ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 2ರ ದಿನಭವಿಷ್ಯ

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 2ರ ದಿನಭವಿಷ್ಯ


ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 2ರ ದಿನಭವಿಷ್ಯ

ಈ ದಿನ ಸಂಜೆ ವೇಳೆ ಮನೆಯ ಹೊಸ್ತಿಲಲ್ಲಿ ಅಥವಾ ದೇವರ ಮನೆಯಲ್ಲಿ ತುಪ್ಪದ ಹಚ್ಚುವುದರಿಂದ ದಾರಿದ್ರ್ಯ ದೂರವಾಗಿ, ಹಣಕಾಸಿನ ಒತ್ತಡದಿಂದ ಹೊರಬರಲು ಅನುಕೂಲವಾಗುತ್ತದೆ.

ಜನ್ಮಸಂಖ್ಯೆ 7 (ಯಾವುದೇ ತಿಂಗಳ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7):

ನಿಮ್ಮ ವೈಯಕ್ತಿಕ ವಿಚಾರಗಳಲ್ಲಿ ಹಾಗೂ ಪ್ರೀತಿ- ಪ್ರೇಮ ಹಾಗೂ ಮದುವೆಗೆ ಸಂಬಂಧಿಸಿದ ಸಂಗತಿಗಳನ್ನು ಮೂರನೇ ವ್ಯಕ್ತಿಗಳು ವಿಪರೀತ ಪ್ರಭಾವ ಬೀರಲು ಪ್ರಯತ್ನಿಸುತ್ತಿದ್ದಾರೆ ಎಂಬ ಸಂಗತಿ ಗಮನಕ್ಕೆ ಬರಲಿದೆ. ಈ ವೇಳೆ ಆದಾಯವನ್ನು ಹೆಚ್ಚು ಮಾಡಿಕೊಳ್ಳುವ ನಾನಾ ರೀತಿಯಲ್ಲಿ ಯೋಜನೆ, ಆಲೋಚನೆ ಶುರು ಆಗಲಿದೆ. ಆಸ್ತಿ ಮಾರಾಟಕ್ಕೆ ಇಟ್ಟಿದ್ದಲ್ಲಿ ಅದಕ್ಕೆ ಬೇಡಿಕೆ ಹೆಚ್ಚಾಗುವ ಸಾಧ್ಯತೆಗಳಿವೆ.

ಜನ್ಮಸಂಖ್ಯೆ 8 (ಯಾವುದೇ ತಿಂಗಳ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8):

ನಿಮ್ಮಲ್ಲಿ ಕೆಲವು ಬಾಡಿಗೆ ಆದಾಯವನ್ನು ಹೆಚ್ಚು ಮಾಡಿಕೊಳ್ಳಲು ಮನೆಯನ್ನೋ ಮಳಿಗೆಯನ್ನೋ ನಿರ್ಮಿಸುವ ಬಗ್ಗೆ ಚಿಂತನೆ ನಡೆಸಿದೆ. ದುರ್ಗಾದೇವಿ ಆರಾಧನೆ ಮಾಡುವುದರಿಂದ ಹಾಗೂ ವಿಷ್ಣು ಸಹಸ್ರನಾಮ ಶ್ರವಣ ಅಥವಾ ಪಠಣ ಮಾಡುವುದರಿಂದ ಆಲೋಚನೆಯಲ್ಲಿ ಸ್ಪಷ್ಟತೆ ಇರುತ್ತದೆ. ಅದೇ ವೇಳೆ ಆತ್ಮವಿಶ್ವಾಸ ಕೂಡ ಹೆಚ್ಚಾಗಲಿದೆ. ಫೋಟೋಗ್ರಫಿಯನ್ನೇ ವೃತ್ತಿ ಮಾಡಿಕೊಂಡಿರುವವರಿಗೆ ಹೊಸ ಅವಕಾಶಗಳು ದೊರೆಯುವ ಸಾಧ್ಯತೆಗಳಿವೆ

ಜನ್ಮಸಂಖ್ಯೆ 9 (ಯಾವುದೇ ತಿಂಗಳ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9):

ಕ್ರೆಡಿಟ್ ಕಾರ್ಡ್ ಹೆಚ್ಚು ಬಳಸುತ್ತೀರಿ ಅಂತಾದಲ್ಲಿ ಅದರ ಬಳಕೆ ಬಗ್ಗೆ ಸರಿಯಾದ ತೀರ್ಮಾನವನ್ನು ಮುಖ್ಯ. ಸ್ನೇಹಿತರು ಅಥವಾ ಸ್ವೀಕರಿಸುವ ಕ್ರೆಡಿಟ್ ಕಾರ್ಡ್ ನಲ್ಲಿ ಸಾಲ ಕೊಡಿಸುವಂತೆ ಕೇಳಲಿದ್ದಾರೆ. ಇನ್ನು ಈ ದಿನ ಬೆಳ್ಳಿ ವಸ್ತುಗಳು ಅಥವಾ ಒಡವೆಗಳನ್ನು ಖರೀದಿಸುವಂಥ ಯೋಗ ನಿಮ್ಮ ಪಾಲಿಗಿದೆ. ಇನ್ನು ನಿಮ್ಮಲ್ಲಿ ಕೆಲವರು ದಾನ- ಧರ್ಮ ಕಾರ್ಯಗಳನ್ನು ಮಾಡಲಿದ್ದೇವೆ.

ಲೇಖನ- ಸ್ವಾತಿ ಎನ್.ಕೆ.



Source link

Leave a Reply

Your email address will not be published. Required fields are marked *