುಮಾರ್ ನೇತೃತ್ವದಲ್ಲಿ ನಡೆದಿದ್ದ ಈ ಕಾರ್ಯಾಚರಣೆ ರಾಜ್ಯಾದ್ಯಂತ ಸುದ್ದಿಯಾಗಿತ್ತು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *