ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 3ರ ದಿನಭವಿಷ್ಯ

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 3ರ ದಿನಭವಿಷ್ಯ


ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 3ರ ದಿನಭವಿಷ್ಯ

ಕಾಳಿಕಾ ದೇವಿ ದೇವಸ್ಥಾನಕ್ಕೆ ತೆರಳಿ ದರ್ಶನ ಹಾಗೂ ನಿಮ್ಮಿಂದ ಏನು ಸೇವೆ ಮಾಡಲು ಸಾಧ್ಯವೋ ಅದನ್ನು ಮಾಡಿಸಿದಲ್ಲಿ ಅಣ್ಣ-ತಮ್ಮ, ಅಕ್ಕ-ತಂಗಿಯರು ಸೋದರ ಸಂಬಂಧಿಗಳ ಮಧ್ಯೆ ವಿರಸ ಏರ್ಪಟ್ಟಿದ್ದಲ್ಲಿ ಅದು ನಿವಾರಣೆ ಆಗಲಿದೆ.

ಜನ್ಮಸಂಖ್ಯೆ 7 (ಯಾವುದೇ ತಿಂಗಳ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7):

ಕೆಲಸಕ್ಕೆ ಹೆಚ್ಚಿನ ಒತ್ತಡ ನಿಮ್ಮ ಮೇಲೆ ಬೀಳಲಿದೆ. ಮೇಲಿಂದ ಮೇಲೆ ಫೋನ್ ಕಾಲ್ಗಳು, ಕೆಲವು ತಾಂತ್ರಿಕ ಸಮಸ್ಯೆಗಳನ್ನು ನೀವೇ ಪರಿಹರಿಸಬೇಕು ಎಂದು ಕೇಳಿಕೊಳ್ಳುವುದು ಬಿಡುವಿಲ್ಲದಷ್ಟು ಕೆಲಸಗಳು ಮೈ ಮೇಲೆ ಬರುವಂತೆ ಮಾಡುತ್ತವೆ. ಹೂಡಿಕೆ ವಿಚಾರಗಳಲ್ಲಿ ದಿಢೀರ್ ನಿರ್ಧಾರಗಳನ್ನು ಮಾಡುವುದಕ್ಕೆ ಹೋಗಬೇಡಿ. ಸ್ವಲ್ಪ ಹಣವನ್ನು ಕೈಯಿಂದ ಕಳೆದುಕೊಳ್ಳುವಂತೆ ಆಗುತ್ತದೆ.

ಜನ್ಮಸಂಖ್ಯೆ 8 (ಯಾವುದೇ ತಿಂಗಳ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8):

ನಿಮಗೆ ಕುಟುಂಬದ ಸದಸ್ಯರು ಯಾರ ಮೇಲಾದರೂ ಆಕ್ಷೇಪ ಇದ್ದಲ್ಲಿ ಅದನ್ನು ನಯವಾಗಿ ಹೇಳಿ ಮುಗಿಸಲು ಪ್ರಯತ್ನಿಸಿ. ನಿಮ್ಮ ಕೆಲವು ಸ್ನೇಹಿತರು ಅನಿರೀಕ್ಷಿತವಾಗಿ ದೊಡ್ಡ ಸಹಾಯವನ್ನು ಮಾಡಲಿದ್ದಾರೆ. ಸಂಗಾತಿಯ ಆರೋಗ್ಯ ವಿಚಾರ ಪ್ರಾಮುಖ್ಯವನ್ನು ಪಡೆಯಲಿದೆ. ಆರಂಭದ ಕೆಲವು ಬೆಳವಣಿಗೆಗಳು ಚಿಂತೆಗೆ ಕಾರಣ ಆಗಲಿವೆ. ವಿದ್ಯಾರ್ಥಿಗಳು ತಮ್ಮ ಪ್ರಾಜೆಕ್ಟ್- ಅಸೈನ್ ಮೆಂಟ್ ಗಳನ್ನು ಏಕಾಗ್ರತೆಯಿಂದ ಪೂರ್ಣಗೊಳಿಸುವ ಕಡೆಗೆ ಲಕ್ಷ್ಯ ನೀಡಿ.

ಜನ್ಮಸಂಖ್ಯೆ 9 (ಯಾವುದೇ ತಿಂಗಳ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9):

ಒಂದು ವೇಳೆ ನೀವೇನಾದರೂ ಪ್ರೀತಿಯಲ್ಲಿ ಇದ್ದೀರಿ ಅಂತಾದಲ್ಲಿ ಸಂಗಾತಿಯ ಕಾಳಜಿಯ ಮಾತುಗಳಿಂದ ಸಂತೋಷ ಆಗಲಿದೆ. ಉದ್ಯೋಗದಲ್ಲಿ ಹಿರಿಯ ಸಹೋದ್ಯೋಗಿಗಳ ಮೆಚ್ಚುಗೆ ಮಾತುಗಳನ್ನು ಕೇಳಿಸಿಕೊಳ್ಳುವ ಯೋಗ ಇದೆ. ವ್ಯಾಪಾರಿಗಳಿಗೆ ಹೊಸ ಒಪ್ಪಂದದ ಚರ್ಚೆ ಯಶಸ್ವಿಯಾಗಲಿದೆ. ಸ್ನೇಹಿತರ ಜೊತೆಗೆ ಅನವಶ್ಯಕ ವಾದ- ವಿವಾದ ಮಾಡಿಕೊಳ್ಳಬೇಡಿ. ಆಹಾರದಲ್ಲಿ ವಿಪರೀತ ಸಿಹಿ– ವಿಪರೀತ ಕಾರದ ಪದಾರ್ಥ ಎರಡೂ ಬೇಡ.

ಲೇಖನ- ಸ್ವಾತಿ ಎನ್.ಕೆ.



Source link

Leave a Reply

Your email address will not be published. Required fields are marked *