ಮಂಗಳೂರು, ಫೆಬ್ರವರಿ 25: ಮಂಗಳೂರು ಪಲ್ಲಮಜಲು ಬಿ.ಮೂಡ ಗ್ರಾಮದಲ್ಲಿ ಕಳೆದ 17 ವರ್ಷಗಳಿಂದ ಅಕ್ರಮ ಕಲ್ಲು ಗಣಿಗಾರಿಕೆಯಿಂದ ಗ್ರಾಮಸ್ಥರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಗಲು-ರಾತ್ರಿ ನಡೆಯುವ ಬ್ಲಾಸ್ಟಿಂಗ್ನಿಂದ ನೂರಾರು ಮನೆಗಳಲ್ಲಿ ಬಿರುಕು ಬಿದ್ದಿದೆ, ಸರ್ಕಾರಿ, ದೇವಸ್ಥಾನ, ಮಸೀದಿ ಹಾಗೂ ಚರ್ಚ್ ಶಾಲೆಗಳಿಗೆ ಹಾನಿಯಾಗಿದೆ. ಸ್ಫೋಟದಿಂದ ಮತ್ತು ಭಾರೀ ಪ್ರಮಾಣದ ವಾಹನಗಳ ಓಡಾಟದಿಂದ ಜನರಿಗೆ ಆರೋಗ್ಯ ಸಮಸ್ಯೆಗಳು ಎದುರಾಗಿವೆ. ಗಣಿಗಾರಿಕೆ ಪ್ರದೇಶದಲ್ಲಿ ನೀರು ಸಂಗ್ರಹವಾಗಿ ಮಳೆಗಾಲದಲ್ಲಿ ಗ್ರಾಮಕ್ಕೆ ಪ್ರವಾಹದಂತೆ ನುಗ್ಗುತ್ತಿದೆ. ಹಲವು ಬಾರಿ ದೂರು ನೀಡಿದರೂ ಕ್ರಮ ಕೈಗೊಳ್ಳಲಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಸಭೆಯಲ್ಲಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿ ತಕ್ಷಣ ಅಕ್ರಮ ಗಣಿಗಾರಿಕೆ ನಿಲ್ಲಿಸುವಂತೆ ಒತ್ತಾಯಿಸಿದ್ದಾರೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.