ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 1ರ ದಿನಭವಿಷ್ಯ

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 1ರ ದಿನಭವಿಷ್ಯ


ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 1ರ ದಿನಭವಿಷ್ಯ

ಶಿವ ಅಷ್ಟಕವನ್ನು ಪಠಣ ಅಥವಾ ಶ್ರವಣ ಮಾಡುವುದರಿಂದ ನಿಮ್ಮ ಮೇಲಿನ ಆರ್ಥಿಕ ಒತ್ತಡ ನಿವಾರಣೆ ಆಗಲಿದೆ, ದೀರ್ಘ ಕಾಲದಿಂದ ಬಾಕಿ ಉಳಿದ ಕೆಲಸಗಳು ಪೂರ್ಣಗೊಳ್ಳಲಿವೆ.

ಜನ್ಮಸಂಖ್ಯೆ 7 (ಯಾವುದೇ ತಿಂಗಳ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7):

ಕುಟುಂಬದಲ್ಲಿ ಆಗುವಂಥ ಕೆಲವು ಬೆಳವಣಿಗೆಗಳಿಂದ ನಿಮಗೆ ನಿರಾಶೆ ಮೂಡಲಿದೆ. ನೀವು ನೀಡಿದ ಸಲಹೆಗಳಿಂದ ಅನುಕೂಲ ಆಗಲಿದೆ ಎಂದು ಗೊತ್ತಾದರೂ ನಿರ್ಲಕ್ಷ್ಯ ಮಾಡುವವರಿಂದ ಬೇಸರ ಆಗಲಿದೆ. ಮಕ್ಕಳಿಗೆ ಏನು ಆಹಾರ ನೀಡುತ್ತೀರಿ ಎಂಬ ಬಗ್ಗೆ ಸಾಮಾನ್ಯ ದಿನಕ್ಕಿಂತ ಹೆಚ್ಚಿನ ಲಕ್ಷ್ಯವನ್ನು ವಹಿಸಿ. ಉದ್ಯೋಗಸ್ಥರಿಗೆ ಕೆಲವು ತಾಂತ್ರಿಕ ಸಮಸ್ಯೆಗಳು ಎದುರಾಗಲಿವೆ.

ಜನ್ಮಸಂಖ್ಯೆ 8 (ಯಾವುದೇ ತಿಂಗಳ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8):

ಕೆಲಸ- ಕಾರ್ಯ ಪೂರ್ಣ ಮಾಡಲು ವಿಳಂಬ ಆಗಲಿದೆ. ಇಷ್ಟು ಸಮಯದೊಳಗೆ ಕೆಲಸ ಮಾಡಿಕೊಡುವುದಾಗಿ ಮಾತು ನೀಡುವ ಮೊದಲು ಅದು ಸಾಧ್ಯವಾ ಎಂಬ ಬಗ್ಗೆ ಆಲೋಚನೆ ಮಾಡುವುದು ಮುಖ್ಯವಾಗುತ್ತದೆ. ನಿಮ್ಮ ವ್ಯಾಪ್ತಿಯ ಹೊರಗೆ ಇರುವಂಥದ್ದರ ಬಗ್ಗೆ ಖಡಾಖಂಡಿತವಾಗಿ ಅಭಿಪ್ರಾಯಗಳನ್ನು ಹೇಳಲು ಹೋಗಬೇಡಿ. ಭಾವುಕ ಕ್ಷಣಗಳಲ್ಲಿ ನೀವಾಡುವ ಕೆಲವು ಮಾತುಗಳು ಹಾಗೂ ನೀಡುವ ಭರವಸೆಗಳು ಭವಿಷ್ಯದಲ್ಲಿ ಸಮಸ್ಯೆಗಳನ್ನು ತಂದೊಡ್ಡಲಿವೆ.

ಜನ್ಮಸಂಖ್ಯೆ 9 (ಯಾವುದೇ ತಿಂಗಳ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9):

ಹೊಸದಾಗಿ ಕೆಲಸದ ಹುಡುಕಾಟದಲ್ಲಿ ಇರುವವರು ಉದ್ಯೋಗ ಬದಲಾವಣೆಗಾಗಿ ತೀವ್ರವಾದ ಪ್ರಯತ್ನವನ್ನು ಪ್ರಾರಂಭಿಸುವಿರಿ. ಸಿ.ವಿ. ಸಿದ್ಧತೆ ಮಾಡಿಕೊಳ್ಳುವುದು ಹಾಗೂ ಸೋಶಿಯಲ್ ನೆಟ್ ವರ್ಕ್ ಮೂಲಕ ಏನು ರೆಫರೆನ್ಸ್ ಪಡೆದುಕೊಳ್ಳಲು ಸಾಧ್ಯವೋ ಆ ಎಲ್ಲವನ್ನೂ ಒಂದರ ನಂತರ ಒಂದರಂತೆ ಎಂಬ ರೀತಿಯಲ್ಲಿ ತೆಗೆದುಕೊಳ್ಳುವ ಇಂತಹವುಗಳನ್ನು ಮಾಡುವುದಕ್ಕೆ ದಿನದ ಹೆಚ್ಚಿನ ಸಮಯ ಹೋಗಲಿದೆ.

ಲೇಖನ- ಸ್ವಾತಿ ಎನ್.ಕೆ.



Source link

Leave a Reply

Your email address will not be published. Required fields are marked *